ತುಮಕೂರು: ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಪಾತಗಾನಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಪಾತಗಾನಹಳ್ಳಿ ಗ್ರಾಮದ ಬಸ್ ನಿಲ್ದಾಣದಲ್ಲಿ ವಿಬಿ-ಜಿರಾಮ್ ಜಿ ಯೋಜನೆಯಡಿ ಜಾಬ್ ಕಾರ್ಡ್ ಮೇಳ ಹಾಗೂ ಕೂಲಿ ಆಧಾರಿತ ಕಾಮಗಾರಿಗಳ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಪಾತಗಾನಹಳ್ಳಿ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಉಮೇಶ್, ವಿಬಿ-ಜಿರಾಮ್‌ಜಿ ಯೋಜನೆಯು ಜುಲೈ ೧ರಿಂದ ಜಾರಿಗೆ ಬಂದಿದ್ದು, ಈ ಯೋಜನೆಯಡಿ ಪ್ರತಿ ಕುಟುಂಬಕ್ಕೆ ವರ್ಷಕ್ಕೆ ೧೨೫ ದಿನಗಳ ಗ್ಯಾರಂಟಿ ಕೆಲಸ ನೀಡಲಾಗುವುದು. ಇದರಿಂದಾಗಿ ಪ್ರತಿ ಕುಟುಂಬ ವರ್ಷಕ್ಕೆ ೪೭,೭೫೦/- ರೂ.ಗಳ ಆದಾಯವನ್ನು ಸ್ಥಳೀಯವಾಗಿಯೇ ಕೆಲಸ ಮಾಡುವ ಮೂಲಕ ಪಡೆಯಬಹುದಾಗಿದೆ ಎಂದರು.
ಕೊರಟಗೆರೆ ತಾಲ್ಲೂಕು ಬರಪೀಡಿತ ತಾಲ್ಲೂಕ್ಕಾಗಿದ್ದು, ಇಲ್ಲಿನ ಗ್ರಾಮೀಣ ಜನತೆ ಕೆಲಸಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗದಂತೆ ತಡೆಗಟ್ಟುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ಯೋಜನೆಯಡಿ ಸಮುದಾಯ ಹಾಗೂ ವೈಯಕ್ತಿಕ ಕಾಮಗಾರಿಗಳು ಸೇರಿ ಒಟ್ಟು ೩೧೮ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದ್ದು ಗ್ರಾಮೀಣ ಜನತೆ ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಪಿಡಿಒ ತಿಳಿಸಿದರು.
ಕೊರಟಗೆರೆ ತಾಲ್ಲೂಕು ಐಇಸಿ ಸಂಯೋಜಕರಾದ ಟಿ.ಕೆ.ವಿನುತ್ ಮಾತನಾಡಿ, ಆಗಸ್ಟ್ ೧೫ರಿಂದ ಎಲ್ಲಾ ಗ್ರಾಮ ಪಂಚಾಯಿತಿವ್ಯಾಪ್ತಿಯಲ್ಲಿ ಜಾಬ್ ಕಾರ್ಡ್ ಮೇಳ ಹಮ್ಮಿಕೊಂಡಿದ್ದು, ಪ್ರತೀ ಅರ್ಹ ಕುಟುಂಬಗಳಿಗೆ ಹೊಸ ಜಾಬ್ ಕಾರ್ಡ್ಗಳನ್ನು ನೀಡುವ ಮೂಲಕ ವಲಸೆ ತಡೆಗಟ್ಟುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪಾತಗಾನಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮುನಿರಾಜು, ಜಿಕೆ ಎಂ ಪುಟ್ಟಲಕ್ಷ÷್ಮಮ್ಮ ಸೇರಿದಂತೆ ಮಹಿಳಾ ಸ್ವಸಹಾಯ ಸಂಘದ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು.
(Visited 1 times, 1 visits today)



