ತುಮಕೂರು: ನಗರದ ಮಹಾನಗರ ಪಾಲಿಕೆಯ ೧೧ನೇ ವಾರ್ಡ್ ವ್ಯಾಪ್ತಿಗೆ ಒಳಪಡುವ ಗಂಗಸAದ್ರ ಅಮಾನಿಕೆರೆಯಲ್ಲಿ ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ೧ ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಕೆರೆ ಏರಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಜಿ.ಬಿ. ಜ್ಯೋತಿಗಣೇಶ್ ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಟೂಡಾ ವತಿಯಿಂದ ಕೈಗೊಳ್ಳಲಾಗಿರುವ ಗಂಗಸAದ್ರ ಕೆರೆ ಏರಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ನಂತರ ಮಾತನಾಡಿದ ಶಾಸಕ ಜ್ಯೋತಿಗಣೇಶ್ ಅವರು, ಗಂಗಸAದ್ರ ಅಮಾನಿಕೆರೆ ಏರಿ ಅಭಿವೃದ್ಧಿಯನ್ನು ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ೧ ಕೋಟಿ ರೂ. ಅನುದಾನದಿಂದ ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ್ದು, ಶೀಘ್ರವಾಗಿ ಗುಣಮಟ್ಟದಿಂದ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ತುಮಕೂರು ನಗರದ ಕುಡಿಯುವ ನೀರಿನ ಬವಣೆ ನೀಗಿಸಲು ಗಂಗಸAದ್ರ ಪ್ರಮುಖ ಕೆರೆಯಾಗಿದೆ. ಈ ಭಾಗದಲ್ಲಿ ಮಹಾನಗರ ಪಾಲಿಕೆ ವತಿಯಿಂದ ಜಲಸಂಗ್ರಹಾಗಾರ ನಿರ್ಮಾಣ ಮಾಡುವ ಸಂಬAಧ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ಗಂಗಸAದ್ರ ಕೆರೆಯಲ್ಲಿ ಜಲಸಂಗ್ರಹಾಗಾರ ನಿರ್ಮಾಣವಾದರೆ ತುಮಕೂರು ದಕ್ಷಿಣ ಭಾಗದಲ್ಲಿ ವಾಸಿಸುತ್ತಿರುವ ಸಾರ್ವಜನಿಕರಿಗೆ ಕುಡಿಯುವ ನೀರಿಗೆ ಯಾವುದೇ ರೀತಿಯ ಸಮಸ್ಯೆ ಉಂಟಾಗುವುದಿಲ್ಲ. ಈ ಭಾಗವು ಅತ್ಯಂತ ಕ್ಷಿಪ್ರವಾಗಿ ಬೆಳೆಯುತ್ತಿದ್ದು, ಇಲ್ಲಿನ ಜನತೆಗೆ ಕುಡಿಯುವ ನೀರಿಗಾಗಿ ಸಮಸ್ಯೆ ಉಂಟಾಗುತ್ತಿದೆ. ಕುಡಿಯುವ ನೀರಿಗಾಗಿ ಟೂಡಾ ಬೋರ್‌ವೆಲ್‌ಗಳನ್ನೆ ಅವಲಂಬಿಸಬೇಕಾಗಿದೆ. ಇರುವ ಓವರ್‌ಹೆಡ್ ಟ್ಯಾಂಕ್‌ಗೆ ನೀರು ತುಂಬಿಸಲು ಸಮಸ್ಯೆಯಾಗುತ್ತಿದೆ. ಹಾಗಾಗಿ ಈ ಕೆರೆಯಲ್ಲಿ ಜಲಸಂಗ್ರಹಾಗಾರ ನಿರ್ಮಾಣವಾದರೆ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ನೋಡಿಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಮುಖಂಡರುಗಳಾದ ಮಹೇಶ್, ರೂಪೇಶ್, ಬಾವಿಮನೆ ಕುಮಾರ್, ಮಾಜಿ ಕೌನ್ಸಿಲರ್ ಹನುಮಂತರಾಯಪ್ಪ, ಸಿದ್ದರಾಜು, ವಿಜಯ್, ಕುಮಾರ್, ಲೋಕೇಶ್. ಟೂಡಾ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸೋಮನಾಥ್, ಸಹಾಯಕ ಎಂಜಿನಿಯರ್ ಜಗದೀಶ್, ಆದರ್ಶ ಮತ್ತಿತರರು ಉಪಸ್ಥಿತರಿದ್ದರು.

(Visited 1 times, 1 visits today)