ತುಮಕೂರು: ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ ೫ರಂದು ಗುಬ್ಬಿ ಪಟ್ಟಣದಲ್ಲಿ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮ ನಡೆಯಲಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಇಂದು ಗುಬ್ಬಿ ವೀರಣ್ಣ ಕಲಾಮಂದಿರಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಅಗತ್ಯ ಮೂಲಭೂತ ಸೌಲಭ್ಯಗಳು, ಕುಡಿಯುವ ನೀರು, ಆಸನ ವ್ಯವಸ್ಥೆ, ವಾಹನ ನಿಲುಗಡೆ ಹಾಗೂ ವಿವಿಧ ಇಲಾಖೆಗಳು ಸ್ಥಾಪಿಸುವ ಮಳಿಗೆಗಳನ್ನು ಪರಿಶೀಲಿಸಿದರು.
ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿರುವುದರಿಂದ ಯಾವುದೇ ರೀತಿಯ ಅನಾನುಕೂಲತೆ ಉಂಟಾಗದAತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸಾರ್ವಜನಿಕರ ಅಹವಾಲು ಸ್ವೀಕಾರ ಹಾಗೂ ನೋಂದಣಿ ವ್ಯವಸ್ಥೆ, ವಿವಿಧ ಇಲಾಖೆಗಳ ಸಮನ್ವಯ ಮತ್ತು ಕಾರ್ಯಕ್ರಮದ ಸುಗಮ ನಿರ್ವಹಣೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಂಬAಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಅಹವಾಲುಗಳನ್ನು ಸ್ವೀಕರಿಸಲು ಪ್ರತ್ಯೇಕ ಕೌಂಟರ್‌ಗಳ ವ್ಯವಸ್ಥೆ, ಸಾರ್ವಜನಿಕರ ಅನುಕೂಲಕ್ಕಾಗಿ ಅಂತರ್ಜಾಲ ಸೌಲಭ್ಯ ಹಾಗೂ ಕಾರ್ಯಕ್ರಮದ ನೇರ ಪ್ರಸಾರಕ್ಕೆ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸುವಂತೆ ಸೂಚಿಸಿದರು. ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಮನ್ವಯದಿಂದ ಕಾರ್ಯನಿರ್ವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ನಿರ್ದೇಶನ ನೀಡಿದರು.
ಪ್ರಜಾ ಸೇವಾ ಆಂದೋಲನದ ಮೂಲಕ ಸಾರ್ವಜನಿಕರ ಅಹವಾಲುಗಳನ್ನು ನೇರವಾಗಿ ಆಲಿಸಿ, ಅರ್ಹ ಫಲಾನುಭವಿಗಳಿಗೆ ವಿವಿಧ ಸರ್ಕಾರಿ ಸೇವೆಗಳು ಹಾಗೂ ಸೌಲಭ್ಯಗಳನ್ನು ತ್ವರಿತವಾಗಿ ಒದಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸಾರ್ವಜನಿಕರಿಂದ ಸ್ವೀಕರಿಸಲಾಗುವ ಅಹವಾಲು ಅರ್ಜಿಗಳನ್ನು ಸಮರ್ಪಕವಾಗಿ ನೋಂದಣಿ ಮಾಡಿಕೊಂಡು, ಸಂಬAಧಿಸಿದ ಇಲಾಖೆಗಳ ಮೂಲಕ ತ್ವರಿತವಾಗಿ ವಿಲೇವಾರಿ ಮಾಡುವ ಕುರಿತು ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.
ಪರಿಶೀಲನೆ ವೇಳೆ ಗುಬ್ಬಿ ತಹಶೀಲ್ದಾರ್ ಆರತಿ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
(Visited 1 times, 1 visits today)





