ತುಮಕೂರು: ತಾಲ್ಲೂಕಿನ ನೆಲಹಾಳ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂದಿಹಳ್ಳಿ ಗ್ರಾಮದ ಮಾರಮ್ಮನ ದೇವಸ್ಥಾನದ ಆವರಣದಲ್ಲಿ ವಿಬಿ ಜಿ ರಾಮ್ ಜಿ ಯೋಜನೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಜಾಗೃತಿ ಅಭಿಯಾನ ಹಾಗೂ ಜಾಬ್ ಕಾರ್ಡ್ ಮೇಳವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ ಜಿ. ಮಾತನಾಡಿ, ಯೋಜನೆಯ ಉದ್ದೇಶ, ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿದರು.
ಉದ್ಯೋಗ ಖಾತ್ರಿ ಕೆಲಸ ಪಡೆಯಲು ಅಗತ್ಯವಿರುವ ಗ್ರಾಮೀಣ ರೋಜ್ಗಾರ್ ಗ್ಯಾರಂಟಿ ಕಾರ್ಡ್(ಜಾಬ್ ಕಾರ್ಡ್) ಪಡೆಯುವ ವಿಧಾನ, ಕುಟುಂಬ ನೋಂದಣಿ ಹಾಗೂ ಉದ್ಯೋಗಕ್ಕಾಗಿ ಬೇಡಿಕೆ ಸಲ್ಲಿಸುವ ಪ್ರಕ್ರಿಯೆ ಕುರಿತು ತಿಳಿಸಿದರು.
ಜಾಬ್ ಕಾರ್ಡ್ ಹೊಂದಿರುವ ಕುಟುಂಬಗಳು ಯೋಜನೆಯಡಿ ಲಭ್ಯವಿರುವ ಉದ್ಯೋಗಾವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಹಾಗೂ ಜಾಬ್ ಕಾರ್ಡ್ ಪಡೆಯದ ಅರ್ಹ ಕುಟುಂಬಗಳು ಮೇಳದ ಪ್ರಯೋಜನ ಪಡೆದು ನೋಂದಣಿ ಮಾಡಿಸಿಕೊಳ್ಳುವಂತೆ ಗ್ರಾಮಸ್ಥರಿಗೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ವೈ.ಎನ್. ಕಿಟ್ಟಪ್ಪ, ತಾಲ್ಲೂಕು ಐಇಸಿ ಸಂಯೋಜಕರು, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ರಂಗನಾಥಪ್ಪ, ನಂದಿಹಳ್ಳಿ ಗ್ರಾಮದ ಈಶ್ವರಯ್ಯ, ತಾಂತ್ರಿಕ ಸಂಯೋಜಕ ಅನ್ನಪೂರ್ಣ, ಎನ್ಆರ್ಎಲ್ಎಂ ನಂದಿನಿ, ಡಿಇಓ ಕರಿಯಣ್ಣ ಡಿ.ಸಿ., ಗ್ರಾಮ ಪಂಚಾಯತಿ ಸಿಬ್ಬಂದಿ, ಸಾರ್ವಜನಿಕರು ಹಾಗೂ ಕೂಲಿಕಾರರು ಭಾಗವಹಿಸಿದ್ದರು.
ಕಾರ್ಯಕ್ರಮದ ಅಂಗವಾಗಿ ಯೋಜನೆಯ ಕುರಿತು ಕರಪತ್ರ ಹಾಗೂ ಮಾಹಿತಿ ಸಾಮಗ್ರಿಗಳನ್ನು ವಿತರಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.
(Visited 1 times, 1 visits today)





