ಚಿಕ್ಕನಾಯಕನಹಳ್ಳಿ: ರೈತರ ವಿಕಸನಕ್ಕೆಂದೇ ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ ಸಾಕಷ್ಟು ವೈಯಕ್ತಿಕ ಕಾಮಗಾರಿಗಳು ಹಾಗೂ ಸಮುದಾಯ ಕಾಮಗಾರಿಗಳನ್ನು ತೆಗೆದುಕೊಳ್ಳಬಹುದಾಗಿದೆ. ಎಲ್ಲಾ ಅರ್ಹ ರೈತರು ತಪ್ಪದೇ ಈ ಯೋಜನೆಯ ಸೌಲಭ್ಯಗಳನ್ನು ಪಡೆದುಕೊಳ್ಳುವ ಮೂಲಕ ಸದೃಢ ಜೀವನವನ್ನು ಕಟ್ಟುಕೊಳ್ಳಿ ಎಂದು ಸಾರ್ವಜನಿಕರಿಗೆ ಪಂಚಾಯತಿ ಕಾರ್ಯದರ್ಶಿಗಳಾದ ಹೇಮಂತ್ ಅವರು ರೈತರಲ್ಲಿ ಮನವಿ ಮಾಡಿದರು.
ತಾಲ್ಲೂಕಿನ ತೀರ್ಥಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬರಸಿಡ್ಲಹಳ್ಳಿಯಲ್ಲಿ ಕರಪತ್ರಗಳನ್ನು ನೀಡುವ ಮೂಲಕ ಬೀದಿನಾಟಕ ಮತ್ತು “ಜಾಬ್ ಕಾರ್ಡ್ ಮೇಳ” ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಆಗಸ್ಟ್ ೧೫ ರಿಂದ ಸೆಪ್ಟಂಬರ್ ೧೫ ರವರೆಗೆ ಉದ್ಯೋಗ ಚೀಟಿ ಇಲ್ಲದಾ ಎಲ್ಲಾ ರೈತರು ಮತ್ತು ಕೂಲಿಕಾರರು ಹಾಗೂ ಅರ್ಹ ಗ್ರಾಮೀಣ ಕುಟುಂಬಗಳಿಗೆ ಸ್ಥಳದಲ್ಲೇ ಪರಿಶೀಲಿಸಿ, ಹೊಸ ರೋಜ್ಗಾರ್ ಗ್ಯಾರಂಟಿ ಕಾರ್ಡ್ ಗಳನ್ನು ನೀಡಲಾಗುವುದು. ಅರ್ಹ ಫಲಾನುಭವಿಗಳು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಉದ್ಯೋಗ ಚೀಟಿ ಪಡೆಯಬಹುದು ತಪ್ಪದೇ ಅರ್ಹರು ಸೌಲಭ್ಯಗಳನ್ನು ಪಡೆದುಕೊಳ್ಳಿ ಎಂದು ಮನವಿ ಮಾಡಿದರು.
ಈಗಾಗಲೇ ಜಾಬ್ ಕಾರ್ಡ್ ಹೊಂದಿದ್ದು, ಇ-ಕೆವೈಸಿ ಪ್ರಕ್ರಿಯೆ ಬಾಕಿ ಇರುವವರು ಈ ಅಭಿಯಾನದ ಮೂಲಕ ತಕ್ಷಣವೇ ಇ-ಕೆವೈಸಿ ಪೂರ್ಣಗೊಳಿಸಬಹುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರು, ವಿಶೇಷ ಚೇತನರು, ಮಹಿಳಾ ಪ್ರಧಾನ ಕುಟುಂಬಗಳು ಮತ್ತು ಭೂ ರಹಿತ ಕೂಲಿ ಕಾರ್ಮಿಕರಿಗೆ ಆದ್ಯತೆ ಮೇರೆಗೆ ಕಾರ್ಡ್ ವಿತರಿಸಲಾಗುವುದು ಎಂದು ಹೇಳಿದರು.
ಈ ವೇಳೆ ಪಂಚಾಯಿತಿ ಮಾನ್ಯ ಕಾರ್ಯದರ್ಶಿಗಳಾದ ಹೇಮಂತ್, ಕರವಸೂಲಿಕಾರರಾದ ಸತೀಶ್ ಕುಮಾರ್, ತಾಂತ್ರಿಕ ಸಹಾಯಕರಾದ ಹೊನ್ನೇಶ್ ಬಿ. ಎಸ್, ಡಿಇಒ ಮುನಿರಾಜು, ಬಿಎಫ್ ಟಿ ಪಾಂಡುರAಗಯ್ಯ, ಜಿಕೆಎಂ ವಿಜಯಲಕ್ಷಿ÷್ಮ, ಪಂಚಾಯಿತಿ ಸಿಬ್ಬಂದಿಗಳು,ಎAಬಿಕೆ, ಸಂಜೀವಿನಿ ಸಂಘದ ಸದಸ್ಯರು, ದವನ ಭೂಮಿಕೆ ಸಾಂಸ್ಕöÈತಿಕ ಟ್ರಸ್ಟ್ ಕಲಾವಿದರು, ಸಾರ್ವಜನಿಕರು ಉಪಸ್ಥಿತರಿದ್ದರು.ಪಂಚಾಯಿತಿ ಸಿಬ್ಬಂದಿಗಳು, ಸಂಜೀವಿನಿ ಸಂಘದ ಸದಸ್ಯರು,ದವನ ಭೂಮಿಕೆ ಸಾಂಸ್ಕöÈತಿಕ ಟ್ರಸ್ಟ್ ಕಲಾವಿದರು ಹಾಗೂ ಸಾರ್ವಜನಿಕ ಉಪಸ್ಥಿತರಿದ್ದರು.
(Visited 1 times, 1 visits today)





