BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಮಳೆಗಾಲದಲ್ಲೇ ಕುಡಿಯುವ ನೀರಿಗೆ ಹಾಹಾಕಾರ
  • ತುಮಕೂರಿನಲ್ಲಿ ಮಣ್ಣಿನ ಗಣೇಶನಿಗೆ ಮಕ್ಕಳ ಕೈಚಳಕ
  • ಮಠ ಮಾನ್ಯಗಳ ನೆರವಿನ ಫಲವಾಗಿ ವೀರಶೈವ, ಲಿಂಗಾಯಿತ ಸಮುದಾಯ ಶೈಕ್ಷಣಿಕವಾಗಿ ಮುಂದುವರೆದಿದೆ ಶಾಸಕ ಜಿ.ಬಿ.ಜೋತಿಗಣೇಶ್ ಅಭಿಪ್ರಾಯ
  • ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ
  • ಇತಿಹಾಸ ಮರುನಿರ್ಮಾಣದಲ್ಲಿ ಶಿಲ್ಪಿಗಳ ಪಾತ್ರ ಮಹತ್ವದ್ದು
  • ಶಿಕ್ಷಕ ರಾಷ್ಟç ನಿರ್ಮಾಣದ ಶಿಲ್ಪಿ: ಡಾ.ಶಿವಕುಮಾರಯ್ಯ
  • ಸೂರಿಲ್ಲದವರಿಗೆ ೧೫ ಲಕ್ಷಕ್ಕೂ ಹೆಚ್ಚು ನಿವೇಶನ: ಡಾ: ಜಿ.ಪರಮೇಶ್ವರ
  • ಮಕ್ಕಳಿಗೆ ಶ್ರೀಕೃಷ್ಣನ ವಿಚಾರಧಾರೆ ತಿಳಿಸಿ: ಬಿ.ಕೆ.ಗೀತಕ್ಕ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮಠ ಮಾನ್ಯಗಳ ನೆರವಿನ ಫಲವಾಗಿ ವೀರಶೈವ, ಲಿಂಗಾಯಿತ ಸಮುದಾಯ ಶೈಕ್ಷಣಿಕವಾಗಿ ಮುಂದುವರೆದಿದೆ ಶಾಸಕ ಜಿ.ಬಿ.ಜೋತಿಗಣೇಶ್ ಅಭಿಪ್ರಾಯ
news

ಮಠ ಮಾನ್ಯಗಳ ನೆರವಿನ ಫಲವಾಗಿ ವೀರಶೈವ, ಲಿಂಗಾಯಿತ ಸಮುದಾಯ ಶೈಕ್ಷಣಿಕವಾಗಿ ಮುಂದುವರೆದಿದೆ ಶಾಸಕ ಜಿ.ಬಿ.ಜೋತಿಗಣೇಶ್ ಅಭಿಪ್ರಾಯ

By News Desk BenkiyabaleUpdated:September 07, 2026 4:54 pm

ತುಮಕೂರು: ಮಠ ಮಾನ್ಯಗಳ ನೆರವಿನ ಫಲವಾಗಿ ವೀರಶೈವ,ಲಿಂಗಾಯಿತ ಸಮುದಾಯ ಶೈಕ್ಷಣಿಕವಾಗಿ ಮುಂದುವರೆದಿದೆ. ಆದರೆ ರಾಜಕೀಯವಾಗಿ ಮುಂದುವರೆಯಬೇಕಾದರೆ ಇತರೆ ಸಮುದಾಯಗಳ ಬೆಂಬಲದ ಅಗತ್ಯವಿದೆ ಎಂದು ತುಮಕೂರು ನಗರ ಶಾಸಕ ಜಿ.ಬಿ.ಜೋತಿಗಣೇಶ್ ತಿಳಿಸಿದ್ದಾರೆ.
ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ತುಮಕೂರು ಜಿಲ್ಲಾ ವೀರಶೈವ ಲಿಂಗಾಯಿತ ನೌಕರರ ಕ್ಷೇಮಾಭಿವೃದ್ದಿ ಸಂಘ(ರಿ)ವತಿಯಿAದ ಆಯೋಜಿಸಿದ್ದ ತುಮಕೂರು ಜಿಲ್ಲಾ ವೀರಶೈವ ಲಿಂಗಾಯಿತ ನೌಕರರ ಸಮಾವೇಶ ಮತ್ತು ಅಭಿನಂದನಾ ಸಮಾರಂಭ ಹಾಗೂ ಪ್ರತಿಭಾಪುರಸ್ಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತಿದ್ದ ಅವರು,ಧರ್ಮಛತ್ರ, ಹಾಸ್ಟಲ್‌ಗಳು ಮತ್ತು ಮಠಗಳಲ್ಲಿ ಓದಿ ಸರಕಾರಿ ಉದ್ಯೋಗ ಪಡೆದು ಸಮಾಜದಲ್ಲಿ ವೀರಶೈವಲಿಂಗಾಯಿತ ಸಮಾಜ ತಮ್ಮ ಆಸ್ಥಿತ್ವವನ್ನು ಉಳಿಸಿಕೊಂಡಿದೆ.ಆದರೆ ರಾಜಕೀಯವಾಗಿ ಬೆಳೆಯಬೇಕಾದರೆ, ಅದರಲ್ಲಿಯೂ ವೀರಶೈವ ಲಿಂಗಾಯಿತರು ಕಡಿಮೆ ಸಂಖ್ಯೆಯಲ್ಲಿರುವ ಹಳೆ ಮೈಸೂರು ಭಾಗದಲ್ಲಿ ರಾಜಕೀಯ ಅಧಿಕಾರ ಸಿಗಬೇಕಾದರೆ ಓಬಿಸಿ, ಎಸ್ಸಿ,ಎಸ್ಟಿ ಸಮುದಾಯಗಳ ಜೊತೆಗೆ ಹೊಂದಿಕೊAಡು ಹೋಗಬೇಕಾದ ಅನಿವಾರ್ಯತೆ ಇದೆ ಎಂದರು.
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಬಸವರಾಜು ಮಾತನಾಡಿ,ಕರ್ನಾಟಕದ ಅಭಿವೃದ್ದಿ ಪಥದಲ್ಲಿದ್ದರೆ, ಅದಕ್ಕೆ ಮಠ ಮಾನ್ಯಗಳ ಕೊಡುಗೆ ಆಪಾರ.ಮಠ ಮಾನ್ಯಗಳು ಜಾತಿ, ಧರ್ಮ ನೋಡದೆ ಎಲ್ಲಾ ವರ್ಗದ ಮಕ್ಕಳಿಗೆ ಶಿಕ್ಷಣ ನೀಡಿದ ಪರಿಣಾಮ ಇಂದು ಕರ್ನಾಟಕ ಜಿ.ಎಸ್.ಟಿ ಸಂಗ್ರಹಣೆಯಲ್ಲಿ ಎರಡನೇ ಸ್ಥಾನದಲ್ಲಿದ್ದರೆ, ಜಿಡಿಪಿ ಬೆಳವಣಿಗೆಯಲ್ಲಿ ಐದನೇ ಸ್ಥಾನದಲ್ಲಿದೆ.ನಮ್ಮ ಸರಕಾರಿ ನೌಕರರ ಸಂಘದಿAದ ಅತಿ ಹೆಚ್ಚು ಅಂಕ ಪಡೆದ ಸರಕಾರಿ ನೌಕರರ ಮಕ್ಕಳಿಗೆ ಪ್ರತಿಭಾಪುರಸ್ಕಾರ ನೀಡುತ್ತಾ ಬಂದಿದ್ದು,ಈ ವರ್ಷ ೩೫೦೦ ಜನರಿಗೆ ಅರಮನೆ ಮೈದಾನದಲ್ಲಿ ಪ್ರತಿಭಾನ್ವಿತರನ್ನು ಅಭಿನಂದಿಸಲಾಗಿದೆ. ಇದಕ್ಕಾಗಿ ನಾಲ್ಕು ಕೋಟಿ ರೂಗಳನ್ನು ಸಂಘದಲ್ಲಿ ಮೀಸಲಿರಿಸಲಾಗಿದೆ.ಮಕ್ಕಳು ಮತ್ತು ಪೋಷಕರು ಕೇವಲ ಅಂಕಗಳಿಗೆ ಮಹತ್ವ ನೀಡದೆ, ಮೌಲ್ಯಯುತ ಶಿಕ್ಷಣಕ್ಕೆ ಒತ್ತು ನೀಡಬೇಕು.ವೈದ್ಯಕೀಯ ಶಿಕ್ಷಣ, ಇಂಜಿನಿಯರಿAಗ್, ಎಂ.ಬಿ.ಎ ಇನ್ನಿತರ ಸ್ನಾತಕೋತ್ತರ ಪದವಿ ಪಡೆದವರು ಭಯೋತ್ಪಾಧಕರಾಗಿರುವುದನ್ನು ನೋಡುತ್ತಿದ್ದೇವೆ. ಹಾಗಾಗಿ ಮೌಲ್ಯಯುತ ಶಿಕ್ಷಣಕ್ಕೆ ಒತ್ತು ನೀಡುವ ಅಗತ್ಯವಿದೆ ಎಂದರು.
ಪ್ರಸ್ತಾವಿಕ ನುಡಿಗಳನ್ನಾಡಿದ ತುಮಕೂರು ಜಿಲ್ಲಾ ವೀರಶೈವ ಲಿಂಗಾಯಿತ ನೌಕರರ ಕ್ಷೇಮಾಭಿವೃದ್ದಿ ಸಂಘದ ಪ್ರಧಾನ ಕಾರ್ಯದರ್ಶಿ ಜೋತಿಪ್ರಕಾಶ್.ಟಿ.ಜೆ.,ಸರಕಾರಿ ಮತ್ತು ಖಾಸಗಿ ಕ್ಷೇತ್ರದ ನೌಕರರಿಗೆ ಒಂದು ಇತಿ ಮಿತಿ ಇದೆ.ಹಾಗಾಗಿ ನಮ್ಮ ವ್ಯಾಪ್ತಿಯೊಳಗೆ ಕಳೆದ ೧೫ ವರ್ಷಗಳಿಂದಲೂ ಸಮುದಾಯದ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಲಾಗುತ್ತಿದೆ.ಕೊವೀಡ್ ಸಂದರ್ಭ ಹೊರತು ಪಡಿಸಿದರೆ ಉಳಿದ ವರ್ಷಗಳಲ್ಲಿ ಪ್ರತಿಭಾವಂತರನ್ನು ಗುರುತಿಸಿ ಅಭಿನಂದಿಸಿ ಪ್ರೋತ್ಸಾಹಿಸುವ ಕೆಲಸ ಮಾಡಲಾಗುತ್ತಿದೆ.ಮಠ ಮಾನ್ಯಗಳಿಗೆ, ಬಡ ಮಕ್ಕಳ ಓದಿಗೆ ಕೈಲಾದ ನೆರವು ನೀಡಲಾಗುತ್ತಿದೆ. ಸಮುದಾಯದ ಜನಪ್ರತಿನಿಧಿಗಳು ಈ ಕಾರ್ಯದಲ್ಲಿ ಕೈಜೋಡಿಸುವಂತೆ ಮನವಿ ಮಾಡಿದರು.
ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಿಅಖಿಲ ಭಾರತ ವೀರಶೈವಲಿಂಗಾಯಿತ ಮಹಾಸಭಾ ಮಹಿಳಾ ರಾಷ್ಟಿçÃಯ ಅಧ್ಯಕ್ಷೆ ಶ್ರೀಮತಿ ವೀಣಾ ಕಾಶಪ್ಪ ಮಾತನಾಡಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಬೆಳ್ಳಾವೆಯ ಶ್ರೀಕಾರದೇಶ್ವರ ಮಠದ ಶ್ರೀಶ್ರೀವೀರಕಾರದ ಬಸವ ಸ್ವಾಮೀಜಿ ಆಶೀರ್ವಚನ ನೀಡಿ,ವೀರಶೈವ ಲಿಂಗಾಯಿತ ಸಮುದಾಯದಲ್ಲಿ ಪ್ರತಿಭೆಗಳಿಗೆ ಕೊರತೆಯಿಲ್ಲ. ಇಂತಹ ಸಮಾರಂಭಗಳ ಮೂಲಕ ಅವರನ್ನು ಪ್ರೋತ್ಸಾಹಿಸುವ ಕೆಲಸ ಆಗಬೇಕು. ಕೇವಲ ಇಂಜಿನಿಯರಿAಗ್, ಮೆಡಿಕಲ್ ಅಷ್ಟೇ ಅಲ್ಲ ಬೇರೆ ಬೇರೆ ಕ್ಷೇತ್ರಗಳ ಕಡೆಗೂ ಸಮುದಾಯದ ವಿದ್ಯಾರ್ಥಿಗಳು ಗಮನಹರಿಸಬೇಕು. ತಾವು ಒಳ್ಳೆಯ ಸ್ಥಾನಕ್ಕೆ ಹೋದಾಗ, ನಿಮ್ಮನ್ನು ಗುರುತಿಸಿ, ಗೌರವಿಸಿದ ಸಂಘ ಸಂಸ್ಥೆಗಳಿಗೆ ನಿಮ್ಮ ಕೈಲಾದ ಸಹಾಯ ಮಾಡುವಂತೆ ಕಿವಿ ಮಾತು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುಮಕೂರು ಜಿಲ್ಲಾ ವೀರಶೈವ ಲಿಂಗಾಯಿತ ನೌಕರರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷರಾದ ಎಂ.ಬಿ.ಷಡಕ್ಷರಿ ವಹಿಸಿದ್ದರು.ನಿವೃತ್ತ ಪೊಲೀಸ್ ಅಧಿಕಾರಿ ಲೋಕೇಶ್ವರ್,ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ತುಮಕೂರು ಜಿಲ್ಲಾ ಉಪಾಧ್ಯಕ್ಷ ಶಶಿ ಹುಲಿಕುಂಟೆ ಮಠ್,ಬೆಸ್ಕಾಂ ಇಇ ಅಮೀನ್,ವಿಜ್ಞಾನಿ ಈರಣ್ಣ ಅವರುಗಳು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ವೇದಿಕೆಯಲ್ಲಿ ಅಖಿಲ ಭಾರತ ವೀರಶೈವಲಿಂಗಾಯಿತ ಮಹಾಸಭಾ ತುಮಕೂರು ಜಿಲ್ಲಾ ಮಹಿಳಾಧ್ಯಕ್ಷೆ ಮಮತ ದಿವಾಕರ್, ಸಾಗರಹಳ್ಳಿ ನಟರಾಜು, ಡಾ.ಪ್ರಭಾ, ಬೆಸ್ಕಾಂ ಇಇ ಚೇತನ್,ಉದ್ಯಮಿಗಳಾದ ಡಾ.ದರ್ಶನ್ ಕೆ.ಎಲ್, ಹೆಚ್.ಕೆ.ರುದ್ರೇಶ್, ಕೊಪ್ಪಲ್‌ನಾಗರಾಜು,ವಿವಿಧ ಸಂಘಗಳಿಗೆ ಆಯ್ಕೆಯಾಗಿರುವ ಉಮೇಶ್, ಸಿದ್ದಲಿಂಗಸ್ವಾಮಿ.ಎಸ್.ಪಿ,ಪಿ.ಜಿ.ತಿಮ್ಮೇಗೌಡ, ಹೆಚ್.ಎಂ.ರುದ್ರೇಶ್, ಜಿ.ವಿ.ಮೋಹನ್‌ಕುಮಾರ್, ಜಿಲ್ಲಾ ಘಟಕದ ಪದಾಧಿಕಾರಿಗಳಾದ ಹೆಚ್.ಜಯಶಂಕರ್, ಉಮೇಶ್, ಮಂಜುನಾಥ್ ಬಿ.ಎಸ್,ರೇಣುಕಾರಾಧ್ಯ, ಶುಭಮಣಿ ಸೇರಿದಂತೆ,ವಿವಿಧ ತಾಲೂಕು ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

(Visited 1 times, 1 visits today)
kannada news karnataka local news Mla jyothiganesh tumakur tumkur tumkur news ತುಮಕೂರು:
Previous Articleಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ
Next Article ತುಮಕೂರಿನಲ್ಲಿ ಮಣ್ಣಿನ ಗಣೇಶನಿಗೆ ಮಕ್ಕಳ ಕೈಚಳಕ
News Desk Benkiyabale

Related Posts

ಮಳೆಗಾಲದಲ್ಲೇ ಕುಡಿಯುವ ನೀರಿಗೆ ಹಾಹಾಕಾರ

September 07, 2026 5:14 pm news

ತುಮಕೂರಿನಲ್ಲಿ ಮಣ್ಣಿನ ಗಣೇಶನಿಗೆ ಮಕ್ಕಳ ಕೈಚಳಕ

September 07, 2026 4:56 pm news

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

September 07, 2026 4:52 pm news
ತಾಜಾ ಸುದ್ಧಿಗಳು
news

ಮಳೆಗಾಲದಲ್ಲೇ ಕುಡಿಯುವ ನೀರಿಗೆ ಹಾಹಾಕಾರ

September 07, 2026 5:14 pm
news

ತುಮಕೂರಿನಲ್ಲಿ ಮಣ್ಣಿನ ಗಣೇಶನಿಗೆ ಮಕ್ಕಳ ಕೈಚಳಕ

September 07, 2026 4:56 pm
news

ಮಠ ಮಾನ್ಯಗಳ ನೆರವಿನ ಫಲವಾಗಿ ವೀರಶೈವ, ಲಿಂಗಾಯಿತ ಸಮುದಾಯ ಶೈಕ್ಷಣಿಕವಾಗಿ ಮುಂದುವರೆದಿದೆ ಶಾಸಕ ಜಿ.ಬಿ.ಜೋತಿಗಣೇಶ್ ಅಭಿಪ್ರಾಯ

September 07, 2026 4:54 pm
news

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

September 07, 2026 4:52 pm
news

ಇತಿಹಾಸ ಮರುನಿರ್ಮಾಣದಲ್ಲಿ ಶಿಲ್ಪಿಗಳ ಪಾತ್ರ ಮಹತ್ವದ್ದು

September 07, 2026 4:51 pm
news

ಶಿಕ್ಷಕ ರಾಷ್ಟç ನಿರ್ಮಾಣದ ಶಿಲ್ಪಿ: ಡಾ.ಶಿವಕುಮಾರಯ್ಯ

September 07, 2026 4:49 pm
Our Youtube Channel
Our Picks

ಮಳೆಗಾಲದಲ್ಲೇ ಕುಡಿಯುವ ನೀರಿಗೆ ಹಾಹಾಕಾರ

September 07, 2026 5:14 pm

ತುಮಕೂರಿನಲ್ಲಿ ಮಣ್ಣಿನ ಗಣೇಶನಿಗೆ ಮಕ್ಕಳ ಕೈಚಳಕ

September 07, 2026 4:56 pm

ಮಠ ಮಾನ್ಯಗಳ ನೆರವಿನ ಫಲವಾಗಿ ವೀರಶೈವ, ಲಿಂಗಾಯಿತ ಸಮುದಾಯ ಶೈಕ್ಷಣಿಕವಾಗಿ ಮುಂದುವರೆದಿದೆ ಶಾಸಕ ಜಿ.ಬಿ.ಜೋತಿಗಣೇಶ್ ಅಭಿಪ್ರಾಯ

September 07, 2026 4:54 pm

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

September 07, 2026 4:52 pm

ಇತಿಹಾಸ ಮರುನಿರ್ಮಾಣದಲ್ಲಿ ಶಿಲ್ಪಿಗಳ ಪಾತ್ರ ಮಹತ್ವದ್ದು

September 07, 2026 4:51 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಮಳೆಗಾಲದಲ್ಲೇ ಕುಡಿಯುವ ನೀರಿಗೆ ಹಾಹಾಕಾರ

By News Desk BenkiyabaleSeptember 07, 2026 5:14 pm

ಕೊರಟಗೆರೆ: ಬೇಸಿಗೆ ಇನ್ನೂ ಆರಂಭವಾಗಿಲ್ಲ. ಆದರೆ ಕೊರಟಗೆರೆ ಪುರಸಭೆ ವ್ಯಾಪ್ತಿಯ ಕಲ್ಲುಗುಟ್ಟರಹಳ್ಳಿ ಹಾಗೂ ಕೃಷ್ಣರಾಜಪುರ-೨ ಗ್ರಾಮಗಳಲ್ಲಿ ಈಗಾಗಲೇ ಕುಡಿಯುವ ನೀರಿನ…

ತುಮಕೂರಿನಲ್ಲಿ ಮಣ್ಣಿನ ಗಣೇಶನಿಗೆ ಮಕ್ಕಳ ಕೈಚಳಕ

September 07, 2026 4:56 pm

ಮಠ ಮಾನ್ಯಗಳ ನೆರವಿನ ಫಲವಾಗಿ ವೀರಶೈವ, ಲಿಂಗಾಯಿತ ಸಮುದಾಯ ಶೈಕ್ಷಣಿಕವಾಗಿ ಮುಂದುವರೆದಿದೆ ಶಾಸಕ ಜಿ.ಬಿ.ಜೋತಿಗಣೇಶ್ ಅಭಿಪ್ರಾಯ

September 07, 2026 4:54 pm

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

September 07, 2026 4:52 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.