ತುಮಕೂರು: ಕೆಪಿಎಸ್ಸಿ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಸಂಬAಧಿಸಿದAತೆ ಬಂಧನಕ್ಕೊಳಗಾಗಿರುವ ಆರೋಪ ಎದುರಿಸುತ್ತಿರುವ ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ್ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವತಿಯಿಂದ ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಯಿತು. ನಗರದ ಟೌನ್ಹಾಲ್ ವೃತ್ತದಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು ಹಾಗೂ ಕಾರ್ಯಕರ್ತರು ಕನ್ನಾಳೆ ಅವರನ್ನು ಕೂಡಲೇ ಸ್ಥಾನದಿಂದ ವಜಗೊಳಿಸುವಂತೆ ಒತ್ತಾಯಿಸಿದರು.
ಕನ್ನಾಳೆ ಬಂಧನವಾಗಿ ಒಂದು ವಾರ ಕಳೆದಿದ್ದರೂ ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸದಿರುವುದಕ್ಕೆ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಟೌನ್ಹಾಲ್ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಕೆಲಕಾಲ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಬಳಿಕ ಮಾನವ ಸರಪಳಿ ನಿರ್ಮಿಸಿ ರಾಜ್ಯಪಾಲರು ಹಾಗೂ ಸಂಬAಧಪಟ್ಟ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ರಸ್ತೆ ತಡೆಯಿಂದ ಸಂಚಾರಕ್ಕೆ ತೊಂದರೆಯಾಗಿದ್ದ ಹಿನ್ನೆಲೆಯಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು.
ತುಮಕೂರು ನಗರ ಸಂಘಟನಾ ಕಾರ್ಯದರ್ಶಿ ಸಮನ್ವಿತ್ ಮಾತನಾಡಿ ವಿಶ್ವವಿದ್ಯಾಲಯದಿಂದ ಕನ್ನಾಳೆ ಅವರನ್ನು ವಜಾಗೊಳಿಸುವಂತೆ ಈಗಾಗಲೇ ರಾಜ್ಯಪಾಲರಿಗೆ ಪತ್ರ ಕಳುಹಿಸಲಾಗಿದೆ ಎಂದು ಹೇಳಿದ ಅವರು, ಇದುವರೆಗೆ ಕ್ರಮ ಕೈಗೊಳ್ಳದಿರುವುದಕ್ಕೆ ಕಾರಣವೇನು ಎಂದು ಪ್ರಶ್ನಿಸಿದರು.
ರಾಜ್ಯಪಾಲರು ಕೂಡಲೇ ಮಧ್ಯಪ್ರವೇಶಿಸಿ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕು ಎಂದು ಎಬಿವಿಪಿ ಮುಖಂಡರು ಒತ್ತಾಯಿಸಿದರು. ಒಂದು ವಾರದೊಳಗೆ ಕ್ರಮ ಕೈಗೊಳ್ಳದಿದ್ದರೆ ಮುಂದಿನ ಹಂತದಲ್ಲಿ ತುಮಕೂರು ವಿಶ್ವವಿದ್ಯಾಲಯಕ್ಕೆ ಬೀಗ ಹಾಕಿ ವಿಶ್ವವಿದ್ಯಾಲಯ ಬಂದ್ಗೆ ಕರೆ ನೀಡಲಾಗುವುದು ಎಂದು ಸಂಘಟನೆ ಎಚ್ಚರಿಕೆ ನೀಡಿತು. ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಬೇಕು ಹಾಗೂ ಆರೋಪ ಎದುರಿಸುತ್ತಿರುವ ವ್ಯಕ್ತಿಗಳು ವಿಶ್ವವಿದ್ಯಾಲಯದ ಪ್ರಮುಖ ಆಡಳಿತಾತ್ಮಕ ಸ್ಥಾನಗಳಲ್ಲಿ ಮುಂದುವರಿಯದAತೆ ಕ್ರಮ ವಹಿಸಬೇಕು ಎಂದು ಆಗ್ರಹಿಸಲಾಯಿತು.
ಪ್ರತಿಭಟನೆಯಲ್ಲಿ ಜಿಲ್ಲಾ ಸಂಚಾಲಕ ಎಸ್. ಲೋಕೇಶ್, ಮಧುಗಿರಿ ಜಿಲ್ಲಾ ಸಂಚಾಲಕ, ಜಿಲ್ಲಾ ವಿದ್ಯಾರ್ಥಿನಿ ಪ್ರಮುಖ್ ಯಮುನಾ, ನಗರ ಸಂಘಟನಾ ಕಾರ್ಯದರ್ಶಿ ಸಮನ್ವಿತ್ ಸೇರಿದಂತೆ ಕಾರ್ಯಕರ್ತರಾದ ಅರುಣ್, ಚಿರಂತ್, ಸಂಜಯ್, ಚಿನ್ಮಯ್, ಭಗತ್, ಜೀವನ್, ಶಿವಕುಮಾರ್, ದೀಕ್ಷಾ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.
(Visited 1 times, 1 visits today)





