ತುಮಕೂರು: ತುಮಕೂರು ನಗರದಲ್ಲಿ ದಸರಾ ಉತ್ಸವವನ್ನು ಎಲ್ಲರನ್ನೊಳಗೊಂಡAತೆ ಜನಪರವಾಗಿ ಆಚರಿಸುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಜರುಗಿದ ದಸರಾ ಉತ್ಸವ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ದಸರಾ ಅಂಗವಾಗಿ ನಡೆಯಲಿರುವ ಸಾಂಸ್ಕೃತಿಕ, ಧಾರ್ಮಿಕ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳ ಸ್ಥಳ, ಸಮಯ, ವೇದಿಕೆ ನಿರ್ಮಾಣ, ಸಾರ್ವಜನಿಕರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವುದು ಸೇರಿದಂತೆ ಉತ್ಸವದ ಸಂದರ್ಭದಲ್ಲಿ ಕುಡಿಯುವ ನೀರು, ವಿದ್ಯುತ್, ಸ್ವಚ್ಛತೆ, ರಸ್ತೆ ಸಂಚಾರ, ವಾಹನ ನಿಲುಗಡೆ, ಸಾರ್ವಜನಿಕ ಶೌಚಾಲಯ ಹಾಗೂ ತುರ್ತು ವೈದ್ಯಕೀಯ ಸೇವೆಗಳಿಗೆ ಆದ್ಯತೆ ನೀಡುವ ಕುರಿತಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ತುಮಕೂರು ದಸರಾ ಉತ್ಸವದಲ್ಲಿ ಜಿಲ್ಲೆಯ ಸಾಂಸ್ಕೃತಿಕ ಪರಂಪರೆ, ಕವಿಗೋಷ್ಠಿ, ಕಲೆ ಹಾಗೂ ಸ್ಥಳೀಯ ಪ್ರತಿಭೆಗಳನ್ನು ಪರಿಚಯಿಸುವ ವೇದಿಕೆಯಾಗುವಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಪುಸ್ತಕ ಪ್ರದರ್ಶನ, ಸ್ಥಳೀಯ ಕಲಾವಿದರು, ಸಾಂಸ್ಕೃತಿಕ ತಂಡಗಳು, ಸಂಘ-ಸAಸ್ಥೆಗಳು ಹಾಗೂ ಸಾರ್ವಜನಿಕರ ಸಹಭಾಗಿತ್ವಕ್ಕೆ ಅವಕಾಶ ಕಲ್ಪಿಸಬೇಕು. ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಬರ ನಿರ್ವಹಣೆಗೆ ಮೊದಲ ಆದ್ಯತೆ ನೀಡುವುದರ ಜೊತೆಗೆ, ಅನಗತ್ಯ ಅದ್ದೂರಿ ಮತ್ತು ದುಂದು ವೆಚ್ಚಗಳಿಗೆ ಅವಕಾಶ ನೀಡದೆ “ಬರ ನಿರ್ವಹಣೆಗೆ ಆದ್ಯತೆ ಸಂಪ್ರದಾಯಕ್ಕೆ ಗೌರವ” ಎಂಬ ಆಶಯದೊಂದಿಗೆ ದಸರಾ ಉತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.
ದಸರಾ ಉತ್ಸವವನ್ನು ಶಾಂತಿಯುತವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸಲು ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಅವರು ಮನವಿ ಮಾಡಿದರು.
ಸಭೆಯಲ್ಲಿ ವಿವಿಧ ಉಪ ಸಮಿತಿಗಳ ಅಧ್ಯಕ್ಷರು/ಸದಸ್ಯ ಕಾರ್ಯದರ್ಶಿಗಳೊಂದಿಗೆ ಸಂಬAಧಿಸಿದ ಇಲಾಖೆಗಳ ಸಮನ್ವಯತೆ, ಕಾರ್ಯಕ್ರಮಗಳ ರೂಪುರೇಷೆ ಹಾಗೂ ಉತ್ಸವದ ಯಶಸ್ವಿ ಆಯೋಜನೆ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವಿಜ ಬಿ.ವಿ., ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ, ಮಹಾನಗರ ಪಾಲಿಕೆ ಆಯುಕ್ತೆ ಶುಭ ಬಿ., ತುಮಕೂರು ಉಪವಿಭಾಗಾಧಿಕಾರಿ ನಾಹೀದ ಜûಂ ಜûಂ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಪತ್ರಿಕಾ ಮಾಧ್ಯಮದ ಪ್ರತಿನಿಧಿಗಳು ಹಾಗೂ ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

(Visited 1 times, 1 visits today)