ಕೊರಟಗೆರೆ: ಪಟ್ಟಣದ ಕರುನಾಡು ಹೋಟೆಲ್ ಕೆಳಭಾಗದಲ್ಲಿ ಬಿಜೆಪಿ ಪಕ್ಷದ ನೂತನ ಕಚೇರಿ ಗಣ್ಯರ ಸಮ್ಮುಖದಲ್ಲಿ ಉದ್ಘಾಟನೆಗೊಂಡು ಪಕ್ಷ ಸಂಘಟನೆ ಹಾಗೂ ಎಲ್ಲಾ ಚಟುವಟಿಕೆಗಳಿಗೆ ಅಧಿಕೃತವಾಗಿ ಬಳಸಿಕೊಳ್ಳಲು ಚಾಲನೆ ನೀಡಲಾಯಿತು.
ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಬಿಜೆಪಿ ಪಕ್ಷದ ಮುಖಂಡರು, ಪದಾಧಿಕಾರಿಗಳು, ಮಹಿಳಾ ಮುಖಂಡರು ಹಾಗೂ ಕಾರ್ಯಕರ್ತರು ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಇದೇ ವೇಳೆ ಮುಂಬರುವಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರದ ಯೋಜನೆಗಳನ್ನ ಜನರಿಗೆ ತಿಳಿಸಲು ಹಾಗೂ ಪಕ್ಷದ ಸಂಘಟನೆ ಬಲಪಡಿಸುವುದು, ಕಾರ್ಯಕರ್ತರನ್ನು ಒಗ್ಗೂಡಿಸುವುದು ಹಾಗೂ ಮತದಾರರನ್ನು ತಲುಪುವ ಕುರಿತು ಮುಖಂಡರು ಚರ್ಚಿಸಿದರು.
ಬಿಜೆಪಿ ಮಂಡಲ ಅಧ್ಯಕ್ಷ ರುದ್ರೇಶ್ ಮಾತನಾಡಿ, ಪ್ರತಿಚುನಾವಣೆಯಲ್ಲೂ ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಂದರ್ಭದಲ್ಲಿ ಪಕ್ಷದ ಸಂಘಟನೆಗೆ ಹಲವು ಸವಾಲುಗಳು ಎದುರಾಗುತ್ತಿವೆ. ಪಕ್ಷವನ್ನು ತಳಮಟ್ಟದಿಂದ ಮತ್ತಷ್ಟು ಬಲಪಡಿಸುವ ಉದ್ದೇಶದಿಂದಲೇ ನೂತನ ಕಚೇರಿಯನ್ನು ಆರಂಭಿಸಲಾಗಿದೆ.ಕಾರ್ಯಕರ್ತರನ್ನು ಒಗ್ಗೂಡಿಸಿ, ಪಕ್ಷದ ಸಂಘಟನೆಯನ್ನು ಸದೃಢಗೊಳಿಸುವ ಮೂಲಕ ಮುಂಬರುವ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯನ್ನು ಗೆಲ್ಲಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಸಜ್ಜಾಗಿ ಎಂದು ಕರೆ ನೀಡಿದರು.
ಆಗ್ನೇಯ ಪದವೀಧರ ಕ್ಷೇತ್ರದಎನ್‌ಡಿಎ ಅಭ್ಯರ್ಥಿ ಕೆ.ಎಂ. ಸುರೇಶ್ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪದವೀಧರರಿಗೆ ಆಗುತ್ತಿರುವ ಅನ್ಯಾಯ ಹಾಗೂ ಸಮಸ್ಯೆಗಳನ್ನು ಗಮನಿಸುತ್ತಿದ್ದೇವೆ. ಪದವೀಧರರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ದೊರೆಯಬೇಕಾದರೆ, ಈ ಬಾರಿ ಪದವೀಧರರು ತಮ್ಮ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಒಳ್ಳೆಯ ನಿರ್ಧಾರ ಕೈಗೊಳ್ಳಬೇಕು. ಪದವೀಧರರ ಪರವಾಗಿ ಕೆಲಸ ಮಾಡುವ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಮೂಲಕ ತಮ್ಮ ಮತದಾನದ ಹಕ್ಕನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.
ಬಿಜೆಪಿ ಮುಖಂಡ ವಿಜಯ ಕುಮಾರ್ ಮಾತನಾಡಿದರು.
ಬಿಜೆಪಿ ಮಹಿಳಾ ಜಿಲ್ಲಾಧ್ಯಕ್ಷರು ಮಾತನಾಡಿ, ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಪಕ್ಷದ ಸಂಘಟನೆ ಹಾಗೂ ಚುನಾವಣಾ ಪ್ರಕ್ರಿಯೆಯಲ್ಲಿ ಮಹಿಳಾ ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸಬೇಕು. ಕೊರಟಗೆರೆ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಪಕ್ಷಕ್ಕೆ ಹೆಚ್ಚಿನ ಬೆಂಬಲ ನೀಡುವ ಮೂಲಕ ಎನ್‌ಡಿಎ ಅಭ್ಯರ್ಥಿಯನ್ನು ಹೆಚ್ಚಿನ ಮತಗಳ ಅಂತರದಿAದ ಗೆಲ್ಲಿಸಬೇಕು. ಉತ್ತಮ ನಾಯಕತ್ವ ಹಾಗೂ ಅಭಿವೃದ್ಧಿಯ ದೃಷ್ಟಿಯಿಂದ ಕ್ಷೇತ್ರದಲ್ಲಿ ಬದಲಾವಣೆ ತರಲು ಮತದಾರರು ನಿರ್ಧಾರ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಇದೆ ಸಂದರ್ಭದಲ್ಲಿ ಪರ್ವ ಗ್ರೂಪ್ ಸಂಸ್ಥಾಪಕ ನೀಲೇಶ್, ಮುಖಂಡರಾದ ಕಾಂತರಾಜು, ಓಂಕಾರ್, ಯಶಸ್, ಪವನ್ ಕುಮಾರ್, ನಟರಾಜು, ಸುಶೀಲಮ್ಮ, ಚಂದ್ರಣ್ಣ, ಶ್ರೀಧರ್, ಅರುಣ್, ರತ್ನಮ್ಮ, ರವಿ, ಲತಾ ಪ್ರದೀಪ್, ರಾಜೇಂದ್ರ, ಮಂಜಣ್ಣ, ಮಹೇಂದ್ರ, ಗುರುದತ್, ಹನುಮಂತರಾಜು, ಶಿವಕುಮಾರ್, ಸಿದ್ದನಂಜಪ್ಪ, ಮಮತಾ, ಜಯಪ್ಪ, ನಾಗರಾಜು, ಆನಂದ್, ಶ್ರೀನಿವಾಸ್, ಸಿದ್ದರಾಜು, ವಿಜಿಕುಮಾರ್, ಯತೀಶ್, ರಾಜಕುಮಾರ್, ಸುರೇಶ್, ಮೂರ್ತಿ, ಬಾಲರಾಜು, ಮಂಜಣ್ಣ, ಆಟೋಗೋಪಿ, ಹೇಮಂತ್, ರವಿಶಂಕರ್, ಸಂತೋಷ್, ಜಗದೀಶ್, ಶಶಿ, ರಂಜಿತ್, ಮಧು, ನಯನಗೌಡ, ಸಿದ್ದೇಶ್, ವಿನೋದ್, ಸೇರಿದಂತೆ ಇತರರು ಇದ್ದರು.

(Visited 1 times, 1 visits today)