ತುಮಕೂರು: ಮಳೆ ಕೊರತೆ, ತೀವ್ರ ಬರ, ರಣ ಬಿಸಿಲು ಹಾಗೂ ಬೆಲೆ ಏರಿಕೆ ನಡುವೆಯೂ ಗೌರಿ-ಗಣೇಶ ಹಬ್ಬವನ್ನು ಕಲ್ವತರುನಾಡಿನಲ್ಲಿ ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ಈ ಬಾರಿ ಎಂದೂ ಕಂಡರಿಯದ ಮಳೆ ಕೊರತೆ, ರಣ ಬಿಸಿಲು, ಬರದ ಛಾಯೆ ಆವರಿಸಿದೆ. ಈ ನಡುವೆ ಬೆಲೆ ಏರಿಕೆ ಎಂದಿಗಿAತಲೂ ದುಪ್ಪಟವಾಗಿದೆ. ಆದರೂ ರೈತ ಸಮೂಹ, ನಗರ ಪ್ರದೇಶದ ಜನತೆ ಸೇರಿದಂತೆ ಎಲ್ಲರೂ ಸಹ ಗೌರಿ-ಗಣೇಶ ಹಬ್ಬವನ್ನು ಸಡಗರ ಸಂಭ್ರಮದಿAದ ಆಚರಿಸಿದರು.
ಮುಂಜಾನೆಯೇ ಮಹಿಳೆಯರು ತಮ್ಮ ತಮ್ಮ ಮನೆಗಳ ಬಾಗಿಲಲ್ಲಿ ಮೊರಗಳನ್ನು ಇಟ್ಟು ಪೂಜೆ ಸಲ್ಲಿಸುವ ಮೂಲಕ ಗೌರಿ ಹಬ್ಬ ಆಚರಣೆಗೆ ಸಾಂಕೇತಿಕವಾಗಿ ಚಾಲನೆ ನೀಡಿದರು.
ನಂತರ ಮನೆಯಲ್ಲಿ ಗೌರಿ ಮೂರ್ತಿ ಇಟ್ಟು ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿ ಹಬ್ಬವನ್ನು ವಿಶೇಷ ರೀತಿಯಲ್ಲಿ ಆಚರಿಸಿದರು.
ಮನೆಯಲ್ಲಿ ಪೂಜೆ, ವ್ರತ ಆಚರಣೆ ಬಳಿಕ ತಮ್ಮ ಬಡಾವಣೆಗಳ ವ್ಯಾಪ್ತಿಯಲ್ಲಿ ಗೌರಿ ಮೂರ್ತಿ ಪೂಜಿಸಿ ಬಾಗಿನ ಅರ್ಪಿಸಲು ಸಿದ್ದತೆ ಮಾಡಲಾಗಿದ್ದ ದೇವಾಲಯಗಳಿಗೆ ತೆರಳಿದ ಸುಮಂಗಲಿಯರು, ಮಕ್ಕಳು, ಯುವತಿಯರು ಗೌರಿಗೆ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿ ಆಶೀರ್ವಾದ ಪಡೆದರು.
ನಗರದ ಬಿ.ಹೆಚ್. ರಸ್ತೆಯ ಟಿಜಿಎಂಸಿ ಬ್ಯಾಂಕ್ ಆವರಣದಲ್ಲಿರುವ ಮಹಾಲಕ್ಷಿ÷್ಮ ದೇವಾಲಯ, ಭದ್ರಮ್ಮ ವೃತ್ತದಲ್ಲಿರುವ ಸೋಮನಾಥೇಶ್ವರ ದೇವಾಲಯ, ಕುಣಿಗಲ್ ರಸ್ತೆಯ ಬನಶಂಕರಿಯಮ್ಮ, ರಾಮಕೃಷ್ಣನಗರದ ಸಾಯಿಬಾಬ ಮಂದಿರ ಸೇರಿದಂತೆ ನಗರದ ವಿವಿಧ ದೇವಾಲಯಗಳಲ್ಲಿ ಗೌರಿ ಹಬ್ಬದ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು.
ಈ ಎಲ್ಲ ದೇವಾಲಯಗಳಲ್ಲೂ ಮಹಿಳೆಯರು, ಮಕ್ಕಳು, ಯುವತಿಯರು ಗೌರಿಗೆ ಬಾಗಿನ ಅರ್ಪಿಸಿ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡಿದ್ದು ವಿಶೇಷವಾಗಿತ್ತು.
ಮುಂಜಾನೆಯಿAದಲೇ ನಗರದ ವಿವಿಧ ದೇವಾಲಯಗಳಲ್ಲಿ ಗೌರಿ ಹಬ್ಬದ ಅಂಗವಾಗಿ ಸುಮಂಗಲಿಯರು ತವರಿನಿಂದ ಬಂದAತಹ ಬಾಗಿನವನ್ನು ಗೌರಿ ಅರ್ಪಿಸಿದ್ದಲ್ಲದೆ, ಮಹಿಳೆಯರು ಪರಸ್ಪರ ಅರಿಶಿನ ಕುಂಕುಮ ನೀಡುವ ಮೂಲಕ ಹಬ್ಬದವನ್ನು ಆಚರಿಸಿದ್ದು ಸಾಮಾನ್ಯ ದೃಶ್ಯವಾಗಿತ್ತು.
ಗೌರಿ ಮೂರ್ತಿ, ಮೊರ, ಹೂವು, ಹಣ್ಣು, ಮಾವಿನ ಎಲೆ ಸೇರಿದಂತೆ ಇನ್ನಿತರೆ ಅಗತ್ಯ ವಸ್ತುಗಳ ಬೆಲೆ ಎಷ್ಟೇ ದುಪ್ಪಟ್ಟಾದರೂ ಅದನ್ನು ಲೆಕ್ಕಿಸದೆ ಗೌರಿ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಿದ್ದು ಜಿಲ್ಲೆಯಾದ್ಯಂತ ಕಂಡು ಬಂತು.
ಅದ್ದೂರಿ ಗಣೇಶೋತ್ಸವ
ನಗರ ಸೇರಿದಂತೆ ಜಿಲ್ಲೆಯಾದ್ಯಂತ ಗಣೇಶ ಚತುರ್ಥಿಯನ್ನು ಬೃಹತ್ ಪೆಂಡಾಲ್‌ಗಳನ್ನು ನಿರ್ಮಿಸುವ ಮೂಲಕ ಗಣೇಶಮೂರ್ತಿ ಪ್ರತಿಷ್ಠಾಪಿಸಿ ಅದ್ದೂರಿಯಾಗಿ ಆಚರಿಸಲಾಯಿತು.
ನಗರದ ಹೈಸ್ಕೂಲ್ ಮೈದಾನದಲ್ಲಿ ಗೌರಿ-ಗಣೇಶಮೂರ್ತಿಗಳ ಮಾರಾಟಕ್ಕೆ ಪಾಲಿಕೆ ವತಿಯಿಂದ ವ್ಯವಸ್ಥೆ ಮಾಡಿಕೊಡಲಾಗಿತ್ತು. ಹಾಗಾಗಿ ಹೈಸ್ಕೂಲ್ ಮೈದಾನದಲ್ಲಿ ಜನಜಂಗುಳಿಯೇ ನೆರೆದು ಗೌರಿ-ಗಣೇಶ ಮೂರ್ತಿಗಳನ್ನು ಖರೀದಿ ತಮ್ಮ ತಮ್ಮ ಊರು, ಮನೆಗಳಿಗೆ ಕೊಂಡೊಯ್ದು ಸಂಭ್ರಮದಿAದ ಹಬ್ಬವನ್ನು ಆಚರಿಸಿದ್ದು ಕಂಡು ಬಂತು.
(Visited 1 times, 1 visits today)



