BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸರ್ಕಾರದಿಂದ ಇಂಜಿನಿಯರ್ಸ್ ದಿನ ಆಚರಣೆ
  • ಉಪ ಮುಖ್ಯಮಂತ್ರಿಗಳಿ0ದ ತುಮಕೂರು ದಸರಾ-೨೦೨೬ ಲಾಂಛನ ಬಿಡುಗಡೆ
  • ಶಾಲಾ ಸಾಮಗ್ರಿಗಳಿಂದ ಅರಳಿದ ವಿದ್ಯಾ ಗಣಪತಿ
  • ನ್ಯಾಯ ಸಮ್ಮತ ಬೇಡಿಕೆಗಳ ಈಡೇರಿಕೆಗಾಗಿ ಸೆ. ೨೧ ರಿಂದ ರಾಜ್ಯವ್ಯಾಪಿ ಅನಿರ್ಧಿಷ್ಟಾವಧಿ ಅಸಹಕಾರ ಚಳವಳಿ
  • ಶಂಕಿತ ನಕ್ಸಲ್ ವೆಂಕಟೇಶ್ ಬಂಧನ
  • ವಿಬಿ-ಜಿ ರಾಮ್ ಜಿ ಯೋಜನೆ ಗ್ರಾಮೀಣ ಜನರಿಗೆ ವರದಾನ: ಪಿಡಿಒ ಹರ್ಷ
  • ತುಮಕೂರು ಕ್ರಿಕೆಟ್ ಮೈದಾನದ ಅಂತಿಮ ವಿನ್ಯಾಸದ ವಿವರಣೆ
  • ಕಲ್ಪತರುನಾಡಿನಲ್ಲಿ ಸಮಸ್ಯೆಗಳ ನಡುವೆಯೂ ಶ್ರದ್ಧಾ ಭಕ್ತಿಯ ಗೌರಿ-ಗಣೇಶ ಹಬ್ಬ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಉಪ ಮುಖ್ಯಮಂತ್ರಿಗಳಿ0ದ ತುಮಕೂರು ದಸರಾ-೨೦೨೬ ಲಾಂಛನ ಬಿಡುಗಡೆ
news

ಉಪ ಮುಖ್ಯಮಂತ್ರಿಗಳಿ0ದ ತುಮಕೂರು ದಸರಾ-೨೦೨೬ ಲಾಂಛನ ಬಿಡುಗಡೆ

By News Desk BenkiyabaleUpdated:September 16, 2026 5:18 pm

ತುಮಕೂರು: ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ಮಂಗಳವಾರ ತುಮಕೂರು ದಸರಾ-೨೦೨೬ರ ಲಾಂಛನವನ್ನು ಬಿಡುಗಡೆ ಮಾಡಿದರು.
ನಗರದ ಜಿಲ್ಲಾ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಲಾಂಛನ ಬಿಡುಗಡೆ ಮಾಡಿದ ನಂತರ ಮಾತನಾಡಿದ ಅವರು, ಕಳೆದ ವರ್ಷಗಳಲ್ಲಿ ವಿನ್ಯಾಸಗೊಳಿಸಿದ್ದ ದಸರಾ ಲಾಂಛನವನ್ನೇ ಈ ಬಾರಿಯೂ ದಸರಾ ಉತ್ಸವದ ಲಾಂಛನವನ್ನಾಗಿ ಬಳಸಲಾಗುವುದು ಎಂದು ತಿಳಿಸಿದರು.
ಈ ಬಾರಿಯ ತುಮಕೂರು ದಸರಾವನ್ನು ಅದ್ದೂರಿಯಾಗಿ ಆಚರಿಸಲಾಗುವುದು. ದಸರಾ ಪ್ರಯುಕ್ತ ಏರ್ಪಡಿಸಲಾಗುವ ವಸ್ತುಪ್ರದರ್ಶನದಲ್ಲಿ ಎಐ, ಆಧುನಿಕ ತಂತ್ರಜ್ಞಾನ ಅಭಿವೃದ್ಧಿ ಬಗ್ಗೆ ಅವಕಾಶ ಕಲ್ಪಿಸಲಾಗುವುದು. ಸುಮಾರು ೨೦೦೦ಕ್ಕೂ ಹೆಚ್ಚು ಮಕ್ಕಳಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗುವುದು ಎಂದು ಅವರು ಹೇಳಿದರು.
ಮಹಾನವಮಿ ಹಬ್ಬ ನಮ್ಮ ಜೀವನದಲ್ಲಿ ಅನೇಕ ಪಾಠಗಳನ್ನು ಕಲಿಸುತ್ತದೆ. ತುಮಕೂರು ದಸರಾ ಉತ್ಸವ ಜಿಲ್ಲೆಯ ಸಂಸ್ಕೃತಿ, ನಾಗರಿಕತೆ, ಪರಂಪರೆ, ಇತಿಹಾಸವನ್ನು ಪ್ರತಿಬಿಂಬಿಸುತ್ತದೆ. ಉತ್ಸವದಲ್ಲಿ ಎಲ್ಲರೂ ಭಾಗವಹಿಸಬೇಕು. ತುಮಕೂರಿಗೆ ಕೀರ್ತಿ ತರುವ ರೀತಿಯಲ್ಲಿ ದಸರಾ ಉತ್ಸವ ಆಚರಿಸೋಣ ಎಂದು ಕರೆ ನೀಡಿದರು.
‘ತುಮಕೂರು ದಸರಾ ಉತ್ಸವ ೨೦೨೬’ ಕಾರ್ಯಕ್ರಮವು ಅಕ್ಟೋಬರ್ ೧೧ ರಿಂದ ಅಕ್ಟೋಬರ್ ೨೧ರವರೆಗೆ ನಡೆಯಲಿದೆ. ಈ ವರ್ಷದ ತುಮಕೂರು ದಸರಾ ಉತ್ಸವದ ಬಗ್ಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಗಮನಕ್ಕೆ ತರಲಾಗಿದೆ. ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದ್ದು, ಬಿಡುವು ಮಾಡಿಕೊಂಡು ಆಗಮಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
ಕಳೆದ ವರ್ಷಗಳ ದಸರಾ ಆಚರಣೆ ಯಶಸ್ವಿ:
ಎರಡು ವರ್ಷಗಳ ಹಿಂದೆ ಬಂದ ‘ತುಮಕೂರು ದಸರಾ ಉತ್ಸವ’ ಪರಿಕಲ್ಪನೆಯು ಇಂದು ಮೈಸೂರು ದಸರಾದಂತೆ ಜನಾಕರ್ಷಿಸುತ್ತಿದೆ. ಜಿಲ್ಲೆಯಲ್ಲಿ ವಿಭಿನ್ನವಾದ ಭಾವನೆಗಳು ಬರದಂತೆ, ಜಾತಿ-ಧರ್ಮವನ್ನು ಮೀರಿ ದಸರಾ ಹಬ್ಬವನ್ನು ಆಚರಿಸಲಾಗುತ್ತಿದೆ. ಕಳೆದ ವರ್ಷ ತುಮಕೂರು ದಸರಾ ಬಹಳ ಯಶಸ್ವಿಯಾಗಿ ನಡೆಯಿತು. ದೇವಸ್ಥಾನದ ಪ್ರತಿಕೃತಿಯು ಮೂಲ ದೇವಸ್ಥಾನದಂತೆ ಗೋಚರಿಸುತ್ತಿತ್ತು. ಹತ್ತು ದಿನ ನಡೆದ ನವದುರ್ಗೆಯರ ಪೂಜೆ, ಹೋಮ-ಹವನಗಳು, ಕವಿಗೋಷ್ಠಿ, ಯುವ ದಸರಾ, ಮಹಿಳಾ ದಸರಾ, ವೈಜ್ಞಾನಿಕ ವಸ್ತುಪ್ರದರ್ಶನ ತುಮಕೂರು ದಸರಾ ಯಶಸ್ಸಿಗೆ ಕಾರಣವಾಯಿತು ಎಂದು ತಿಳಿಸಿದರು.
ಇಸ್ರೋ ಸಂಸ್ಥೆಯವರು ಏರ್ಪಡಿಸಿದ್ದ ರಾಕೆಟ್ ತಯಾರಿಕೆ ವಿಧಾನ ಕುರಿತು ವೈಜ್ಞಾನಿಕ ಮತ್ತು ತಾಂತ್ರಿಕ ವಸ್ತುಪ್ರದರ್ಶನದಿಂದ ಶಾಲಾ ಮಕ್ಕಳ ಕಲಿಕೆಗೆ ಹೆಚ್ಚು ಅನುಕೂಲವಾಯಿತು. ‘ಪ್ರಚಂಡ’ ಎಂಬ ಯುದ್ಧ ಹೆಲಿಕ್ಯಾಪ್ಟರ್ ಪ್ರದರ್ಶನಕ್ಕೆ ಇಡಲಾಗಿತ್ತು. ಹೆಲಿ ರೈಡ್ ಆಯೋಜನೆಯನ್ನು ಜನರು ಸಂಭ್ರಮಿಸಿದರು. ಅಳ್ವಾಸ್‌ನ ೧೫೦ ಕಲಾವಿದರ ತಂಡವು ಸಾಂಸ್ಕೃತಿಕ ಕಾರ್ಯಕ್ರಮವನ್ನು ಸುಂದರವಾಗಿ ನಡೆಸಿಕೊಟ್ಟರು. ಎಲ್ಲರನ್ನು ಒಳಗೊಂಡAತೆ ದಸರಾ ಆಚರಿಸುವ ಪ್ರಯತ್ನ ಮಾಡಲಾಯಿತು. ಮೈಸೂರಿನಂತೆ ದಸರಾವನ್ನು ತುಮಕೂರಿನಲ್ಲಿ ಆಚರಿಸಲಾಗುತ್ತಿದೆ ಎಂಬ ಮಾತುಗಳು ಎಲ್ಲೆಡೆಯಿಂದ ಕೇಳಿ ಬಂದವು. ಎಲ್ಲ ರೀತಿಯ ಜನರು, ಜನಪ್ರತಿನಿಧಿಗಳು, ಅಧಿಕಾರಿ ಮತ್ತು ಸಿಬ್ಬಂದಿ ಪಾಲ್ಗೊಂಡರು. ಸಿಎಂ ಆಗಿದ್ದ ಸಿದ್ದರಾಮಯ್ಯ ಅವರು ಅನುದಾನ ಬಿಡುಗಡೆ ಮಾಡಿ ಸಹಕರಿಸಿದರು ಎಂದು ಪರಮೇಶ್ವರ ಅವರು ಕಳೆದ ವರ್ಷದ ದಸರಾ ಆಚರಣೆ ಬಗ್ಗೆ ವಿವರಿಸಿದರು.
ದಸರಾ ಉತ್ಸವವು ಕೇವಲ ಒಂದು ಕಾರ್ಯಕ್ರಮವಾಗಿರದೆ, ಜಿಲ್ಲೆಯ ಸಂಸ್ಕೃತಿ, ಪರಂಪರೆ ಹಾಗೂ ಕಲೆಯನ್ನು ಪರಿಚಯಿಸುವ “ಊರ ಹಬ್ಬ”ವಾಗಬೇಕು. ದಸರಾ ಉತ್ಸವದ ಮೂಲಕ ಮಕ್ಕಳು, ಯುವಕರು ಹಾಗೂ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಅವಕಾಶ ಕಲ್ಪಿಸಲಾಗುವುದು. ಯುವ ಕಲಾವಿದರ ಪ್ರತಿಭೆ ಪ್ರದರ್ಶನಕ್ಕೆ ಉತ್ತಮ ವೇದಿಕೆ ದೊರೆಯಲಿದ್ದು, ನೃತ್ಯ ತಂಡಗಳು ಸೇರಿದಂತೆ ವಿವಿಧ ಕಲಾ ತಂಡಗಳು ಭಾಗವಹಿಸಲು ಅವಕಾಶ ನೀಡಲಾಗುವುದು. ಉತ್ಸವದಲ್ಲಿ ಸಾರ್ವಜನಿಕರ ಹೆಚ್ಚಿನ ಪಾಲ್ಗೊಳ್ಳುವಿಕೆಗೆ ಆದ್ಯತೆ ನೀಡಲಾಗುವುದು. ಜನರ ಅಭಿಪ್ರಾಯವೇ ನಮ್ಮ ಅಭಿಪ್ರಾಯವಾಗಿದ್ದು, ಜಾತಿ-ಧರ್ಮದ ಭೇದವಿಲ್ಲದೆ ಎಲ್ಲರೂ ಒಗ್ಗೂಡಿ ಉತ್ಸವ ಆಚರಿಸಬೇಕು ಎಂದು ಹೇಳಿದರು.
ಅದೇ ರೀತಿ ನಗರದ ಶ್ರೀ ಡಾ: ಶಿವಕುಮಾರ ಸ್ವಾಮೀಜಿ ವೃತ್ತವನ್ನು ತುಮಕೂರು ಸೆಂಟರ್ ಆಫ್ ಅಟ್ರಾಕ್ಷನ್ ಆಗಿ ಅಭಿವೃದ್ಧಿಪಡಿಸುವ ಉದ್ದೇಶವಿದೆ. ಇದಕ್ಕೆ ಅಗತ್ಯವಿರುವ ಕೆಲವು ವಸ್ತುಗಳನ್ನು ಚೀನಾದಿಂದ ತರಿಸಲಾಗುತ್ತಿದೆ. ತುಮಕೂರನ್ನು ವಿಶೇಷವಾಗಿ ಗುರುತಿಸುವಂತಹ ಹೊಸ ಪ್ರಯತ್ನಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಈ ಬಾರಿ ಮಕ್ಕಳು ಹಾಗೂ ವಾಹನಗಳ ಬಗ್ಗೆ ಆಸಕ್ತಿ ಹೊಂದಿರುವವರನ್ನು ಆಕರ್ಷಿಸಲು ಮಾಡರ್ನ್ ಕಾರುಗಳ ಶೋ ಆಯೋಜಿಸಲಾಗುತ್ತಿದೆ. ಇಂತಹ ಹೊಸ ಪ್ರಯತ್ನಗಳ ಮೂಲಕ ದಸರಾ ಉತ್ಸವಕ್ಕೆ ಮತ್ತಷ್ಟು ಮೆರುಗು ತರುವ ಮೂಲಕ ಜಿಲ್ಲೆಯ ಸಂಸ್ಕೃತಿ, ನಾಗರಿಕತೆ ಹಾಗೂ ಪರಂಪರೆಯನ್ನು ಉಳಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯವನ್ನು ಮಾಡಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಾಸಕ ಜಿ.ಬಿ ಜ್ಯೋತಿಗಣೇಶ್ ಮಾತನಾಡಿ, ಕಳೆದ ೨ ವರ್ಷಗಳಿಂದಲೂ ತುಮಕೂರು ದಸರಾ ಉತ್ಸವ ಯಶಸ್ವಿ ಕಾಣಲು ಡಾ: ಜಿ. ಪರಮೇಶ್ವರ ಅವರು ಕಾರಣರಾಗಿದ್ದಾರೆ. ನಗರದಲ್ಲಿ ಉದ್ದೇಶಿತ ಅಮಾನಿಕೆರೆ ಕಾರಂಜಿ ಹಾಗೂ ತುಮಕೂರು ಸ್ಕೆ÷್ವÃರ್ ನಿರ್ಮಾಣ ಕಾರ್ಯವನ್ನು ಸ್ವಾಗತಿಸುತ್ತೇನೆ. ಕಳೆದ ವರ್ಷಗಳಂತೆ ಈ ಬಾರಿಯೂ ದಸರಾ ಉತ್ಸವ-೨೦೨೬ರ ಯಶಸ್ಸಿಗೆ ಸಂಪೂರ್ಣವಾಗಿ ಸಹಕರಿಸಲಾಗುವುದು ಎಂದು ಶುಭ ಕೋರಿದರು.
ಕಾರ್ಯಕ್ರಮದಲ್ಲಿ ಶಾಸಕ ಜ್ಯೋತಿ ಗಣೇಶ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಜಿ. ಚಂದ್ರಶೇಖರ್ ಗೌಡ, ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಎಂ., ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ವಿ. ಅಶ್ವಿಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಪಾಲಿಕೆ ಆಯುಕ್ತೆ ಶುಭಾ, ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಸೇರಿದಂತೆ ಉಪವಿಭಾಗಾಧಿಕಾರಿ ನಾಹಿದಾ ಜûಂ ಜûಂ, ಸೇರಿದಂತೆ ಹಲವು ಗಣ್ಯರು ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

(Visited 1 times, 1 visits today)
Congress dcm dr.g.parameshwar kannada news karnataka local news pavagada tumakur tumkur ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು:
Previous Articleಶಾಲಾ ಸಾಮಗ್ರಿಗಳಿಂದ ಅರಳಿದ ವಿದ್ಯಾ ಗಣಪತಿ
Next Article ಸರ್ಕಾರದಿಂದ ಇಂಜಿನಿಯರ್ಸ್ ದಿನ ಆಚರಣೆ
News Desk Benkiyabale

Related Posts

ಸರ್ಕಾರದಿಂದ ಇಂಜಿನಿಯರ್ಸ್ ದಿನ ಆಚರಣೆ

September 16, 2026 5:32 pm news

ಶಾಲಾ ಸಾಮಗ್ರಿಗಳಿಂದ ಅರಳಿದ ವಿದ್ಯಾ ಗಣಪತಿ

September 16, 2026 5:17 pm news

ನ್ಯಾಯ ಸಮ್ಮತ ಬೇಡಿಕೆಗಳ ಈಡೇರಿಕೆಗಾಗಿ ಸೆ. ೨೧ ರಿಂದ ರಾಜ್ಯವ್ಯಾಪಿ ಅನಿರ್ಧಿಷ್ಟಾವಧಿ ಅಸಹಕಾರ ಚಳವಳಿ

September 16, 2026 5:15 pm news
ತಾಜಾ ಸುದ್ಧಿಗಳು
news

ಸರ್ಕಾರದಿಂದ ಇಂಜಿನಿಯರ್ಸ್ ದಿನ ಆಚರಣೆ

September 16, 2026 5:32 pm
news

ಉಪ ಮುಖ್ಯಮಂತ್ರಿಗಳಿ0ದ ತುಮಕೂರು ದಸರಾ-೨೦೨೬ ಲಾಂಛನ ಬಿಡುಗಡೆ

September 16, 2026 5:18 pm
news

ಶಾಲಾ ಸಾಮಗ್ರಿಗಳಿಂದ ಅರಳಿದ ವಿದ್ಯಾ ಗಣಪತಿ

September 16, 2026 5:17 pm
news

ನ್ಯಾಯ ಸಮ್ಮತ ಬೇಡಿಕೆಗಳ ಈಡೇರಿಕೆಗಾಗಿ ಸೆ. ೨೧ ರಿಂದ ರಾಜ್ಯವ್ಯಾಪಿ ಅನಿರ್ಧಿಷ್ಟಾವಧಿ ಅಸಹಕಾರ ಚಳವಳಿ

September 16, 2026 5:15 pm
news

ಶಂಕಿತ ನಕ್ಸಲ್ ವೆಂಕಟೇಶ್ ಬಂಧನ

September 16, 2026 5:13 pm
news

ವಿಬಿ-ಜಿ ರಾಮ್ ಜಿ ಯೋಜನೆ ಗ್ರಾಮೀಣ ಜನರಿಗೆ ವರದಾನ: ಪಿಡಿಒ ಹರ್ಷ

September 16, 2026 5:12 pm
Our Youtube Channel
Our Picks

ಸರ್ಕಾರದಿಂದ ಇಂಜಿನಿಯರ್ಸ್ ದಿನ ಆಚರಣೆ

September 16, 2026 5:32 pm

ಉಪ ಮುಖ್ಯಮಂತ್ರಿಗಳಿ0ದ ತುಮಕೂರು ದಸರಾ-೨೦೨೬ ಲಾಂಛನ ಬಿಡುಗಡೆ

September 16, 2026 5:18 pm

ಶಾಲಾ ಸಾಮಗ್ರಿಗಳಿಂದ ಅರಳಿದ ವಿದ್ಯಾ ಗಣಪತಿ

September 16, 2026 5:17 pm

ನ್ಯಾಯ ಸಮ್ಮತ ಬೇಡಿಕೆಗಳ ಈಡೇರಿಕೆಗಾಗಿ ಸೆ. ೨೧ ರಿಂದ ರಾಜ್ಯವ್ಯಾಪಿ ಅನಿರ್ಧಿಷ್ಟಾವಧಿ ಅಸಹಕಾರ ಚಳವಳಿ

September 16, 2026 5:15 pm

ಶಂಕಿತ ನಕ್ಸಲ್ ವೆಂಕಟೇಶ್ ಬಂಧನ

September 16, 2026 5:13 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸರ್ಕಾರದಿಂದ ಇಂಜಿನಿಯರ್ಸ್ ದಿನ ಆಚರಣೆ

By News Desk BenkiyabaleSeptember 16, 2026 5:32 pm

ತುಮಕೂರು: ಸರ್ಕಾರದಿಂದ ಕೃತಕ ಬುದ್ಧಿಮತ್ತೆ (ಎಐ) ವಿಶ್ವವಿದ್ಯಾಲಯ ಸ್ಥಾಪನೆ ಮಾಡಲಾಗುವುದು. ಈಗಾಗಲೇ ಸಿಎಂ ಡಿ.ಕೆ.ಶಿವಕುಮಾರ್ ಪ್ರಸ್ತಾಪ ಮಾಡಿದ್ದಾರೆ ಎಂದು ಡಿಸಿಎಂ…

ಉಪ ಮುಖ್ಯಮಂತ್ರಿಗಳಿ0ದ ತುಮಕೂರು ದಸರಾ-೨೦೨೬ ಲಾಂಛನ ಬಿಡುಗಡೆ

September 16, 2026 5:18 pm

ಶಾಲಾ ಸಾಮಗ್ರಿಗಳಿಂದ ಅರಳಿದ ವಿದ್ಯಾ ಗಣಪತಿ

September 16, 2026 5:17 pm

ನ್ಯಾಯ ಸಮ್ಮತ ಬೇಡಿಕೆಗಳ ಈಡೇರಿಕೆಗಾಗಿ ಸೆ. ೨೧ ರಿಂದ ರಾಜ್ಯವ್ಯಾಪಿ ಅನಿರ್ಧಿಷ್ಟಾವಧಿ ಅಸಹಕಾರ ಚಳವಳಿ

September 16, 2026 5:15 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.