ತುಮಕೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಕೆಎಸ್‌ಆರ್‌ಪಿ, ಕೆಎಸ್‌ಐಎಫ್‌ಎಸ್ ಹಾಗೂ ಭಾರತೀಯ ಮೀಸಲು ಪಡೆಯ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇರ ನೇಮಕಾತಿಗೆ ಸಂಬAಧಿಸಿದAತೆ ಸೆಪ್ಟೆಂಬರ್ ೨೦ರಂದು ನಗರದ ೨೦ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿರುವ ಲಿಖಿತ ಪರೀಕ್ಷೆಯನ್ನು ಯಾವುದೇ ಲೋಪದೋಷವಿಲ್ಲದಂತೆ ನಡೆಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಸಂಜೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈ ಹಿಂದೆ ನೇಮಕಾತಿ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಲಾಗಿದ್ದು, ಅದೇ ರೀತಿಯಲ್ಲಿ ಈ ಪರೀಕ್ಷೆಯನ್ನೂ ಶಾಂತಿಯುತ, ಪಾರದರ್ಶಕ, ನಿಷ್ಪಕ್ಷಪಾತ ಹಾಗೂ ಲೋಪರಹಿತವಾಗಿ ನಡೆಸಬೇಕು ಎಂದು ಸೂಚಿಸಿದರು.
ಪರೀಕ್ಷಾ ಕೇಂದ್ರಗಳಲ್ಲಿ ಕೊಠಡಿಗಳು, ಕುಡಿಯುವ ನೀರು, ಶೌಚಾಲಯ, ವಿದ್ಯುತ್ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸಬೇಕು. ಸಿಸಿಟಿವಿ ಕ್ಯಾಮೆರಾಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ಮುಂಚಿತವಾಗಿ ಪರಿಶೀಲಿಸಿ, ತಾಂತ್ರಿಕ ದೋಷಗಳಿದ್ದಲ್ಲಿ ಕೂಡಲೇ ಸರಿಪಡಿಸಬೇಕು ಎಂದು ನಿರ್ದೇಶನ ನೀಡಿದರು.
ವೀಕ್ಷಕರು, ಉಪ ಮುಖ್ಯ ಅಧೀಕ್ಷಕರು, ಮಾರ್ಗಾಧಿಕಾರಿಗಳು, ವಸ್ತç ಸಂಹಿತೆ ಅಧಿಕಾರಿಗಳು, ಮಾಸ್ಟರ್ ಟ್ರೇನರ್‌ಗಳು ಹಾಗೂ ಇತರೆ ಸಿಬ್ಬಂದಿ ತಮ್ಮ ಜವಾಬ್ದಾರಿಗಳನ್ನು ಅರಿತು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಪರೀಕ್ಷೆಯ ಗೌಪ್ಯತೆ, ನಿಯಮಪಾಲನೆ ಹಾಗೂ ಪಾರದರ್ಶಕತೆಗೆ ಯಾವುದೇ ಧಕ್ಕೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ., ವಿವಿಧ ಇಲಾಖೆಗಳ ಅಧಿಕಾರಿಗಳು, ಪರೀಕ್ಷಾ ಕೇಂದ್ರಗಳ ವೀಕ್ಷಕರು, ಮಾಸ್ಟರ್ ಟ್ರೇನರ್‌ಗಳು, ಮಾರ್ಗಾಧಿಕಾರಿಗಳು, ಉಪ ಮುಖ್ಯ ಅಧೀಕ್ಷಕರು, ವಸ್ತç ಸಂಹಿತೆ ಅಧಿಕಾರಿಗಳು ಹಾಗೂ ಇತರೆ ಸಿಬ್ಬಂದಿ ಉಪಸ್ಥಿತರಿದ್ದರು.

(Visited 1 times, 1 visits today)