ತುಮಕೂರು: ಗ್ರಾಮೀಣ ಭಾಗದ ರೈತರು, ಕೂಲಿಕಾರ್ಮಿಕರು ಸೇರಿದಂತೆ ಸಾರ್ವಜನಿಕರ ಸಮಸ್ಯೆಗಳಿಗೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು. ಜನರು ತಮ್ಮ ಕೆಲಸಗಳಿಗಾಗಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಸರ್ಕಾರವೇ ಜನರ ಮನೆ ಬಾಗಿಲಿಗೆ ತೆರಳಿ ಅವರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಉದ್ದೇಶದಿಂದ ಪ್ರಜಾ ಸೇವಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿ, ಕಂದಾಯ ಹಾಗೂ ಕ್ರೀಡಾ ಸಚಿವ ಡಾ: ಜಿ. ಪರಮೇಶ್ವರ ಹೇಳಿದರು.
ಜಿಲ್ಲೆಯ ಕುಣಿಗಲ್ ತಾಲ್ಲೂಕು ಹುಲಿಯೂರುದುರ್ಗದ ಶ್ರೀ ಲಕ್ಷಿö್ಮÃ ವೆಂಕಟೇಶ್ವರ (ಎಸ್.ಎಲ್.ವಿ.) ಕಲ್ಯಾಣ ಮಂಟಪದಲ್ಲಿ ಶನಿವಾರ ನಡೆದ ಪ್ರಜಾ ಸೇವಾ ಅಭಿಯಾನದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದ ಅವರು, ರೈತರು ಹಾಗೂ ಗ್ರಾಮೀಣ ಭಾಗದ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಅಧಿಕಾರಿಗಳು ಮಾನವೀಯತೆಯಿಂದ ಆಲಿಸಿ, ಕಾಲಮಿತಿಯಲ್ಲಿ ಪರಿಹರಿಸಬೇಕು. ಸಾರ್ವಜನಿಕರು ಸಲ್ಲಿಸುವ ಅರ್ಜಿಗಳನ್ನು ಕಚೇರಿಗಳಲ್ಲಿ ಹಾಗೆಯೇ ಉಳಿಸಿಕೊಂಡರೆ ಸಂಬAಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಬರ ಪರಿಸ್ಥಿತಿ, ಕುಡಿಯುವ ನೀರು ಹಾಗೂ ಜಾನುವಾರು ಮೇವಿನ ಸಮಸ್ಯೆ ಸೇರಿದಂತೆ ರೈತರು ಈ ವರ್ಷ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಬಹಳ ವರ್ಷಗಳ ನಂತರ ಬರ ಪರಿಸ್ಥಿತಿ ಎದುರಾಗಿದ್ದು, ಬೆಳೆ ನಷ್ಟದಿಂದ ರೈತರು ಈಗಾಗಲೇ ಸಂಕಷ್ಟದಲ್ಲಿದ್ದಾರೆ. ರೈತರ ಸಮಸ್ಯೆಗಳನ್ನು ನೇರವಾಗಿ ಆಲಿಸಿ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.
ಸರ್ಕಾರದಿAದ ವಿವಿಧ ಯೋಜನೆಗಳಡಿ ಅಗತ್ಯ ಅನುದಾನವನ್ನು ಬಿಡುಗಡೆ ಮಾಡಲಾಗಿದೆಯಲ್ಲದೆ, ಮನೆ ಹಾಗೂ ನಿವೇಶನ ರಹಿತರಿಗೆ ನಿವೇಶನ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದ್ದು, ಡಿಸೆಂಬರ್ ಒಳಗಾಗಿ ೫ ಲಕ್ಷ ನಿವೇಶನಗಳನ್ನು ನೀಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಸಾರ್ವಜನಿಕರು ಸಲ್ಲಿಸುವ ಪ್ರತಿಯೊಂದು ಅಹವಾಲಿಗೂ ಸಂಬAಧಿಸಿದ ಅಧಿಕಾರಿಗಳು ಆದ್ಯತೆ ನೀಡಿ ಪರಿಹಾರ ಒದಗಿಸಬೇಕು. ಸರ್ಕಾರದ ಸೇವೆಗಳು ಜನರಿಗೆ ಸುಲಭವಾಗಿ ದೊರೆಯುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಸರ್ಕಾರದ ವಿವಿಧ ಯೋಜನೆ ಹಾಗೂ ಜನಪರ ಕಾರ್ಯಕ್ರಮಗಳ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ನೋಡಿಕೊಳ್ಳಬೇಕು. ಯಾವುದೇ ಅರ್ಹ ವ್ಯಕ್ತಿ ಸರ್ಕಾರಿ ಸೇವೆಗಳಿಂದ ವಂಚಿತರಾಗದAತೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದರು.
ಜನರ ಬಳಿಗೆ ಆಡಳಿತವನ್ನು ಕೊಂಡೊಯ್ದು, ಅವರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಆಲಿಸಿ, ಸಾಧ್ಯವಾದಷ್ಟು ತ್ವರಿತವಾಗಿ ಪರಿಹಾರ ಕಲ್ಪಿಸುವ ಉದ್ದೇಶದಿಂದ ಇಂತಹ ಜನಸ್ಪಂದನಾ ಸಭೆಗಳನ್ನು ಆಯೋಜಿಸಲಾಗುತ್ತಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸುವುದು, ಅವರ ಅಹವಾಲುಗಳಿಗೆ ಪರಿಹಾರ ಒದಗಿಸುವುದು ಮತ್ತು ಪಾರದರ್ಶಕ ಹಾಗೂ ಜನಸ್ನೇಹಿ ಆಡಳಿತ ನೀಡುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಹೇಳಿದರು.
ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಸಾರ್ವಜನಿಕರು ತಮಗೆ ಸರ್ಕಾರದಿಂದ ಸಿಗಬೇಕಾದ ನೆರವು, ಸವಲತ್ತು ಹಾಗೂ ವಿವಿಧ ಸಮಸ್ಯೆಗಳನ್ನು ನೇರವಾಗಿ ಉಪ ಮುಖ್ಯಮಂತ್ರಿ ಡಾ: ಜಿ. ಪರಮೇಶ್ವರ ಅವರ ಗಮನಕ್ಕೆ ತಂದರು.
ಅಭಿಯಾನದಲ್ಲಿ ಪಿಂಚಣಿ ಸಮಸ್ಯೆ, ವಸತಿ, ರಸ್ತೆ, ಕುಡಿಯುವ ನೀರು, ವಿದ್ಯುತ್, ಆರೋಗ್ಯ, ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಬAಧಿಸಿದ ಸಮಸ್ಯೆಗಳ ಕುರಿತು ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಲಾಯಿತು.
ಸಾರ್ವಜನಿಕರಿಂದ ಸ್ವೀಕರಿಸಿದ ಪ್ರತಿಯೊಂದು ಅರ್ಜಿಯನ್ನು ಸಂಬAಧಿಸಿದ ಇಲಾಖೆಯ ಅಧಿಕಾರಿಗಳು ಪರಿಶೀಲಿಸಿ, ಅರ್ಹ ಪ್ರಕರಣಗಳಲ್ಲಿ ಕಾಲಮಿತಿಯೊಳಗೆ ತ್ವರಿತವಾಗಿ ವಿಲೇವಾರಿ ಮಾಡುವಂತೆ ಡಿಸಿಎಂ ಪರಮೇಶ್ವರ ಅವರು ಸೂಚನೆ ನೀಡಿದರು.
ಬಾಕಿ ಉಳಿದಿರುವ ಸಮಸ್ಯೆಗಳಿಗೆ ಆದ್ಯತೆ ನೀಡಿ, ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಿಮ್ಮ ಸಮಸ್ಯೆ ನಮ್ಮ ಜವಾಬ್ದಾರಿ:
ಕುಣಿಗಲ್ ಶಾಸಕ ಡಾ|| ಹೆಚ್.ಡಿ. ರಂಗನಾಥ್ ಮಾತನಾಡಿ, ರೈತರು, ಕಾರ್ಮಿಕರು, ಮಹಿಳೆಯರು ಸೇರಿದಂತೆ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವುದು ನಮ್ಮ ಜವಾಬ್ದಾರಿಯಾಗಿದೆ. ಜನರ ಸಮಸ್ಯೆ, ನೋವು ಮತ್ತು ಅಹವಾಲುಗಳನ್ನು ಆಲಿಸಿ ಪರಿಹರಿಸಲು ಸರ್ಕಾರ ಸಿದ್ಧವಿದೆ. ನಿಮ್ಮ ಸಮಸ್ಯೆ ನಮ್ಮ ಜವಾಬ್ದಾರಿ ಎಂಬ ಮನೋಭಾವದಿಂದ ಕೆಲಸ ಮಾಡುತ್ತೇವೆ ಎಂದರು.
ಸರ್ಕಾರವೇ ಇಂದು ನಿಮ್ಮ ಬಳಿಗೆ ಬಂದಿದೆ. ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ನಿಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತರಬೇಕು. ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸುವಂತೆ ಡಾ. ಜಿ.ಪರಮೇಶ್ವರ ಅವರಿಗೆ ಮನವಿ ಮಾಡಿದರಲ್ಲದೆ, ಕುಣಿಗಲ್ ಕ್ಷೇತ್ರದ ಅಭಿವೃದ್ಧಿ ಹಾಗೂ ವಿವಿಧ ಕಾಮಗಾರಿಗಳಿಗಾಗಿ ೭೫ ಕೋಟಿ ರೂ. ಅನುದಾನ ಬಿಡುಗಡೆ ಮಾಡಿರುವುದಕ್ಕೆ ಉಪಮುಖ್ಯಮಂತ್ರಿಗಳಿಗೆ ಧನ್ಯವಾದ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ವಿ.ಅಶ್ವಿಜ, ಅಪರ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ಉಪ ವಿಭಾಗಾಧಿಕಾರಿ ನಾಹಿದಾ ಜûಂ ಜûಂ, ತಹಶೀಲ್ದಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
(Visited 1 times, 1 visits today)



