BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ
  • ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ
  • ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ
  • ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ
  • ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 
  • KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್
  • ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ
  • ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ
news

ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ

By News Desk BenkiyabaleUpdated:September 21, 2026 5:56 pm

ತುಮಕೂರು: ಅತಿ ಕಡಿಮೆ ವೇತನಕ್ಕೆ ದುಡಿಯುತ್ತಿರುವ ಸ್ಥಳೀಯ ಸಂಸ್ಥೆಗಳ ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಬೇಕು. ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕು, ಸೇವಾ ಅವಧಿಯಲ್ಲಿ ಮೃತರಾದರೆ ೧೦ ಲಕ್ಷ ರೂ ಇಡಿ ಗಂಟು ನೀಡಬೇಕೆಂದು ಆಗ್ರಹಿಸಿ ಇಂದು ಕರ್ನಾಟಕ ರಾಜ್ಯ ಪೌರ ನೀರು ಸರಬರಾಜು ನೌಕರರ ಮಹಾ ಸಂಘ(ರಿ) ವತಿಯಿಂದ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.
ಸಂಘದ ರಾಜ್ಯಾಧ್ಯಕ್ಷ ಪಾವಗಡ ಶ್ರೀರಾಮ್ ನೇತೃತ್ವದಲ್ಲಿ ನೂರಾರು ಪೌರ ನೀರು ಸರಬರಾಜು ನೌಕರರು ನಗರದ ಸಿದ್ದಗಂಗಾ ಮಠದಿಂದ ಮುಖ್ಯಮಂತ್ರಿಗಳ ನಿವಾಸದವರೆಗೆ ಹಮ್ಮಿಕೊಂಡಿರುವ ಪಾದಯಾತ್ರೆಗೆ ನಗರದ ಟೌನ್‌ಹಾಲ್ ಮುಂಭಾಗದಲ್ಲಿರುವ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಯ ಮುಂಭಾಗದಿAದ ಚಾಲನೆ ದೊರೆಯಿತು.
ಈ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ ಪೌರ ಸೇವಾ ನೀರು ಸರಬರಾಜು ನೌಕರರ ಮಹಾ ಸಂಘದ ರಾಜ್ಯಾಧ್ಯಕ್ಷ ಪಾವಗಡ ಶ್ರೀರಾಮ್,ಸತತ ೨೫ಕ್ಕೂ ಹೆಚ್ಚು ವರ್ಷಗಳಿಂದ ಮಳೆ,ಚಳಿ,ಹಬ್ಬ, ಹರಿದಿನಗಳೆನ್ನದೆ ಜೀವ ಜಲ ಸರಬರಾಜು ಮಾಡುತ್ತಿರುವ ನೌಕರರಿಗೆ ಇಲ್ಲಿಯವರೆಗೂ ಕನಿಷ್ಠ ವೇತನ ಇಲ್ಲ.ಸೇವಾ ಭದ್ರತೆ ಇಲ್ಲ.ಮೂರು ತಿಂಗಳಿಗೋ, ಆರು ತಿಂಗಳಿಗೋಮ್ಮೆ ವೇತನ ನೀಡಲಾಗುತ್ತಿದೆ. ಇದರಿಂದ ನೀರು ಸರಬರಾಜು ನೌಕರರು ಜೀವನ ನಡೆಸುವುದು ಕಷ್ಟವಾಗಿದೆ.ಅಲ್ಲದೆ ನೀರು ಸರಬರಾಜು ನೌಕರರ ಹುದ್ದೆಯಲ್ಲಿರುವ ಕೆಲವರನ್ನು ಕಂಪ್ಯೂಟರ್ ಅಪರೇಟರ್,ಪೀವನ್ ಕೆಲಸಕ್ಕೆ ನೇಮಿಸಿಕೊಂಡು ಪುಲ್‌ಟೈಮ್ ಕೆಲಸ ಮಾಡಿಸಿಕೊಳ್ಳುತ್ತಿರುವ ಪಾಲಿಕೆಯ ಹಿರಿಯ ಅಧಿಕಾರಿಗಳು, ವೇತನವನ್ನು ಮಾತ್ರ ನೀರು ಸರಬರಾಜು ನೌಕರರ ಹೆಸರಿನಲ್ಲಿ ನೀಡುತ್ತಿದ್ದಾರೆ. ಇವರಿಗೆ ಹೆರಿಗೆ ರಜೆ ಇಲ್ಲ.ಕನಿಷ್ಠ ವೇತನ,ಭತ್ಯೆಗಳಿಲ್ಲ.ಹಾಗಾಗಿ ನಮ್ಮನ್ನು ನೇರ ನೇಮಕಾತಿ ಮತ್ತು ನೇರ ಪಾವತಿಗೆ ಒಳಪಡಿಸಬೇಕು ಹಾಗೆಯೇ ನಿವೃತ್ತಿ ಅಥವಾ ಮೃತರಾದ ಸಂದರ್ಭದಲ್ಲಿ ಹತ್ತು ಲಕ್ಷ ರೂ ಇಡಿಗಂಟು ನೀಡಬೇಕೆಂಬುದು ನಮ್ಮ ಬೇಡಿಕೆಯಾಗಿದೆ ಎಂದರು.
ಕಳೆದ ೨೫ ವರ್ಷಗಳ ನಮ್ಮ ಹೋರಾಟಕ್ಕೆ ಅಧಿಕಾರಿಗಳು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ.ಇದುವರೆಗೂ ನಮಗೆ ಅಧಿಕೃತ ಸಂಘ ಇರಲಿಲ್ಲ.ಬೇರೆ ಸಂಘಟನೆಗಳ ಜೊತೆ ಸೇರಿ ಹೋರಾಟ ಮಾಡಬೇಕಿತ್ತು.ಆದರೆ ಕಳೆದ ಎರಡು ವರ್ಷಗಳಿಂದ ನಮ್ಮದೇ ಆದ ಸಂಘಟನೆ ಇದೆ. ನಮ್ಮ ಹೋರಾಟಕ್ಕೆ ಸ್ಪಂದಿಸಿ, ಸರಕಾರ ನೇರ ನೇಮಕಾತಿ ಪ್ರಸ್ತಾವನೆಯನ್ನು ಹಣಕಾಸು ಇಲಾಖೆಗೆ ಕಳುಹಿಸಿದೆ.ಆದರೆ ತಾಂತ್ರಿಕ ಕಾರಣದಿಂದ ಹಣಕಾಸು ಇಲಾಖೆ ಪೌರಾಡಳಿತ ಇಲಾಖೆಗೆ ವಾಪಸ್ಸು ಮಾಡಿದೆ.ಈ ಬಾರಿ ರಾಜ್ಯದ ೬ ಸಾವಿರ ನೀರು ಸರಬರಾಜು ನೌಕರರು ಒಗ್ಗೂಡಿ, ಮುಖ್ಯಮಂತ್ರಿಗಳ ಮನೆಯವರೆಗೆ ಪಾದಯಾತ್ರೆ ಕೈಗೊಂಡಿದ್ದು, ಸರಕಾರದ ಸ್ಪಷ್ಟ ಆದೇಶ ಬರುವವರೆಗೂ ಹೋರಾಟದಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಪಾವಗಡ ಶ್ರೀರಾಮ್ ಸ್ಪಷ್ಟಪಡಿಸಿದರು.
ಪೌರ ನೀರು ಸರಬರಾಜು ನೌಕರರ ಪಾದಯಾತ್ರೆಗೆ ಬೆಂಬಲ ಸೂಚಿಸಿ ಮಾತನಾಡಿದ ಕನ್ನಡ ಸೇನೆಯ ಜಿಲ್ಲಾಧ್ಯಕ್ಷ ಹಾಗೂ ರಾಜ್ಯ ಹಿಂದುಳಿದ ವರ್ಗಗಳ ಒಕ್ಕೂಟದ ರಾಜ್ಯ ಉಪಾಧ್ಯಕ್ಷ ಧನಿಯಕುಮಾರ್, ನೀರು ಸರಬರಾಜು ನೌಕರರ ಬೇಡಿಕೆಗಳು ನ್ಯಾಯಯುತವಾಗಿವೆ.ಅತ್ಯಂತ ಕಡಿಮೆ ವೇತನಕ್ಕೆ ದುಡಿಯುತ್ತಿರುವ ನೌಕರರಿಗೆ ನ್ಯಾಯ ಸಿಗಬೇಕು. ಇಂದಿನ ಬೆಲೆ ಹೆಚ್ಚಳದ ಸಂದರ್ಭದಲ್ಲಿ ಸರಕಾರ ಇವರ ಮನವಿಗೆ ಸ್ಪಂದಿಸಬೇಕು.ಅಲ್ಲದೆ ಪೌರಕಾರ್ಮಿಕರು, ನೀರು ಸರಬರಾಜು ನೌಕರರ ಮಕ್ಕಳಿಗೆ ಉಚಿತ ಶಿಕ್ಷಣ ಮತ್ತು ಆರೋಗ್ಯ ಸೇವೆ ನೀಡಬೇಕೆಂದು ಒತ್ತಾಯಿಸಿದರು.
ಪೌರಾಯುಕ್ತೆ ಶುಭ ಮಾತನಾಡಿ, ೨೦೧೬ ರಲ್ಲಿಯೇ ಇಲಾಖೆಯ ಮುಂದೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ೨೦೧೭ ರಲ್ಲಿ ವಿಶಾಲ್ ಅವರು ಪೌರಾಡಳಿತ ಇಲಾಖೆಯ ಆಯುಕ್ತರಾಗಿದ್ದ ಸಂದರ್ಭದಲ್ಲಿ ನೇರ ನೇಮಕ ಹಾಗೂ ನೇರಪಾವತಿಗೆ ಒಳಪಡಿಸುವ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಿದ್ದು, ಸರಕಾರದ ಮುಂದಿದೆ.ಅಲ್ಲದೆ ಕನಿಷ್ಠ ವೇತನ ಯೋಜನೆಗೆ ತಾತ್ಕಾಲಿಕ ತಡೆ ಇದೆ. ಅದು ತೆರವಾದ ತಕ್ಷಣ ತುಮಕೂರು ಪಾಲಿಕೆಯವತಿಯಿಂದ ಎಲ್ಲಾ ಪೌರ ಸೇವಾ ನೌಕರರಿಗೆ ಕನಿಷ್ಠ ವೇತನ ಜಾರಿಗೊಳಿಸಲು ಸಿದ್ದ,ಸೆಪ್ಟಂಬರ್ ೨೩ಕ್ಕೆ ಪೌರಕಾರ್ಮಿಕರ ದಿನಾಚರಣೆ ಇದ್ದು, ಅವರ ರೀತಿಯಲ್ಲಿಯೇ ನೀರು ಸರಬರಾಜು ನೌಕರರ ದಿನವನ್ನು ಆಚರಿಸುವಂತಾಗಲಿ ಎಂದು ಪಾದಯಾತ್ರೆ ಶುಭ ಕೋರಿದರು.
ಈ ವೇಳೆ ದಸಂಸ ಮುಖಂಡ ಕಿರಣ್‌ಕುಮಾರ್,ಕರ್ನಾಟಕ ರಾಜ್ಯ ಪೌರ ನೀರು ಸರಬರಾಜು ನೌಕರರ ಮಹಾ ಸಂಘದ ಉಪಾಧ್ಯಕ್ಷರಾದ ಸತೀಶ್, ಮಂಜುನಾಥ್.ಡಿ.ಆರ್, ಪುರುಷೋತ್ತಮ್, ಪ್ರಧಾನ ಕಾರ್ಯದರ್ಶಿಗಳಾದ ಕಿರಣಕುಮಾರ್, ನವೀನಾಕ್ಷ,ರಮೇಶ್.ಕೆ.ಎಸ್ ಸೇರಿದಂತೆ ಎಲ್ಲಾ ಪದಾಧಿಕಾರಿಗಳು ಭಾಗವಹಿಸಿದ್ದರು.
ತುಮಕೂರು ನಗರದಿಂದ ಹೊರಟ ಪಾದಯಾತ್ರೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ನಂತರ,ರಾತ್ರಿ ಸಿದ್ದಗಂಗಾ ಮಠದಲ್ಲಿ ತಂಗಲಿದ್ದು,ಮAಗಳವಾರ ಬೆಳಗ್ಗೆ ಮಠದಿಂದ ಮುಂದೆ ಸಾಗಲಿದೆ.

(Visited 1 times, 1 visits today)
kannada news karnataka local news Protest tumakur tumkur tumkur news ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು:
Previous Articleಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ
News Desk Benkiyabale

Related Posts

ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ

September 21, 2026 5:54 pm news

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm news

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm news
ತಾಜಾ ಸುದ್ಧಿಗಳು
news

ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ

September 21, 2026 5:56 pm
news

ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ

September 21, 2026 5:54 pm
news

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm
news

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm
news

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 

September 19, 2026 6:04 pm
news

KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್

September 19, 2026 5:39 pm
Our Youtube Channel
Our Picks

ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ

September 21, 2026 5:56 pm

ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ

September 21, 2026 5:54 pm

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 

September 19, 2026 6:04 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ

By News Desk BenkiyabaleSeptember 21, 2026 5:56 pm

ತುಮಕೂರು: ಅತಿ ಕಡಿಮೆ ವೇತನಕ್ಕೆ ದುಡಿಯುತ್ತಿರುವ ಸ್ಥಳೀಯ ಸಂಸ್ಥೆಗಳ ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಬೇಕು. ಪೌರಕಾರ್ಮಿಕರ ರೀತಿ…

ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ

September 21, 2026 5:54 pm

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.