ತುಮಕೂರು: ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ದೈವಾರ್ಷಿಕ ಚುನಾವಣೆಯನ್ನು ಅಕ್ಟೋಬರ್ ೨೩ರಂದು ನಡೆಸಲು ಘೋಷಿಸಿದ್ದು, ಚುನಾವಣೆಗೆ ಸಂಬAಧಿಸಿದAತೆ ಸೆಪ್ಟೆಂಬರ್ ೨೨ರಿಂದಲೇ ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ದೈವಾರ್ಷಿಕ ಚುನಾವಣೆ-೨೦೨೬ ಹಾಗೂ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ(SIಖ)-೨೦೨೬ರ ಹಿನ್ನೆಲೆಯಲ್ಲಿ ಹಕ್ಕು ಮತ್ತು ಆಕ್ಷೇಪಣೆಗಳ ಕುರಿತು ಗುರುವಾರ ನಡೆದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಚುನಾವಣೆ ಸಂಬAಧ ಆಯೋಗವು ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ವೇಳಾಪಟ್ಟಿಯನ್ವಯ ಸೆಪ್ಟೆಂಬರ್ ೨೯ರಂದು ಅಧಿಸೂಚನೆ ಹೊರಡಿಸಲಾಗುವುದು. ಅಕ್ಟೋಬರ್ ೬ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಅ.೭ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅ.೯ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ. ಅ.೨೩ರಂದು ಬೆಳಗ್ಗೆ ೮ ರಿಂದ ಸಂಜೆ ೪ ಗಂಟೆಯವರೆಗೆ ಮತದಾನ ನಡೆಯಲಿದ್ದು, ಅ.೨೭ರಂದು ಮತಗಳ ಎಣಿಕೆ ನಡೆಯಲಿದೆ ಹಾಗೂ ಅಕ್ಟೋಬರ್ ೩೧ರಂದು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.
ಕರ್ನಾಟಕ ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ದೈವಾರ್ಷಿಕ ಚುನಾವಣೆಗೆ ಸಂಬAಧಿಸಿದAತೆ ಜಿಲ್ಲೆಯ ೧೧ ವಿಧಾನಸಭಾ ಕ್ಷೇತ್ರಗಳಲ್ಲಿ ೨೦೨೫ರ ಡಿಸೆಂಬರ್ ೩೦ರ ಅಂತ್ಯಕ್ಕೆ ೪೮,೨೯೧ ಮತದಾರರಿದ್ದರು. ಮತದಾರರ ಪಟ್ಟಿಯ ನಿರಂತರ ಪರಿಷ್ಕರಣೆಯಿಂದ ೭೮೩ ಮತದಾರರು ಸೇರ್ಪಡೆಯಾಗಿದೆ. ಇದರಿಂದ ಸೆ.೨೩ರ ಅಂತ್ಯಕ್ಕೆ ಜಿಲ್ಲೆಯ ಒಟ್ಟು ಪದವೀಧರ ಮತದಾರರ ಸಂಖ್ಯೆ ೪೯,೦೭೪ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಪಾವಗಡದಲ್ಲಿ ೪೬೩೬, ಮಧುಗಿರಿ-೪೫೬೭, ಶಿರಾ-೫೭೦೮, ಚಿಕ್ಕನಾಯಕನಹಳ್ಳಿ-೩೩೩೭, ತಿಪಟೂರು-೪೦೨೪, ತುರವೇಕೆರೆ-೨೬೦೦, ಕುಣಿಗಲ್-೨೨೩೯, ಗುಬ್ಬಿ-೩೭೮೫, ತುಮಕೂರು ನಗರ-೧೦೫೯೫, ತುಮಕೂರು ಗ್ರಾಮಾಂತರ-೪೭೯೯ ಹಾಗೂ ಕೊರಟಗೆರೆ ತಾಲ್ಲೂಕಿನಲ್ಲಿ ೨೭೮೪ ಸೇರಿದ ಒಟ್ಟು ೪೯೦೭೪ ಪದವೀಧರ ಮತದಾರರಿದ್ದಾರೆ. ಮತದಾನಕ್ಕಾಗಿ ಜಿಲ್ಲೆಯಲ್ಲಿ ೫೭ ಮುಖ್ಯ ಹಾಗೂ ೨೩ ಆಕ್ಸೀಲರಿ ಸೇರಿ ಒಟ್ಟು ೮೦ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ಮಾಹಿತಿ ನೀಡಿದರು.
ಮಾದರಿ ನೀತಿ ಸಂಹಿತೆ(ಎAಸಿಸಿ) ಅನುಷ್ಠಾನಕ್ಕಾಗಿ ೫೨ ಪ್ಲೆöÊಯಿಂಗ್ ಸ್ಕಾ÷್ವಡ್(ಎಸ್‌ಎಸ್‌ಟಿ), ೫೮ ಸ್ಟಾö್ಯಟಿಕ್ ಸರ್ವೇಲೆನ್ಸ್ ತಂಡವನ್ನು ನೇಮಿಸಲಾಗಿದೆ. ಈ ಚುನಾವಣೆಯಲ್ಲಿ ಮತಪತ್ರ(ಬ್ಯಾಲೆಟ್ ಪೇಪರ್)ವನ್ನು ಬಳಸಿ ಚುನಾವಣೆ ನಡೆಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಚುನಾವಣಾ ಪ್ರಕ್ರಿಯೆ, ಮತದಾರರ ಪಟ್ಟಿ ಹಾಗೂ ಹಕ್ಕು-ಆಕ್ಷೇಪಣೆಗಳಿಗೆ ಸಂಬAಧಿಸಿದ ಮಾಹಿತಿಯನ್ನು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ನೀಡಲಾಯಿತು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಹಾಗೂ ರಾಜಕೀಯ ಪಕ್ಷದ ಪ್ರತಿನಿಧಿಗಳು ಸೇರಿದಂತೆ ಮತ್ತಿತರರು ಇದ್ದರು.
(Visited 1 times, 1 visits today)



