ತುಮಕೂರು: ನಗರದ ಬಿಜಿಎಸ್ ವೃತ್ತದ ನಾಗರಕಟ್ಟೆ ಗಣಪತಿ ದೇವಸ್ಥಾನದ ಆವರಣದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾಗಣಪತಿಯ ವಿಸರ್ಜನಾ ಮಹೋತ್ಸವದ ಶೋಭಾಯಾತ್ರೆ ಅಕ್ಟೋಬರ್ ೩ರಂದು ಶನಿವಾರ ಅದ್ದೂರಿಯಾಗಿ ನಡೆಯಲಿದೆ. ೧೮ ಅಡಿ ಎತ್ತರದ, ಆಯುಧ ಧಾರಿ ಬೃಹತ್ ಗಣೇಶ ಮೂರ್ತಿಯ ಮೆರವಣಿಗೆ ವಿಶೇಷ ಆಕರ್ಷಣೆಯಾಗಲಿದೆ ಎಂದು ಗಣೇಶೋತ್ಸವ ಸ್ವಾಗತ ಸಮಿತಿ ಅಧ್ಯಕ್ಷ ಟಿ.ಬಿ. ಶೇಖರ್ ತಿಳಿಸಿದ್ದಾರೆ.
ಅ.೩ರಂದು ಬೆಳಿಗ್ಗೆ ೧೧ ಗಂಟೆಗೆ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ಆದಿಚುಂಚನಗಿರಿ ಮಹಾಸಂಸ್ಥಾನದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಗಣೇಶನಿಗೆ ಪೂಜೆ ಸಲ್ಲಿಸುವರು.ಇದೇ ವೇಳೆ ೧೮ ಎತ್ತರದ ಮೆರವಣಿU ಗಣೇಶ ಮೂರ್ತಿಗೆ ಪೂಜ್ಯರು ಪೂಜೆ ಸಲ್ಲಿಸಿ ಶೋಭಾಯಾತ್ರೆಗೆ ಚಾಲನೆ ನೀಡುವರು. ವಿವಿಧ ಮಠಗಳ ಮಠಾಧೀಶರು, ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಮಾಜಿ ಸಚಿವ ಸೊಗಡು ಶಿವಣ್ಣ ಸೇರಿದಂತೆ ಹಲವಾರು ರಾಜಕೀಯ ಮುಖಂಡರು, ಧಾರ್ಮಿಕ ಮುಖಂಡರು, ಹಲವು ಗಣ್ಯರು ಭಾಗವಹಿಸುವರು ಎಂದು ಹೇಳಿದ್ದಾರೆ.
ಈ ಬಾರಿ ಕರಾವಳಿ ಭಾಗದ ಹೆಸರಾಂತ ೨೦೦ಕ್ಕೂ ಹೆಚ್ಚು ಕಲಾವಿದರು ಒಳಗೊಂಡ ಮಂಗಳೂರು ಭಜನಾ ತಂಡ, ಪ್ರಸಿದ್ಧ ಚಂಡೆ ವಾದ್ಯ ತಂಡವು ವಯಲಿನ್ವಾದನ ನಾದದೊಂದಿಗೆ ಶೋಭಾಯಾತ್ರೆಯಲ್ಲಿ ಪ್ರದರ್ಶನ ನೀಡಿ ಗಮನ ಸೆಳೆಯಲಿವೆ. ಇದಲ್ಲದೆ, ಪೂರ್ಣಕುಂಭ, ಮಂಗಳವಾದ್ಯ, ಹೆಸರಾಂತ ಜಾನಪದ ಕಲಾ ತಂಡಗಳ ಆಕರ್ಷಕ ಪ್ರದರ್ಶನ, ಮಹಾಪುರುಷರ ಪುತ್ಥಳಿಗಳ ಪ್ರದರ್ಶನ ಶೋಭಾಯಾತ್ರೆಯ ವೈಭವವನ್ನು ಇಮ್ಮಡಿಗೊಳಿಸಲಿವೆ. ಇಂತಹ ಅಪರೂಪದ ದೃಶ್ಯಾವಳಿಗಳನ್ನು ಕಣ್ಣು ತುಂಬಿಕೊಳ್ಳಲು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಗಣೇಶ ವಿಸರ್ಜನಾ ಮಹೋತ್ಸವದ ಸಂಭ್ರಮದಲ್ಲಿ ಭಾಗಿಯಾಗಬೇಕು ಎಂದು ಟಿ.ಬಿ. ಶೇಖರ್ ಕೋರಿದ್ದಾರೆ.
ಗಣೇಶ ವಿಸರ್ಜನಾ ಮಹೋತ್ಸವದ ಶೋಭಾಯಾತ್ರೆಯು ಅಂದು ಬೆಳಿಗ್ಗೆ ೧೧ ಗಂಟೆಗೆ ಆರಂಭಗೊAಡು ಬಿಜಿಎಸ್ ವೃತ್ತ, ಲಕ್ಕಪ್ಪ ವೃತ್ತ, ಮಂಡಿಪೇಟೆ ವೃತ್ತ, ಸ್ವಾತಂತ್ರ ಚೌಕ, ಅಶೋಕ ರಸ್ತೆ ಮೂಲಕ ಬಿಜಿಎಸ್ ವೃತ್ತ, ಬಿ.ಹೆಚ್. ರಸ್ತೆ, ಎಂ.ಜಿ.ರಸ್ತೆ, ರಾಮಪ್ಪ ವೃತ್ತ, ಅಂಬೇಡ್ಕರ್ರಸ್ತೆ ಮೂಲಕ ಕೋಟೆ ಆಂಜನೇಯ ಸ್ವಾಮಿ ವೃತ್ತ, ಗಾರ್ಡನ್ ರಸ್ತೆಯಲ್ಲಿ ಶೋಭಾಯಾತ್ರೆ ಸಾಗಲಿದೆ.ಕೊನೆಗೆ ಕೆ.ಎನ್.ಎಸ್ಕಲ್ಯಾಣಿಯಲ್ಲಿ ಹಿಂದೂ ಮಹಾ ಗಣಪತಿ ವಿಸರ್ಜನಾ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದ್ದಾರೆ.
(Visited 1 times, 1 visits today)





