
ತುಮಕೂರು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೆಪ್ಟೆಂಬರ್ ೨೧ರಂದು ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆ, ಬೆಳೆ ನಷ್ಟ, ಮೇವಿನ ಸಮಸ್ಯೆ ಹಾಗೂ ಕೊಳವೆ ಬಾವಿಗಳಲ್ಲಿ ನೀರಿನ ಲಭ್ಯತೆ ಕುರಿತು ಸ್ಥಳ ಪರಿಶೀಲನೆ ನಡೆಸಿದ್ದರು.
ಕಣಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿ ಬನ್ನಿಕುಪ್ಪೆ ಹಾಗೂ ಚೆನ್ನವಳ್ಳಿ ಗ್ರಾಮ ಮತ್ತು ಊರ್ಡಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾತಘಟ್ಟ ಗ್ರಾಮದಲ್ಲಿ ಕೊರೆಯಲಾಗಿದ್ದ ಕೊಳವೆಬಾವಿಗಳು ವಿಫಲವಾಗಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಹೊಸ ಕೊಳವೆಬಾವಿಗಳನ್ನು ಕೊರೆದು ಕುಡಿಯುವ ನೀರೊದಗಿಸುವಂತೆ ಜಿಲ್ಲಾಧಿಕಾರಿಗಳ ಭೇಟಿ ಸಂದರ್ಭದಲ್ಲಿ ಮನವಿ ಮಾಡಿದ್ದರು.
ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು, ಸಂಬAಧಿಸಿದ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರರು ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು. ಅದರಂತೆ, ಹೊಸ ಕೊಳವೆಬಾವಿ ಕೊರೆಯಲು ಸೂಕ್ತ ಸ್ಥಳಗಳನ್ನು ಗುರುತಿಸಿ ಕ್ರಮವಹಿಸಿದ್ದು, ಕಣಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬನ್ನಿಕುಪ್ಪೆ ಹಾಗೂ ಚೆನ್ನವಳ್ಳಿ ಮತ್ತು ಊರ್ಡಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾತಘಟ್ಟ ಗ್ರಾಮಗಳಲ್ಲಿ ಹೊಸ ಕೊಳವೆಬಾವಿ ಕೊರೆಯಲಾಗಿದ್ದು, ಮೂರು ಸ್ಥಳಗಳಲ್ಲಿಯೂ ಉತ್ತಮ ಪ್ರಮಾಣದಲ್ಲಿ ನೀರು ಲಭ್ಯವಾಗಿದೆ. ನೀರಿನ ಸಮಸ್ಯೆಗೆ ಪರಿಹಾರ ಒದಗಿಸಿದ ಜಿಲ್ಲಾಧಿಕಾರಿಗಳ ಸ್ಪಂದನೆಗೆ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.
ಮೂರು ಕೊಳವೆಬಾವಿಗಳಿಂದ ಗ್ರಾಮಸ್ಥರಿಗೆ ಶೀಘ್ರವಾಗಿ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ, ಹೊಸ ಪಂಪ್ ಹಾಗೂ ಮೋಟರ್ಗಳನ್ನು ಅಳವಡಿಸಿ ಅಗತ್ಯ ನೀರು ಪೂರೈಕೆ ವ್ಯವಸ್ಥೆ ಕಲ್ಪಿಸುವಂತೆ ಸಂಬAಧಿಸಿದ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿರುತ್ತಾರೆ.




