ತುಮಕೂರು: ಕಂದಾಯ ಇಲಾಖೆಗೆ ಸಂಬAಧಿಸಿದ ವಿಷಯಗಳ ಕುರಿತಂತೆ ಉಪ- ವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರರು ನಾಡಕಚೇರಿಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ಥಳೀಯ ಮಟ್ಟದಲ್ಲಿಯೇ ಪರಿಶೀಲಿಸಿ ತ್ವರಿತವಾಗಿ ಪರಿಹರಿಸಲು ಜಿಲ್ಲಾಡಳಿತದಿಂದ ವಿಶೇಷ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
ಜಿಲ್ಲಾದ್ಯಂತ ಹಮ್ಮಿಕೊಳ್ಳುವ ಪ್ರಜಾಸೇವಾ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಪಿಂಚಣಿ ಸೇರಿದಂತೆ ಇತರೆ ಕಂದಾಯ ವಿಷಯಗಳಿಗೆ ಸಂಬAಧಿಸಿದAತೆ ಹೆಚ್ಚಿನ ಸಂಖ್ಯೆಯಲ್ಲಿ ಅಹವಾಲುಗಳು ಸಲ್ಲಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಜಿಲ್ಲೆಯ ಎಲ್ಲಾ ಉಪ ವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರರು ಅಕ್ಟೋಬರ್ ೧ರಿಂದ ತಮ್ಮ ವ್ಯಾಪ್ತಿಯ ನಾಡಕಚೇರಿಗಳಿಗೆ ನಿಯಮಿತವಾಗಿ ಭೇಟಿ ನೀಡಿ, ಸಾರ್ವಜನಿಕರಿಂದ ಸ್ವೀಕೃತವಾಗುವ ಅಹವಾಲುಗಳನ್ನು ಪರಿಶೀಲಿಸಿ, ಅರ್ಹ ಪ್ರಕರಣಗಳನ್ನು ನಿಯಮಾನುಸಾರ ಪ್ರಸ್ತುತ ಮಾರ್ಗಸೂಚಿ ಅನ್ವಯ ತ್ವರಿತವಾಗಿ ಪರಿಹರಿಸಲು ಕ್ರಮ ವಹಿಸಬೇಕೆಂದು ಅವರು ಸೂಚಿಸಿದ್ದಾರೆ.
ನಾಡಕಚೇರಿ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಲಭ್ಯವಿರುವ ಸೇವೆಗಳು, ಪಿಂಚಣಿ ಅರ್ಜಿಗಳ ಸ್ಥಿತಿ, ಬಾಕಿ ಇರುವ ಪ್ರಕರಣಗಳು ಹಾಗೂ ಇತರೆ ಕಂದಾಯ ವಿಷಯಗಳ ಕುರಿತು ನಿಯಮಾನುಸಾರ ಪರಿಶೀಲನೆ ನಡೆಸಿ, ಅಗತ್ಯವಿರುವಲ್ಲಿ ಸಂಬAಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು. ಅಲ್ಲದೆ, ಕೈಗೊಂಡ ಕ್ರಮಗಳ ಕುರಿತು ನಾಡಕಚೇರಿವಾರು ವರದಿಯನ್ನು ಸಿದ್ಧಪಡಿಸಿ ಜಿಲ್ಲಾಡಳಿತಕ್ಕೆ ಸಲ್ಲಿಸುವಂತೆ ಉಪ ವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರರಿಗೆ ಸೂಚಿಸಿದ್ದಾರೆ.
(Visited 1 times, 1 visits today)





