BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಶೀಘ್ರದಲ್ಲಿಯೇ ಆಸಕ್ತರಿಗೆ ಮಾಹಿತಿ ಹಕ್ಕು ಕಾಯ್ದೆಯ ಅರಿವು ಕಾರ್ಯಾಗಾರ
  • ರಾತ್ರಿ ಅಂಗಡಿ ಮುಗ್ಗಟ್ಟುಗಳ ಕಾರ್ಯಾಚರಣೆ ಸಮಯ ನಿಗದಿ
  • ಮಳೆ ನೀರಿನೊಂದಿಗೆ ಮನೆಗಳಿಗೆ ನುಗ್ಗಿದ ಚರಂಡಿ ಕಲುಷಿತ ನೀರು
  • ಬೋರ್ ವೆಲ್ ಹೆಚ್ವು ಆಳಕ್ಕೆ ಕೊರೆಯಬೇಕೆಂದು ಗ್ರಾಮಸ್ಥರ ಒತ್ತಾಯ
  • ಜಿಲ್ಲೆಯಲ್ಲಿ ೧೫೯ ಕೋಟಿ ಬೆಳೆ ನಷ್ಟ: ಕೇಂದ್ರ ತಂಡಕ್ಕೆ ಮನವರಿಕೆ
  • ಬೃಹತ್ ಮೂರ್ತಿಯ ಮೆರವಣಿಗೆ, ಆಕರ್ಷಕ ಕಲಾ ಪ್ರದರ್ಶನ
  • ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಶೀಘ್ರದಲ್ಲಿಯೇ ಆಸಕ್ತರಿಗೆ ಮಾಹಿತಿ ಹಕ್ಕು ಕಾಯ್ದೆಯ ಅರಿವು ಕಾರ್ಯಾಗಾರ
news

ಶೀಘ್ರದಲ್ಲಿಯೇ ಆಸಕ್ತರಿಗೆ ಮಾಹಿತಿ ಹಕ್ಕು ಕಾಯ್ದೆಯ ಅರಿವು ಕಾರ್ಯಾಗಾರ

By News Desk BenkiyabaleUpdated:October 05, 2026 5:07 pm

ತುಮಕೂರು: ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗದ ಭ್ರಷ್ಟಾಚಾರಗಳನ್ನು ಬಯಲಿಗೆಳೆಯುವ ನಿಟ್ಟಿನಲ್ಲಿ ಮಾಹಿತಿ ಹಕ್ಕು ಕಾಯ್ದೆ-೨೦೦೫ ಸಾರ್ವಜನಿಕರಿಗೆ ಒಂದು ಪ್ರಬಲ ಆಸ್ತçವಾಗಿದ್ದು, ಇದರ ಸರಿಯಾದ ಬಳಕೆ ಕುರಿತಂತೆ ತುಮಕೂರು ಜಿಲ್ಲಾ ಮಾಹಿತಿ ಹಕ್ಕು ಕಾರ್ಯಕರ್ತರ ವೇದಿಕೆ(ರಿ), ಶೀಘ್ರದಲ್ಲಿಯೇ ಆಸಕ್ತರಿಗೆ ಕಾರ್ಯಾಗಾರ ನಡೆಸಲಿದೆ ಎಂದು ವೇದಿಕೆಯ ರಾಜ್ಯಾಧ್ಯಕ್ಷ ಹನುಮಂತರಾಯಪ್ಪ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾಹಿತಿ ಹಕ್ಕು ಹೋರಾಟಗಾರ ಅರ್ಜುನ್ ಮುಳೆ ಆವರ ಸಿದ್ದಪಡಿಸಿರುವ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ಸಾರ್ವಜನಿಕ ಹಕ್ಕುಗಳಿಗಾಗಿ ಮಾರ್ಗದರ್ಶಿ ಕೈಪಿಡಿ ಬಿಡುಗಡೆ ಮಾಡಿ ಮಾತನಾಡಿದ ಅವರು,ಎಲ್ಲಾ ರೈತರ ಮಕ್ಕಳು ಸೇರಿ,ಈ ಸಂಸ್ಥೆಯನ್ನು ಹುಟ್ಟು ಹಾಕಿದ್ದು,ಭಾರತ ಸರಕಾರದಲ್ಲಿ ನೊಂದಾಯಿತ ಸಂಸ್ಥೆಯಾಗಿದೆ. ಜನಸಾಮಾನ್ಯರಿಗೆ ಅಧಿಕಾರಿಗಳಿಂದ ಆಗುವ ತೊಂದರೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಕೆಲಸ ಮಾಡುವುದೇ ವೇದಿಕೆ ಉದ್ದೇಶವಾಗಿದೆ ಎಂದರು.
ತುಮಕೂರು ಜಿಲ್ಲೆ ಅತಿ ವೇಗವಾಗಿ ಬೆಳವಣಿಗೆಯಾಗುತ್ತಿರುವ ನಗರಗಳಲ್ಲಿ ಒಂದು,ಇAತಹ ನಗರಗಳಲ್ಲಿಯೇ ಭ್ರಷ್ಟಾಚಾರ ಹೆಚ್ಚಾಗಿ, ಸಾರ್ವಜನಿಕರು, ಅದರಲ್ಲಿಯೂ ಬಡವರು ಹೆಚ್ಚು ಸಂಕಷ್ಟಕ್ಕೆ ಒಳಗಾಗುತ್ತಾರೆ.ಅವರಿಗೆ ನ್ಯಾಯ ಕೊಡಿಸಬೇಕು. ಸರಕಾರದ ಸವಲತ್ತುಗಳ ಜೊತೆಗೆ, ಸಾರ್ವಜನಿಕರ ಕೆಲಸಗಳು ಪಾರದರ್ಶಕವಾಗಿ ನಡೆಯಬೇಕು ಎಂಬ ಉದ್ದೇಶದಿಂದ ಕಳೆದ ಎರಡು ವರ್ಷಗಳಿಂದ ತುಮಕೂರು ಜಿಲ್ಲೆಯಲ್ಲಿ ತುಮಕೂರು ಜಿಲ್ಲಾ ಮಾಹಿತಿ ಹಕ್ಕು ಕಾರ್ಯಕರ್ತರ ವೇದಿಕೆ ಕೆಲಸ ಮಾಡಿಕೊಂಡು ಬರುತ್ತಿದೆ.ಶಿಕ್ಷಣ, ಆರೋಗ್ಯ,ಮೂಲಭೂತ ಸೌಕರ್ಯ ಇವುಗಳು ವೇದಿಕೆಯ ಅದ್ಯತೆಯ ವಿಷಯಗಳಾಗಿದ್ದು, ಗ್ರಾಮೀಣ, ನಗರದ ಎನ್ನದೆ ಎಲ್ಲೇ ಸಾರ್ವಜನಿಕರಿಗೆ ತೊಂದರೆಯಾಗಿದ್ದು ನಮ್ಮ ಗಮನಕ್ಕೆ ಬಂದರೆ, ಅವರ ಪರವಾಗಿ ಆರ್.ಟಿ.ಐ ಮೂಲಕ ಮಾಹಿತಿ ಕಲೆ ಹಾಕಿ,ತಪ್ಪುಗಳನ್ನು ಅಧಿಕಾರಿಗಳ ಮುಂದಿಟ್ಟು, ಸಂತ್ರಸ್ಥರಿಗೆ ನ್ಯಾಯ ದೊರೆಯುವವರೆಗೂ ಯಾವ ಪ್ರತಿಫಲಾಪೇಕ್ಷೆ ಇಲ್ಲದೆ ಹೋರಾಟ ನಡೆಸಲಿದೆ ಎಂದು ಹನುಮಂತರಾಯಪ್ಪ ತಿಳಿಸಿದರು.
ತುಮಕೂರು ಜಿಲ್ಲಾ ಮಾಹಿತಿ ಹಕ್ಕು ಕಾರ್ಯಕರ್ತರ ವೇದಿಕೆಯ ಮಹಿಳಾ ಅಧ್ಯಕ್ಷ ಸುಮ ಮಾತನಾಡಿ,ನಮ್ಮ ಸಮಿತಿವತಿಯಿಂದ ಈಗಾಗಲೇ ಚಿಕ್ಕನಾಯಕನಹಳ್ಳಿ ತೀರ್ಥಪುರ ಗ್ರಾ.ಪಂ ಮತ್ತು ಗೋಡೆಕೆರೆ ಗ್ರಾಮ ಪಂಚಾಯಿತಿಗಳಲ್ಲಿ ಸೂರು ಇಲ್ಲದ ಪರದಾಡುತಿದ್ದ ಬಡವರಿಗೆ ಕಾನೂನು ಬದ್ದವಾಗಿ ಹಕ್ಕುಪತ್ರ, ಕುಡಿಯುವ ನೀರು ಒದಗಿಸುವ ಕೆಲಸ ಆಗಿದೆ.ಅಲ್ಲದೆ ಮಕ್ಕಳಿಗೆ ಶಿಕ್ಷಣಕ್ಕೂ ಅವಕಾಶ ಕಲ್ಪಿಸಲಾಗಿದೆ.ಹತ್ತಾರು ವರ್ಷಗಳಿಂದ ಆಗದ ಕೆಲಸವನ್ನು ಕೆಲವೇ ದಿನಗಳಲ್ಲಿ ದೊರೆಯವಂತೆ ಮಾಡಿದೆ.ಮುಂದಿನ ದಿನಗಳಲ್ಲಿ ಜಿಲ್ಲಾ ಮಟ್ಟದಲ್ಲಿಯೂ ಹೋರಾಟ ರೂಪಿಸಲಾಗುವುದು ಎಂದರು.
ತುಮಕೂರು ಜಿಲ್ಲಾ ಮಾಹಿತಿ ಹಕ್ಕು ಕಾರ್ಯಕರ್ತರ ವೇದಿಕೆಯ ಜಿಲ್ಲಾಧ್ಯಕ್ಷ ನವೀನ್ ಮಾತನಾಡಿ, ಸರಕಾರದ ಕಾಯ್ದೆಗಳಾದ ಆರ್.ಟಿ.ಐ, ಸಕಾಲ ಮತ್ತು ಲೋಕಾಯುಕ್ತವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಜಡ್ಡುಗಟ್ಟಿರುವ ಆಡಳಿತಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ನಮ್ಮ ವೇದಿಕೆ ಕೆಲಸ ಮಾಡುತ್ತಿದೆ. ಅಧಿಕಾರಿಗಳಿಂದ ಯಾರಿಗಾದರೂ ತೊಂದರೆಯಾದರೆ, ವಿನಾಕಾರಣ ಕಾನೂನು ಬದ್ದವಾಗಿ ಕೆಲಸ ಮಾಡಿಕೊಡಲು ವಿಳಂಬ ಮಾಡುತ್ತಿದ್ದರೆ ೯೧-೭೦೨೧೦೬೮೩೫೫ ಗೆ ಕರೆ ಮಾಡಿ ತಿಳಿಸಿದರೆ,ಸಂತ್ರಸ್ಥರ ಮಾಹಿತಿಯ ಜೊತೆಗೆ, ಭ್ರಷ್ಟ ಅಧಿಕಾರಿಗಳ ಮಾಹಿತಿಯನ್ನು ಪಡೆದು, ಆರ್.ಟಿ.ಐ, ಸಕಾಲ ಮತ್ತು ಲೋಕಾಯುಕ್ತ ಮೂರು ಸಂಸ್ಥೆಗಳ ಮೂಲಕ ಅಧಿಕಾರಿಗಳ ಮೇಲೆ ಒತ್ತಡ ತರುವ ಕೆಲಸ ಮಾಡಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ತುಮಕೂರು ಜಿಲ್ಲಾ ಮಾಹಿತಿ ಹಕ್ಕು ಕಾರ್ಯಕರ್ತರ ವೇದಿಕೆ(ರಿ)ರ ಸಂಚಾಲಕ ನಟರಾಜು, ಸಹ ಸಂಚಾಲಕರಾದ ರವಿ.ಎಸ್, ಮಹಿಳಾ ಉಪಾಧ್ಯಕ್ಷರಾದ ದಾಕ್ಷಾಯಣಮ್ಮ, ರವಿ ಅವರುಗಳು ಉಪಸ್ಥಿತರಿದ್ದರು.

(Visited 1 times, 1 visits today)
kannada news karnataka local news tumakur tumkur tumkur news ತುಮಕೂರು: ಹುಳಿಯಾರು
Previous Articleರಾತ್ರಿ ಅಂಗಡಿ ಮುಗ್ಗಟ್ಟುಗಳ ಕಾರ್ಯಾಚರಣೆ ಸಮಯ ನಿಗದಿ
News Desk Benkiyabale

Related Posts

ರಾತ್ರಿ ಅಂಗಡಿ ಮುಗ್ಗಟ್ಟುಗಳ ಕಾರ್ಯಾಚರಣೆ ಸಮಯ ನಿಗದಿ

October 05, 2026 5:05 pm news

October 05, 2026 5:03 pm news

ಮಳೆ ನೀರಿನೊಂದಿಗೆ ಮನೆಗಳಿಗೆ ನುಗ್ಗಿದ ಚರಂಡಿ ಕಲುಷಿತ ನೀರು

October 05, 2026 5:00 pm news
ತಾಜಾ ಸುದ್ಧಿಗಳು
news

ಶೀಘ್ರದಲ್ಲಿಯೇ ಆಸಕ್ತರಿಗೆ ಮಾಹಿತಿ ಹಕ್ಕು ಕಾಯ್ದೆಯ ಅರಿವು ಕಾರ್ಯಾಗಾರ

October 05, 2026 5:07 pm
news

ರಾತ್ರಿ ಅಂಗಡಿ ಮುಗ್ಗಟ್ಟುಗಳ ಕಾರ್ಯಾಚರಣೆ ಸಮಯ ನಿಗದಿ

October 05, 2026 5:05 pm
news

October 05, 2026 5:03 pm
news

ಮಳೆ ನೀರಿನೊಂದಿಗೆ ಮನೆಗಳಿಗೆ ನುಗ್ಗಿದ ಚರಂಡಿ ಕಲುಷಿತ ನೀರು

October 05, 2026 5:00 pm
news

ಬೋರ್ ವೆಲ್ ಹೆಚ್ವು ಆಳಕ್ಕೆ ಕೊರೆಯಬೇಕೆಂದು ಗ್ರಾಮಸ್ಥರ ಒತ್ತಾಯ

October 03, 2026 5:36 pm
news

ಜಿಲ್ಲೆಯಲ್ಲಿ ೧೫೯ ಕೋಟಿ ಬೆಳೆ ನಷ್ಟ: ಕೇಂದ್ರ ತಂಡಕ್ಕೆ ಮನವರಿಕೆ

October 03, 2026 5:35 pm
Our Youtube Channel
Our Picks

ಶೀಘ್ರದಲ್ಲಿಯೇ ಆಸಕ್ತರಿಗೆ ಮಾಹಿತಿ ಹಕ್ಕು ಕಾಯ್ದೆಯ ಅರಿವು ಕಾರ್ಯಾಗಾರ

October 05, 2026 5:07 pm

ರಾತ್ರಿ ಅಂಗಡಿ ಮುಗ್ಗಟ್ಟುಗಳ ಕಾರ್ಯಾಚರಣೆ ಸಮಯ ನಿಗದಿ

October 05, 2026 5:05 pm

October 05, 2026 5:03 pm

ಮಳೆ ನೀರಿನೊಂದಿಗೆ ಮನೆಗಳಿಗೆ ನುಗ್ಗಿದ ಚರಂಡಿ ಕಲುಷಿತ ನೀರು

October 05, 2026 5:00 pm

ಬೋರ್ ವೆಲ್ ಹೆಚ್ವು ಆಳಕ್ಕೆ ಕೊರೆಯಬೇಕೆಂದು ಗ್ರಾಮಸ್ಥರ ಒತ್ತಾಯ

October 03, 2026 5:36 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಶೀಘ್ರದಲ್ಲಿಯೇ ಆಸಕ್ತರಿಗೆ ಮಾಹಿತಿ ಹಕ್ಕು ಕಾಯ್ದೆಯ ಅರಿವು ಕಾರ್ಯಾಗಾರ

By News Desk BenkiyabaleOctober 05, 2026 5:07 pm

ತುಮಕೂರು: ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗದ ಭ್ರಷ್ಟಾಚಾರಗಳನ್ನು ಬಯಲಿಗೆಳೆಯುವ ನಿಟ್ಟಿನಲ್ಲಿ ಮಾಹಿತಿ ಹಕ್ಕು ಕಾಯ್ದೆ-೨೦೦೫ ಸಾರ್ವಜನಿಕರಿಗೆ ಒಂದು ಪ್ರಬಲ ಆಸ್ತçವಾಗಿದ್ದು,…

ರಾತ್ರಿ ಅಂಗಡಿ ಮುಗ್ಗಟ್ಟುಗಳ ಕಾರ್ಯಾಚರಣೆ ಸಮಯ ನಿಗದಿ

October 05, 2026 5:05 pm

October 05, 2026 5:03 pm

ಮಳೆ ನೀರಿನೊಂದಿಗೆ ಮನೆಗಳಿಗೆ ನುಗ್ಗಿದ ಚರಂಡಿ ಕಲುಷಿತ ನೀರು

October 05, 2026 5:00 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.