ತುಮಕೂರು: ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಮಿನಿ ಒಲಂಪಿಕ್ಸ್ನಲ್ಲಿ ಭಾಗವಹಿಸಲು ಅನುವಾಗುವಂತೆ ತುಮಕೂರಿನ ಮಕ್ಕಳಿಗೆ ಕಯಾಕಿಂಗ್, ಕನೋಯಿಂಗ್ ಹಾಗೂ ಶೂಟಿಂಗ್ ತರಬೇತಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಬೆಳೆಸುವ ಹಾಗೂ ಜಿಲ್ಲೆಯ ಕ್ರೀಡಾ ಪ್ರತಿಭೆಗಳಿಗೆ ಉತ್ತಮ ಅವಕಾಶ ಕಲ್ಪಿಸುವ ಉದ್ದೇಶದಿಂದ ಕಯಾಕಿಂಗ್ ಮತ್ತು ಕನೋಯಿಂಗ್, ಶೂಟಿಂಗ್ ಸೇರಿದಂತೆ ವಿವಿಧ ಕ್ರೀಡಾ ಚಟುವಟಿಕೆಗಳಿಗೆ ತರಬೇತಿ ನೀಡಲು ಉದ್ದೇಶಿಸಲಾಗಿದೆ ಎಂದು ಹೇಳಿದರು.
ಕಳೆದ ಮಾರ್ಚ್ ೧೫ ರಿಂದ ನಗರದ ಅಮಾನಿಕೆರೆಯಲ್ಲಿ ಕಯಾಕಿಂಗ್ ಮತ್ತು ಕನೋಯಿಂಗ್ ತರಬೇತಿಯನ್ನು ಪ್ರಾರಂಭಿಸಲಾಗಿದ್ದು, ಈಗಾಗಲೇ ವಿವಿಧ ರಾಜ್ಯ /ಜಿಲ್ಲೆಯ ವಿದ್ಯಾರ್ಥಿಗಳು ಅಮಾನಿಕೆರೆಯಲ್ಲಿ ತರಬೇತಿ ಪಡೆದು ರಾಷ್ಟç ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದಾರೆ. ವೈಜಾಗ್‌ನಲ್ಲಿ ನಡೆದ ಸೌತ್ ಅಸ್ಮಿತಾ ಕ್ರೀಡೆ ಹಾಗೂ ಭೂಪಾಲ್‌ನಲ್ಲಿ ನಡೆದ ರಾಷ್ಟಿçÃಯ ಕ್ರೀಡೆಯಲ್ಲಿ ಭಾಗವಹಿಸಿದ್ದ ಈ ವಿದ್ಯಾರ್ಥಿಗಳು ೪ ಚಿನ್ನ, ೩ ಬೆಳ್ಳಿ ಹಾಗೂ ೫ ಕಂಚಿನ ಪದಕಗಳನ್ನು ಗೆಲ್ಲುವ ಮೂಲಕ ರಾಜ್ಯ ಹಾಗೂ ದೇಶಕ್ಕೆ ಕೀರ್ತಿ ತಂದಿದ್ದಾರೆ ಎಂದು ತಿಳಿಸಿದರು.
ರಾಷ್ಟç ಹಾಗೂ ಅಂತರಾಷ್ಟಿçÃಯ ಮಟ್ಟದ ತರಬೇತಿಗಳಲ್ಲಿ ಭಾಗವಹಿಸಲು ಅನುವಾಗುವಂತೆ ಕಡಿಮೆ ಶುಲ್ಕದಲ್ಲಿ ಸ್ಥಳೀಯ ಮಕ್ಕಳಿಗೆ ಕಯಾಕಿಂಗ್, ಕನೋಯಿಂಗ್, ಶೂಟಿಂಗ್ ತರಬೇತಿ ನೀಡಲು ಅಗತ್ಯ ಮೂಲ ಸೌಕರ್ಯ ಹಾಗೂ ಉತ್ತಮ ತರಬೇತಿದಾರರನ್ನು ಒದಗಿಸಲು ಜಿಲ್ಲಾಡಳಿತದಿಂದ ಸಿದ್ಧತೆ ನಡೆದಿದೆ. ಈ ತರಬೇತಿಯಿಂದ ಸ್ಥಳೀಯ ವಿದ್ಯಾರ್ಥಿಗಳಿಗೆ ಕ್ರೀಡಾ ಸ್ಪರ್ಧೆಗಳಲ್ಲಿ ಹೆಚ್ಚಿನ ಅವಕಾಶ ದೊರೆಯಲಿದೆ ಎಂದರಲ್ಲದೆ ಜಿಲ್ಲೆ ಹಾಗೂ ರಾಜ್ಯಕ್ಕೆ ಕೀರ್ತಿ ತರುವಂತಹ ಕ್ರೀಡಾಪಟುಗಳನ್ನು ರೂಪಿಸುವ ಗುರಿ ಹೊಂದಲಾಗಿದೆ ಎಂದರು.
ಮೊಬೈಲ್ ಬಳಕೆಯಿಂದ ಮಕ್ಕಳು ಕ್ರೀಡೆಯಿಂದ ದೂರವಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಕರು ಹಾಗೂ ಮಕ್ಕಳ ಪೋಷಕರು ತಮ್ಮ ಮಕ್ಕಳನ್ನು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲು ಉತ್ತೇಜನ ನೀಡಬೇಕು. ಕ್ರೀಡೆಯಿಂದ ಏಕಾಗ್ರತೆ, ಮಾನಸಿಕ ಸದೃಢತೆ ಹಾಗೂ ದೈಹಿಕ ಕ್ಷಮತೆ ಹೆಚ್ಚುತ್ತದೆ ಎಂದು ಮಕ್ಕಳಿಗೆ ಮನವರಿಕೆ ಮಾಡಬೇಕೆಂದು ಹೇಳಿದರು.
ತರಬೇತಿ ನೀಡಲು ಉತ್ತಮ ತರಬೇತುದಾರರು ಜಿಲ್ಲೆಯಲ್ಲಿ ಲಭ್ಯವಿದ್ದು, ಮಕ್ಕಳನ್ನು ಕ್ರೀಡಾಸ್ಪರ್ಧೆಗಳಿಗೆ ಅಣಿ ಮಾಡಲು ಮೊದಲಿಗೆ ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಲು ಇನ್ನೆರಡು ದಿನಗಳಲ್ಲಿ ದಿನಾಂಕ ನಿಗದಿಗೊಳಿಸಬೇಕೆಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ರಘುಚಂದ್ರ ಅವರಿಗೆ ಸೂಚನೆ ನೀಡಿದರು.
ತುಮಕೂರಿನಿಂದ ಉತ್ತಮ ತಂಡವನ್ನು ರೂಪಿಸುವ ಗುರಿ ಹೊಂದಲಾಗಿದೆ. ಶಾಲಾ-ಕಾಲೇಜುಗಳ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಈ ಕುರಿತು ಮಾಹಿತಿ ನೀಡಿ ಹೆಚ್ಚಿನ ವಿದ್ಯಾರ್ಥಿಗಳು ತರಬೇತಿಯಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಬೇಕು ಎಂದು ಹೇಳಿದರು.
ಭಾರತೀಯ ಶೂಟರ್ ಒಲಂಪಿಯನ್ ಪ್ರಕಾಶ್ ನಂಜಪ್ಪ ಮಾತನಾಡಿ, ಕ್ರೀಡಾ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಅವಕಾಶ ತುಮಕೂರು ಜಿಲ್ಲೆಗೆ ದೊರೆತಿರುವುದು ಅದೃಷ್ಟದ ಸಂಗತಿ. ಶೂಟಿಂಗ್ ತರಬೇತಿ ವಿದ್ಯಾರ್ಥಿಗಳ ಬೆಳವಣಿಗೆಯಲ್ಲಿ ಶಿಕ್ಷಕರು ಪ್ರಮುಖ ಪಾತ್ರ ವಹಿಸುತ್ತಾರೆ. ಶೂಟಿಂಗ್ ತರಬೇತಿಗೆ ೧೦ ವರ್ಷ ಮೇಲ್ಪಟ್ಟ ಮಕ್ಕಳು ಭಾಗವಹಿಸಬಹುದು. ತರಬೇತಿ ನಂತರ ಅಂತರ್ ಶಾಲಾ/ಕಾಲೇಜು ಮಟ್ಟದಲ್ಲಿ ಸ್ಪರ್ಧೆಯನ್ನು ಆಯೋಜಿಸಲಾಗುವುದು ಎಂದು ಮಾಹಿತಿ ನೀಡಿದರು.
ಕರ್ನಾಟಕ ಕಯಾಕಿಂಗ್-ಕನೋಯಿAಗ್ ಅಕಾಡೆಮಿ ಕಾರ್ಯದರ್ಶಿ ಕ್ಯಾಪ್ಟನ್ ದಿಲೀಪ್ ಮಾತನಾಡಿ, ಜಿಲ್ಲೆಯ ಕ್ರೀಡಾಪಟುಗಳು ಜಲಕ್ರೀಡೆಗಳಲ್ಲಿ ಭಾಗವಹಿಸಲು ಹೆಚ್ಚಿನ ಆಸಕ್ತಿ ತೋರಬೇಕು. ತರಬೇತಿ ಪಡೆಯಲು ದಸರಾ ರಜೆಯನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಿದರು.
ಸಭೆಯಲ್ಲಿ ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ(ಟುಡಾ) ಆಯುಕ್ತ ಉಮೇಶ್‌ಚಂದ್ರ ಎನ್.ಆರ್., ಯುವ ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ್, ವಿವಿಧ ಕಾಲೇಜುಗಳ ಪ್ರಾಂಶುಪಾಲರು/ಮುಖ್ಯಸ್ಥರು, ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
(Visited 1 times, 1 visits today)



