ತುಮಕೂರು: ಯುವ ಸಮುದಾಯವು ಮಾದಕ ದ್ರವ್ಯಗಳ ಪಿಡುಗಿಗೆ ಬಲಿಯಾಗದಂತೆ ಎಚ್ಚರಿಕೆ ವಹಿಸಬೇಕು. ಕೇವಲ ಕುತೂಹಲಕ್ಕಾಗಿ ಅಥವಾ ಸ್ನೇಹಿತರ ಒತ್ತಡಕ್ಕೆ ಮಣಿದು ಇಂತಹ ಚಟಗಳಿಗೆ ದಾಸರಾಗಬೇಡಿ ಎಂದು ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣ್ ಅವರು ಹೇಳಿದರು.
ತುಮಕೂರು ಜಿಲ್ಲಾಡಳಿತ, ಜಿಲ್ಲಾಪಂಚಾಯತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿಕಲ ಚೇತನರ – ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆಚರ್ಡ್ ಮದ್ಯವರ್ಜನ ಮತ್ತು ಸಮಗ್ರ ಪುನರ್ವಸತಿ ಕೇಂದ್ರದ ಸಂಯುಕ್ತಶ್ರಯದಲ್ಲಿ ತುಮಕೂರು ವಿಶ್ವವಿದ್ಯಾನಿಲಯದ ಮಹಿಳಾ ಅದ್ಯಾಯನ ಕೇಂದ್ರ, ವಿವಿ ಕಲಾ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶದ ವತಿಯಿಂದ ಅ. ೦೭ರಂದು ಬುಧವಾರ ಆಯೋಜಿಸಿದ್ದ ನಶಾ ಮುಕ್ತ ಅಭಿಯಾನ ಸಪ್ತಾಹ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಯಾರೇ ತಪುö್ಪ ದಾರಿ ಹಿಡಿಯಲು ಒತ್ತಾಯಿಸಿದರೂ ಧೈರ್ಯವಾಗಿ ಇಲ್ಲ ಎನ್ನುವ ನಿರ್ಧಾರವನ್ನು ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು. ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ ಎಂದರು.
ಇಂದಿನ ಉeಟಿ Z ಪೀಳಿಗೆಯಾದ ನೀವು ಅತ್ಯಂತ ಬುದ್ಧಿವಂತರು, ತಂತ್ರಜ್ಞಾನದ ಬಗ್ಗೆ ಅಪಾರ ಜ್ಞಾನವಿರುವವರು ಮತ್ತು ಅತಿ ವೇಗವಾಗಿ ಯೋಚಿಸುವವರು. ಒಮ್ಮೆ ಯೋಚಿಸಿ ಜೀವನದಲ್ಲಿ ದೊಡ್ಡ ಯಶಸ್ಸು ಕಂಡವರು ಯಾರೂ ಒಂದೇ ರಾತ್ರಿಯಲ್ಲಿ ಸಾಧನೆ ಮಾಡಿಲ್ಲ; ಅವರು ಮೊದಲು ಸೋಲನ್ನು, ಅನುಭವಗಳನ್ನು ಮೆಟ್ಟಿನಿಂತವರೇ. “ನನ್ನಿಂದ ಇದು ಸಾಧ್ಯವಿಲ್ಲ” ಎಂದುಕೊAಡು ಮಧ್ಯದಲ್ಲೇ ನಿಮ್ಮ ಪ್ರಯತ್ನವನ್ನು ನಿಲ್ಲಿಸಬೇಡಿ. ಸತತ ಪರಿಶ್ರಮವೊಂದೇ ನಿಮ್ಮನ್ನು ಗೆಲುವಿನ ದಡ ಮುಟ್ಟಿಸುತ್ತದೆ ಎಂದರು.
ತುಮಕೂರು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ. ವಿ. ಅಶೋಕ್ ಅವರು ಮಾತನಾಡಿ ವಿದ್ಯಾರ್ಥಿಗಳು ಕೇವಲ ಶಿಕ್ಷಣಕ್ಕೆ ಮಾತ್ರ ಸೀಮಿತವಾಗದೆ ರಾಜಕೀಯ, ಸಾಂಸ್ಕöÈತಿಕ, ಸಾಮಾಜಿಕ ಹಾಗೂ ವೈದ್ಯಕೀಯ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರಬೇಕು ಮತ್ತು ಎಲ್ಲ ವಿಷಯಗಳ ಬಗ್ಗೆ ಆಳವಾದ ಅರಿವು ಹೊಂದಿರಬೇಕು. ಇಂದಿನ ಯುವ ಸಮುದಾಯವೇ ನಾಳಿನ ದೇಶದ ಭವಿಷ್ಯವಾಗಿದ್ದು, ಸಮಗ್ರ ಜ್ಞಾನವನ್ನು ಸಂಪಾದಿಸುವುದು ಅತ್ಯಂತ ಅವಶ್ಯಕ ಎಂದು ಅಭಿಪ್ರಾಯಪಟ್ಟರು.
ಶ್ರೀ ಸಿದ್ದಾರ್ಥ ಹಾರ್ಟ್ ಸೆಂಟರ್ ನ ನಿರ್ದೇಶಕರಾದ ಡಾ. ತಮೀಮ್ ಅಹಮದ್ ಅವರು ಹೃದಯದಲ್ಲಿ ತೊಂದರೆಯಾದಾಗ ಸಿಪಿಆರ್ ಮಾಡುವ ವಿಧಾನವನ್ನು ವಿದ್ಯಾರ್ಥಿಗಳಿಗೆ ತೋರಿಸಿದರು.
ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ದುರ್ಬಳಕೆ ವಿರುದ್ಧ ಪ್ರತಿಜ್ಞಾ ವಿಧಿ ಬೊಧಿಸಿದರು. ತುಮಕೂರು ವಿವಿ ಕಲಾ ಕಾಲೇಜು ಪ್ರಾಂಶುಪಾಲಾರದ ಡಾ. ಜಿ. ದಾಕ್ಷಾಯಿಣಿ, ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಾದ ಎಸ್. ಶ್ರೀನಿವಾಸ್ ಇನ್ನಿತರ ಇಲಾಖೆಯ ಅಧಿಕಾರಿಗಳು ಉಪಸ್ಥಿರಿದ್ದರು.

(Visited 1 times, 1 visits today)