ತುಮಕೂರು: ಜಿಲ್ಲಾಡಳಿತದ ವತಿಯಿಂದ ನವೆಂಬರ್ ೧ರ ಕನ್ನಡ ರಾಜ್ಯೋತ್ಸವ ದಿನದಂದು ಕನ್ನಡ ತಾಯಿ ಶ್ರೀ ಭುವನೇಶ್ವರಿ ದೇವಿಯ ಪ್ರತಿಮೆಯನ್ನು ಅಲಂಕೃತ ಬೆಳ್ಳಿರಥದಲ್ಲಿರಿಸಿ ಸಾಂಸ್ಕೃತಿಕ ಕಲಾತಂಡಗಳು ಹಾಗೂ ವಿವಿಧ ಇಲಾಖೆಗಳ ಸ್ತಬ್ಧಚಿತ್ರದೊಂದಿಗೆ ಮೆರವಣಿಗೆ ಏರ್ಪಡಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ನವೆಂಬರ್ ೧ರಂದು ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ನಿರ್ದೇಶನ ನೀಡಿದರು.
ಜಿಲ್ಲಾ ಪಂಚಾಯತ್, ಕೃಷಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಸಮಾಜ ಕಲ್ಯಾಣ, ಆಹಾರ, ಮೀನುಗಾರಿಕೆ, ತೋಟಗಾರಿಕೆ, ಹಿಂದುಳಿದ ವರ್ಗಗಳ ಕಲ್ಯಾಣ, ಶಿಕ್ಷಣ, ಪಶುವೈದ್ಯಕೀಯ, ರೇಷ್ಮೆ ಇಲಾಖೆಗಳ ಪ್ರಸ್ತುತ ಯೋಜನೆಗಳು ಮತ್ತು ಸಾಧನೆಗಳ ಮಾಹಿತಿಯುಳ್ಳ ಉತ್ತಮ ಸ್ತಬ್ಧಚಿತ್ರಗಳನ್ನು ಸೃಜನಾತ್ಮಕವಾಗಿ ರೂಪಿಸಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಬೇಕು ಎಂದು ನಿರ್ದೇಶಿಸಿದರು.
ಮೆರವಣಿಗೆಯಲ್ಲಿ ಕಡ್ಡಾಯವಾಗಿ ಎಲ್ಲಾ ಇಲಾಖಾಧಿಕಾರಿಗಳು, ವಿದ್ಯಾರ್ಥಿ ನಿಲಯ ಹಾಗೂ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕು. ಭಾಗವಹಿಸುವ ಅಧಿಕಾರಿಗಳು, ವಿದ್ಯಾರ್ಥಿಗಳು, ಸ್ತಬ್ಧಚಿತ್ರಗಳು ಅಂದು ಬೆಳಿಗ್ಗೆ ೭.೩೦ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಹಾಜರಿರಬೇಕು. ಮೆರವಣಿಗೆಯು ಜಿಲ್ಲಾಧಿಕಾರಿಗಳ ಕಾರ್ಯಾಲಯದ ಮುಂಭಾಗದಿAದ ಪ್ರಾರಂಭಗೊAಡು ಮಹಾತ್ಮಗಾಂಧಿ ಕ್ರೀಡಾಂಗಣಕ್ಕೆ ತಲುಪಲಿದೆ ಎಂದು ತಿಳಿಸಿದರು.
ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಬೆಳಿಗ್ಗೆ ೯ ಗಂಟೆಗೆ ಧ್ವಜಾರೋಹಣ, ಧ್ವಜಸ್ತಂಭ, ವೇದಿಕೆ, ಗಣ್ಯರಿಗೆ ಆಸನ ವ್ಯವಸ್ಥೆ, ಅಲಂಕಾರಿಕ ಹೂ-ಕುಂಡಗಳ ವ್ಯವಸ್ಥೆ, ನಾಡಗೀತೆಯ ಗಾಯನದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಬೇಕೆಂದು ಸಂಬAಧಪಟ್ಟ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು. ಧ್ವಜಾರೋಹಣದ ನಂತರ ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಮಕ್ಕಳ ತಂಡಗಳನ್ನು ಸಿದ್ಧಪಡಿಸಿಕೊಂಡು ತಾಲೀಮು ನಡೆಸಲು ಹಾಗೂ ಕಾರ್ಯಕ್ರಮ ಸಂಘಟಿಸಲು ಶಾಲಾ ಶಿಕ್ಷಣ ಇಲಾಖೆಗೆ ಸೂಚಿಸಿದರು.
ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಗರದ ಎಲ್ಲಾ ಸರ್ಕಾರಿ ಕಚೇರಿ ಕಟ್ಟಡ ಸೇರಿದಂತೆ ಪ್ರಮುಖ ವೃತ್ತಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಬೇಕು. ಜಿಲ್ಲೆಯ ಎಲ್ಲಾ ಸಾಹಿತಿ, ಕಲಾವಿದರು, ಜನಪ್ರತಿನಿಧಿ, ವಿಶೇಷ ಆಹ್ವಾನಿತರಿಗೆ ಮುಂಚಿತವಾಗಿ ಆಹ್ವಾನ ಪತ್ರವನ್ನು ತಲುಪಿಸುವ ಕೆಲಸವನ್ನು ನಿರ್ವಹಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸೂಚಿಸಿದರು.
ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಮಾಡಿದ ೭೧ ಸಾಧಕರನ್ನು ಆಯ್ಕೆ ಮಾಡಿ, ಪಟ್ಟಿ ಸಿದ್ಧಪಡಿಸಿ ಜಿಲ್ಲಾಡಳಿತಕ್ಕೆ ಸಲ್ಲಿಸಬೇಕೆಂದು ಪ್ರಶಸ್ತಿ ಆಯ್ಕೆ ಸಮಿತಿಗೆ ನಿರ್ದೇಶಿಸಿದರು.
ಅಂದು ಸಂಜೆ ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಂದ ಕನ್ನಡ ಭಾಷೆಯ ಹಿರಿಮೆ-ಗರಿಮೆಗಳನ್ನು ಸಾರುವಂತಹ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು/ ಅಧೀನ ಅಧಿಕಾರಿಗಳು/ಸಿಬ್ಬಂದಿ ತಪ್ಪದೇ ಹಾಜರಾಗಬೇಕೆಂದು ಸೂಚಿಸಿದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪುರುಷೋತ್ತಮ್, ಡಿಡಿಪಿಐ ರಘುಚಂದ್ರ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಈಶ್ವರಪ್ಪ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿದ್ದಲಿಂಗಪ್ಪ, ರಾಜ್ಯೋತ್ಸವ ಸಮಿತಿಯ ಸದಸ್ಯರು ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

(Visited 1 times, 1 visits today)