ತುಮಕೂರು: ದಸರಾ ಮಹೋತ್ಸವದ ಅಂಗವಾಗಿ ಅಕ್ಟೋಬರ್ ೨೧ರಂದು ನಡೆಯಲಿರುವ ಅದ್ದೂರಿ ಜಂಬೂ ಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿರುವ ಆನೆಗಳ ತಾಲೀಮಿಗೆ ಇಂದು ನಗರದಲ್ಲಿ ಚಾಲನೆ ನೀಡಲಾಯಿತು.

ಈ ಬಾರಿ ಜಂಬೂ ಸವಾರಿಯಲ್ಲಿ ೩ ಆನೆಗಳು ಪಾಲ್ಗೊಳ್ಳಲಿದ್ದು, ಅಂಬಾರಿ ಹೊರಲಿರುವ ಮಡಿಕೇರಿ ದುಬಾರೆ ಆನೆ ಶಿಬಿರದ ೩೫ ವರ್ಷದ ಲಕ್ಷö್ಮಣನೊಂದಿಗೆ ತುಮಕೂರಿನ ಕರಿಬಸವೇಶ್ವರ ಮಠದ ೩೨ ವರ್ಷದ ಲಕ್ಷಿö್ಮ ಹಾಗೂ ತಿಪಟೂರು ತಾಲ್ಲೂಕು ನೊಣವಿನಕೆರೆ ಕಾಡು ಸಿದ್ದೇಶ್ವರ ಮಠದ  ೨೬ ವರ್ಷದ ಲಕ್ಷಿö್ಮ ಹೆಜ್ಜೆ ಹಾಕಲಿವೆ.

ಉಪಮುಖ್ಯಮಂತ್ರಿ ಡಾ: ಜಿ. ಪರಮೇಶ್ವರ್ ಅವರ ಧರ್ಮ ಪತ್ನಿ ಕನ್ನಿಕಾಪರಮೇಶ್ವರಿ ಅವರು ಆನೆಗಳಿಗೆ ಪೂಜೆ ಸಲ್ಲಿಸುವ ಮೂಲಕ ತಾಲೀಮಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ವಿ. ಅಶ್ವಿಜ, ಅರಣ್ಯ ಸಂರಕ್ಷಣಾಧಿಕಾರಿ ಡಾ: ಸಂತೋಷ್ ಕುಮಾರ್, ತಹಶೀಲ್ದಾರ್ ರಾಜೇಶ್ವರಿ, ಸೇರಿದಂತೆ ವಿವಿಧ ಅಧಿಕಾರಿ/ಸಿಬ್ಬಂದಿ ಹಾಜರಿದ್ದರು.

ಜಂಬೂ ಸವಾರಿ ಮೆರವಣಿಗೆ ಸಾಗಲಿರುವ ನಗರದ ಬಿ.ಜಿ.ಎಸ್. ವೃತ್ತ-ಚರ್ಚ್ ಸರ್ಕಲ್-ಡಿ.ಸಿ. ಕಚೇರಿ-ಅಮಾನಿಕೆರೆ ರಸ್ತೆ-ಶಿವಕುಮಾರ ಸ್ವಾಮೀಜಿ ಸರ್ಕಲ್-ಜೂನಿಯರ್ ಕಾಲೇಜು ಮೈದಾನದ ರಸ್ತೆ ಮಾರ್ಗದಲ್ಲಿ ಆನೆಗಳಿಗೆ ತಾಲೀಮು ನೀಡಲಾಯಿತು.

(Visited 1 times, 1 visits today)