ಪಾವಗಡ: ನವೆಂಬರ್ ೧ರಂದು ಕನ್ನಡ ರಾಜ್ಯೋತ್ಸವವನ್ನು ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಅದ್ದೂರಿಯಾಗಿ ಆಚರಿಸಲು ತಾಲೂಕು ಆಡಳಿತ ಸಿದ್ಧತೆ ಕೈಗೊಂಡಿದೆ ಎಂದು ತಹಶೀಲ್ದಾರ್ ತಿಳಿಸಿದರು.
ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯೋತ್ಸವವನ್ನು ಜನೋತ್ಸವವನ್ನಾಗಿ ರೂಪಿಸಲು ವರ್ತಕರ ಸಂಘ, ಆಟೋ ಚಾಲಕರ ಸಂಘ ಸೇರಿದಂತೆ ವಿವಿಧ ಸಂಘ-ಸAಸ್ಥೆಗಳ ಸಹಕಾರ ಪಡೆಯಬೇಕು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದರು.
ಅAಗಡಿ, ಮನೆ ಹಾಗೂ ಕಟ್ಟಡಗಳ ಮೇಲೆ ಕನ್ನಡ ಬಾವುಟ: ರಾಜ್ಯೋತ್ಸವದ ಅಂಗವಾಗಿ ಪಟ್ಟಣದ ಅಂಗಡಿಗಳು, ಮನೆಗಳು ಹಾಗೂ ಕಟ್ಟಡಗಳ ಮೇಲೆ ಕನ್ನಡ ಬಾವುಟ ಹಾರಿಸುವಂತೆ ಸೂಚಿಸಲಾಯಿತು. ಈ ಕುರಿತು ಪುರಸಭೆಯ ಮುಖ್ಯಾಧಿಕಾರಿಗಳು ಸಾರ್ವಜನಿಕರಿಗೆ ಪತ್ರದ ಮೂಲಕ ಮಾಹಿತಿ ನೀಡಬೇಕು ಎಂದು ನಿರ್ದೇಶಿಸಲಾಯಿತು.
ಪ್ರಮುಖ ರಸ್ತೆಗಳಲ್ಲಿ ವಿದ್ಯುತ್ ದೀಪಾಲಂಕಾರ
ಕಣಿವೆ ರಸ್ತೆ, ಶಿರಾ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಸರಣಿ ವಿದ್ಯುತ್ ದೀಪಾಲಂಕಾರ ಅಳವಡಿಸಿ ಹಬ್ಬದ ವಾತಾವರಣ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು.
ವೇದಿಕೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಪಾಲನೆ ಹಾಗೂ ಸಿದ್ಧತೆಗಳಲ್ಲಿ ಇಲಾಖೆಗಳ ನಡುವೆ ಸಮನ್ವಯ ಕಾಪಾಡುವಂತೆ ತಹಶೀಲ್ದಾರ್ ಸೂಚಿಸಿದರು. ಸಭೆಗೆ ಗೈರುಹಾಜರಾದ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ, ಮುಂದಿನ ಸಭೆಗಳಲ್ಲಿ ಕಡ್ಡಾಯವಾಗಿ ಭಾಗವಹಿಸುವಂತೆ ತಿಳಿಸಿದರು.
ಸಭೆಯಲ್ಲಿ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

(Visited 1 times, 1 visits today)