ಪಾವಗಡ: ಪಟ್ಟಣದ ಹೊರವಲಯದಲ್ಲಿ ಎಸ್.ಎಸ್.ಕೆ. ಕಾಲೇಜು ವಿದ್ಯಾರ್ಥಿಗಳನ್ನು ಹೊತ್ತು ಸಾಗುತ್ತಿದ್ದ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಲಾರಿ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಬಸ್ನಲ್ಲಿದ್ದ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಎಸ್.ಎಸ್.ಕೆ. ಕಾಲೇಜು ಬಸ್ ವಿದ್ಯಾರ್ಥಿಗಳನ್ನು ಬಿಡಲು ಪಟ್ಟಣದ ಒಳಗೆ ಬರುತ್ತಿದ್ದ ಸಂದರ್ಭದಲ್ಲಿ, ಹಿಂಬದಿಯಿAದ ಅತಿವೇಗವಾಗಿ ಬಂದ ಲಾರಿ ಏಕಾಏಕಿ ಬಸ್ಗೆ ಹಿಂಬದಿಯಿAದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಲಾರಿಯ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕನ ಕಾಲುಗಳು ಜಖಂಗೊAಡು ಗಂಭೀರ ಗಾಯಗೊಂಡಿದ್ದಾರೆ. ಅಲ್ಲದೆ, ಬಸ್ನಲ್ಲಿದ್ದ ನಾಲ್ಕು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಅಪಘಾತದ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಹಾಗೂ ಪೊಲೀಸರು, ಗಾಯಗೊಂಡವರನ್ನು ರಕ್ಷಿಸಿ ತಕ್ಷಣವೇ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು.
ಅಲ್ಲಿ ಅವರಿಗೆ ವೈದ್ಯರು ಪ್ರಥಮ ಚಿಕಿತ್ಸೆ ಹಾಗೂ ಅಗತ್ಯ ಚಿಕಿತ್ಸೆ ನೀಡುತ್ತಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
(Visited 1 times, 1 visits today)





