ಮಧುಗಿರಿ: ಯಾವುದೇ ಸಂದರ್ಭದಲ್ಲಿ ಜಿಪಂ ಮತ್ತು ತಾಪಂ ಚುನಾವಣೆಗಳ ದಿನಾಂಕ ಘೋಷಣೆಯಾಗುವ ಸಾಧ್ಯತೆಯಿದ್ದು, ಕಾರ್ಯಕರ್ತರು ಸನ್ನದ್ಧರಾಗಬೇಕು ಎಂದು ಶಾಸಕ ಕೆ.ಎನ್. ರಾಜಣ್ಣ ಕರೆ ನೀಡಿದರು.
ಪಟ್ಟಣದ ಎಂ.ಎನ್.ಕೆ. ಸಮುದಾಯ ಭವನದಲ್ಲಿ ಬುಧವಾರ ಆಗ್ನೇಯ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆ ಮಠ್ ಪರವಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಆಗ್ನೇಯ ಪದವೀಧರರ ಕ್ಷೇತ್ರದಲ್ಲಿ ೧.೭೬ ಲಕ್ಷ ಮತದಾರರಿದ್ದು, ಜಿಲ್ಲೆಯಲ್ಲಿ ೪೮ ಸಾವಿರಕ್ಕೂ ಹೆಚ್ಚು ಹಾಗೂ ಮಧುಗಿರಿ ತಾಲೂಕಿನಲ್ಲಿ ಪುರವರ ಹೋಬಳಿ ಸೇರಿ ೪,೫೦೭ ಮತದಾರರಿದ್ದಾರೆ. ಕಾರ್ಯಕರ್ತರು ಪದವೀಧರ ಮತದಾರರನ್ನು ಸಂಪರ್ಕಿಸಿ ಕಾಂಗ್ರೆಸ್ ಅಭ್ಯರ್ಥಿ ಪರ ಮತ ಚಲಾಯಿಸುವಂತೆ ಮನವೊಲಿಸಬೇಕು. ಪ್ರತಿಯೊಂದು ಮತವೂ ಅಮೂಲ್ಯವಾಗಿದ್ದು, ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು ಎಂದರು.
ಕಾAಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆ ಮಠ್ ಮಾತನಾಡಿ, ಸರ್ಕಾರ ಈಗಾಗಲೇ ೨೫ ಸಾವಿರ ಉದ್ಯೋಗಗಳನ್ನು ಭರ್ತಿ ಮಾಡಿದ್ದು, ಯುವಜನರ ಪರವಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ ಎಂದರು. ಎನ್ಪಿಎಸ್ ಬದಲಿಗೆ ಓಪಿಎಸ್ ಜಾರಿಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ನಿರೀಕ್ಷೆಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಭೆಯಲ್ಲಿ ಕೆಪಿಸಿಸಿ ಸದಸ್ಯ ಎಂ.ಎಸ್. ಮಲ್ಲಿಕಾರ್ಜುನಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗೋಪಾಲಯ್ಯ, ಆದಿನಾರಾಯಣ ರೆಡ್ಡಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ. ನಾಗೇಶ್ ಬಾಬು, ಮೈದನಹಳ್ಳಿ ಕಾಂತರಾಜು, ಎಂ.ಕೆ. ನಂಜುAಡಯ್ಯ, ಎಂ.ಬಿ. ಮರಿಯಣ್ಣ, ಶ್ರೀಧರ್, ಅಲೀಮ್, ಸಾಧಿಕ್, ಪಿ.ಟಿ. ಗೋವಿಂದಯ್ಯ, ಸಿದ್ದಾಪುರ ರಂಗಸ್ವಾಮಿ ಸೇರಿದಂತೆ ಹಲವರಿದ್ದರು.
(Visited 1 times, 1 visits today)





