BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಭೂಸ್ವಾಧೀನಕ್ಕೆ ಹಣದ ಬದಲು ಬದಲಿ ಭೂಮಿ ನೀಡಿ
  • ಪಂಚಾಯತಿ ಅಧಿಕಾರಿಗಳು ದಲಿತ ವಿರೋಧಿಗಳು: ಸಿದ್ದು ಸೂರನಹಳ್ಳಿ
  • ಶಿರಾ ತಾಲ್ಲೂಕಿಗೆ ಜಿಪಂ ಸಿಇಒ ಭೇಟಿ: ಕಾಮಗಾರಿಗಳ ಪರಿಶೀಲನೆ
  • ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ತ್ವರಿತ ಕ್ರಮಕ್ಕೆ ಸೂಚನೆ
  • ಗ್ರಾ.ಪಂ ಮಟ್ಟದ ಸಂಜೀವಿನಿ ಒಕ್ಕೂಟಗಳು ಸಹಕಾರ ಬ್ಯಾಂಕುಗಳ ಭಾಗ
  • ಜಿಪಂ, ತಾಪಂ ಚುನಾವಣೆ ಎದುರಿಸಲು ಕಾರ್ಯಕರ್ತರು ಸನ್ನದ್ಧರಾಗಿ: ಕೆ.ಎನ್. ರಾಜಣ್ಣ
  • ಅನ್ನದಾತನ ಅಸ್ತಿತ್ವಕ್ಕೆ ಹೋರಾಟವೇ ಸಾಧನ
  • ಕಾಲೇಜು ಬಸ್‌ಗೆ ಲಾರಿ ಡಿಕ್ಕಿ: ಭಾರಿ ಅನಾಹುತದಿಂದ ಪಾರಾದ ವಿದ್ಯಾರ್ಥಿಗಳು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ತ್ವರಿತ ಕ್ರಮಕ್ಕೆ ಸೂಚನೆ
news

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ತ್ವರಿತ ಕ್ರಮಕ್ಕೆ ಸೂಚನೆ

ಜಿಲ್ಲಾಧಿಕಾರಿಗಳಿಂದ ಕೇದಿಗೆಹಳ್ಳಿ ಹಾಗೂ ಕಾಳಪ್ಪನ ಪಾಳ್ಯ ಗ್ರಾಮಗಳಿಗೆ ಭೇಟಿ
By News Desk BenkiyabaleUpdated:October 15, 2026 5:57 pm

ಚಿಕ್ಕನಾಯಕನಹಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಚಿಕ್ಕನಾಯಕನಹಳ್ಳಿ ತಾಲೂಕಿನ ಪುರಸಭೆ ವ್ಯಾಪ್ತಿಯ ೬ನೇ ವಾರ್ಡಿನ ಕೇದಿಗೆಹಳ್ಳಿ ಹಾಗೂ ತುರುವೇಕೆರೆ ತಾಲೂಕಿನ ಲೋಕಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಳಪ್ಪನ ಪಾಳ್ಯ ಗ್ರಾಮಗಳಿಗೆ ಭೇಟಿ ನೀಡಿ, ಕುಡಿಯುವ ನೀರಿನ ಸಮಸ್ಯೆಯ ಪರಿಹಾರಕ್ಕೆ ತ್ವರಿತವಾಗಿ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೇದಿಗೆಹಳ್ಳಿಯಲ್ಲಿ ಸ್ಥಳೀಯ ನಿವಾಸಿಗಳೊಂದಿಗೆ ಸಂವಾದ ನಡೆಸಿದ ಜಿಲ್ಲಾಧಿಕಾರಿಗಳು, ಕುಡಿಯುವ ನೀರಿನ ಸಮಸ್ಯೆ ಹಾಗೂ ಇತರೆ ಮೂಲಭೂತ ಸೌಕರ್ಯಗಳ ಕೊರತೆಯ ಮಾಹಿತಿ ಪಡೆದು, ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ಸ್ಥಳೀಯರಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಲು ಅಗತ್ಯ ಕ್ರಮಗಳನ್ನು ಕೈಗೊಂಡು, ಸಮಸ್ಯೆಯನ್ನು ಇಂದೇ ಪರಿಹರಿಸುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಂತರ ತುರುವೇಕೆರೆ ತಾಲೂಕು ಕಾಳಪ್ಪನ ಪಾಳ್ಯ ಗ್ರಾಮಕ್ಕೆ ಭೇಟಿ ನೀಡಿದ ಅವರು, ಕೊಳವೆ ಬಾವಿ ವಿಫಲವಾಗಿರುವ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಶೀಲಿಸಿದರು. ಪಕ್ಕದ ಗ್ರಾಮದಿಂದ ಪೈಪ್‌ಲೈನ್ ಮೂಲಕ ನೀರು ಪೂರೈಸುತ್ತಿರುವ ವ್ಯವಸ್ಥೆಯನ್ನು ವೀಕ್ಷಿಸಿ, ಪರ್ಯಾಯ ನೀರು ಸರಬರಾಜಿನ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ವಿದ್ಯುದೀಕರಣಗೊಳಿಸಲು ಬಾಕಿ ಉಳಿದಿರುವ ಕೊಳವೆ ಬಾವಿಗಳಿಗೆ ವಿದ್ಯುದೀಕರಣ ಕಾರ್ಯವನ್ನು ಇಂದೇ ಪೂರ್ಣಗೊಳಿಸಿ, ನೀರು ಸರಬರಾಜು ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
ಗ್ರಾಮಸ್ಥರೊಂದಿಗೆ ಚರ್ಚಿಸಿದ ಜಿಲ್ಲಾಧಿಕಾರಿಗಳು, ಕುಡಿಯುವ ನೀರಿನ ಲಭ್ಯತೆ ಹಾಗೂ ಇತರೆ ಮೂಲಭೂತ ಸೌಕರ್ಯಗಳಿಗೆ ಸಂಬAಧಿಸಿದ ಸಮಸ್ಯೆಗಳನ್ನು ಆಲಿಸಿದರು. ಸಾರ್ವಜನಿಕರಿಗೆ ನಿರಂತರವಾಗಿ ಕುಡಿಯುವ ನೀರು ಲಭ್ಯವಾಗುವಂತೆ ಪರ್ಯಾಯ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಹಾಗೂ ಜನರ ಸಮಸ್ಯೆಗಳಿಗೆ ಆದ್ಯತೆಯ ಮೇರೆಗೆ ಸ್ಪಂದಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಕುಡಿಯುವ ನೀರಿನ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ಕಲ್ಪಿಸಿ, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದAತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ತಿಪಟೂರು ಉಪವಿಭಾಗದ ಉಪವಿಭಾಗಾಧಿಕಾರಿ ಸಪ್ತಶ್ರೀ, ಕಾರ್ಯಪಾಲಕ ಇಂಜಿನಿಯರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ವಾಸುದೇವ್, ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಮಮತ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

(Visited 1 times, 1 visits today)
Chikkanayakanahalli kannada news karnataka local news ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹುಳಿಯಾರು
Previous Articleಗ್ರಾ.ಪಂ ಮಟ್ಟದ ಸಂಜೀವಿನಿ ಒಕ್ಕೂಟಗಳು ಸಹಕಾರ ಬ್ಯಾಂಕುಗಳ ಭಾಗ
Next Article ಶಿರಾ ತಾಲ್ಲೂಕಿಗೆ ಜಿಪಂ ಸಿಇಒ ಭೇಟಿ: ಕಾಮಗಾರಿಗಳ ಪರಿಶೀಲನೆ
News Desk Benkiyabale

Related Posts

ಭೂಸ್ವಾಧೀನಕ್ಕೆ ಹಣದ ಬದಲು ಬದಲಿ ಭೂಮಿ ನೀಡಿ

October 15, 2026 6:02 pm news

ಪಂಚಾಯತಿ ಅಧಿಕಾರಿಗಳು ದಲಿತ ವಿರೋಧಿಗಳು: ಸಿದ್ದು ಸೂರನಹಳ್ಳಿ

October 15, 2026 6:01 pm news

ಶಿರಾ ತಾಲ್ಲೂಕಿಗೆ ಜಿಪಂ ಸಿಇಒ ಭೇಟಿ: ಕಾಮಗಾರಿಗಳ ಪರಿಶೀಲನೆ

October 15, 2026 5:59 pm news
ತಾಜಾ ಸುದ್ಧಿಗಳು
news

ಭೂಸ್ವಾಧೀನಕ್ಕೆ ಹಣದ ಬದಲು ಬದಲಿ ಭೂಮಿ ನೀಡಿ

October 15, 2026 6:02 pm
news

ಪಂಚಾಯತಿ ಅಧಿಕಾರಿಗಳು ದಲಿತ ವಿರೋಧಿಗಳು: ಸಿದ್ದು ಸೂರನಹಳ್ಳಿ

October 15, 2026 6:01 pm
news

ಶಿರಾ ತಾಲ್ಲೂಕಿಗೆ ಜಿಪಂ ಸಿಇಒ ಭೇಟಿ: ಕಾಮಗಾರಿಗಳ ಪರಿಶೀಲನೆ

October 15, 2026 5:59 pm
news

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ತ್ವರಿತ ಕ್ರಮಕ್ಕೆ ಸೂಚನೆ

October 15, 2026 5:57 pm
news

ಗ್ರಾ.ಪಂ ಮಟ್ಟದ ಸಂಜೀವಿನಿ ಒಕ್ಕೂಟಗಳು ಸಹಕಾರ ಬ್ಯಾಂಕುಗಳ ಭಾಗ

October 14, 2026 6:07 pm
news

ಜಿಪಂ, ತಾಪಂ ಚುನಾವಣೆ ಎದುರಿಸಲು ಕಾರ್ಯಕರ್ತರು ಸನ್ನದ್ಧರಾಗಿ: ಕೆ.ಎನ್. ರಾಜಣ್ಣ

October 14, 2026 5:57 pm
Our Youtube Channel
Our Picks

ಭೂಸ್ವಾಧೀನಕ್ಕೆ ಹಣದ ಬದಲು ಬದಲಿ ಭೂಮಿ ನೀಡಿ

October 15, 2026 6:02 pm

ಪಂಚಾಯತಿ ಅಧಿಕಾರಿಗಳು ದಲಿತ ವಿರೋಧಿಗಳು: ಸಿದ್ದು ಸೂರನಹಳ್ಳಿ

October 15, 2026 6:01 pm

ಶಿರಾ ತಾಲ್ಲೂಕಿಗೆ ಜಿಪಂ ಸಿಇಒ ಭೇಟಿ: ಕಾಮಗಾರಿಗಳ ಪರಿಶೀಲನೆ

October 15, 2026 5:59 pm

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ತ್ವರಿತ ಕ್ರಮಕ್ಕೆ ಸೂಚನೆ

October 15, 2026 5:57 pm

ಗ್ರಾ.ಪಂ ಮಟ್ಟದ ಸಂಜೀವಿನಿ ಒಕ್ಕೂಟಗಳು ಸಹಕಾರ ಬ್ಯಾಂಕುಗಳ ಭಾಗ

October 14, 2026 6:07 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಭೂಸ್ವಾಧೀನಕ್ಕೆ ಹಣದ ಬದಲು ಬದಲಿ ಭೂಮಿ ನೀಡಿ

By News Desk BenkiyabaleOctober 15, 2026 6:02 pm

ಹುಳಿಯಾರು: ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಯ ನಿಮಿತ್ತ ಹುಳಿಯಾರು ಭಾಗದಲ್ಲಿ ಕೈಗೊಳ್ಳಲಾಗಿರುವ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ಗೊಂದಲದ…

ಪಂಚಾಯತಿ ಅಧಿಕಾರಿಗಳು ದಲಿತ ವಿರೋಧಿಗಳು: ಸಿದ್ದು ಸೂರನಹಳ್ಳಿ

October 15, 2026 6:01 pm

ಶಿರಾ ತಾಲ್ಲೂಕಿಗೆ ಜಿಪಂ ಸಿಇಒ ಭೇಟಿ: ಕಾಮಗಾರಿಗಳ ಪರಿಶೀಲನೆ

October 15, 2026 5:59 pm

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ತ್ವರಿತ ಕ್ರಮಕ್ಕೆ ಸೂಚನೆ

October 15, 2026 5:57 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.