BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬಟ್ಟೆ ಸುತ್ತಿಕೊಂಡ0ತೆ ಸುಕ್ಕುಗಟ್ಟಿದ ರಸ್ತೆ
  • ಕನ್ನಡ ನಾಡಿನ ಗತವೈಭವ ದರ್ಶನ
  • ಧಾನ್ಯ ವ್ಯಾಪಾರಿಗಳ ಸಂಘದ ಶತಮಾನೋತ್ಸವ ಸಂಭ್ರಮ
  • ನಗರದ ಮೆರುಗು ಹೆಚ್ಚಿಸಿದ ತುಮಕೂರು ದಸರಾ ಜಂಬು ಸವಾರಿ
  • ತುಮುಲ್ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ: ಆರೋಪ
  • ಸರ್ಕಾರಿ ಭೂಮಿಯಲ್ಲಿ ಉಳುಮೆ ಮಾಡಿರುವ ರೈತರನ್ನು ಒಕ್ಕಲೆಬ್ಬಿಸುವ ಆರೋಪ
  • ಜಿ.ಪಂ. ಮೀಸಲಾತಿ ಕಾಂಗ್ರೆಸ್ ಅಭ್ಯರ್ಥಿಗಳಿಗಾಗಿಯೇ ಮಾಡಲಾಗಿದೆಯೇ?
  • ದಸರಾ ಮಹೋತ್ಸವಕ್ಕೆ ಶಾಸಕ ಜ್ಯೋತಿಗಣೇಶ್ ಚಾಲನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ನಗರದ ಮೆರುಗು ಹೆಚ್ಚಿಸಿದ ತುಮಕೂರು ದಸರಾ ಜಂಬು ಸವಾರಿ
news

ನಗರದ ಮೆರುಗು ಹೆಚ್ಚಿಸಿದ ತುಮಕೂರು ದಸರಾ ಜಂಬು ಸವಾರಿ

By News Desk BenkiyabaleUpdated:October 22, 2026 5:18 pm

ತುಮಕೂರು: ತುಮಕೂರು ದಸರಾ ಉತ್ಸವದ ಅಂಗವಾಗಿ ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ಬುಧವಾರ ಮಧ್ಯಾಹ್ನ ನಗರದ ಬಿ.ಜಿ.ಎಸ್. ವೃತ್ತದ ಬಳಿ ಸಾಂಪ್ರದಾಯಿಕವಾಗಿ ನಂದೀಧ್ವಜಕ್ಕೆ ಪೂಜೆ ನೆರವೇರಿಸಿ ಚಾಲನೆ ನೀಡಿದ ವೈಭವಯುತ ಜಂಬೂ ಸವಾರಿ ಮೆರವಣಿಗೆಯು ನಗರದ ಮೆರುಗನ್ನು ಮತ್ತಷ್ಟು ಹೆಚ್ಚಿಸುವಲ್ಲಿ ಯಶಸ್ವಿಯಾಯಿತು.
ಜಂಬೂಸವಾರಿ ಮೆರವಣಿಗೆಯ ಪ್ರಮುಖ ಆಕರ್ಷಣೆ ಎಂದರೆ ಅಂಬಾರಿ ಹೊತ್ತಿದ್ದ ಲಕ್ಷö್ಮಣ ಆನೆ. ಮೈಸೂರು ದಸರಾ ಸಂಪ್ರದಾಯವನ್ನು ನೆನಪಿಸುವಂತೆ ಲಕ್ಷö್ಮಣನನ್ನು ಬಣ್ಣ-ಬಣ್ಣದ ವಸ್ತç ಹಾಗೂ ಹೂಗಳಿಂದ ಅಲಂಕರಿಸಿ ಅಂಬಾರಿಯಲ್ಲಿ ತಾಯಿ ಚಾಮುಂಡೇಶ್ವರಿ ದೇವಿಯನ್ನು ಕುಳ್ಳಿರಿಸಲಾಗಿತ್ತು.
ದುಬಾರೆಯಿಂದ ಬಂದಿದ್ದ ಲಕ್ಷö್ಮಣನ ಪಕ್ಕದಲ್ಲಿ ಸಾಗಿದ ಎರಡು ಲಕ್ಷಿö್ಮÃ ಆನೆಗಳು ಗಾಂಭೀರ್ಯದಿAದ ಮೆರವಣಿಗೆಯ ಸೊಬಗನ್ನು ಇಮ್ಮಡಿಗೊಳಿಸಿದವು. ತುಮಕೂರಿನಲ್ಲಿ ೩ನೇ ಬಾರಿ ಜರುಗುತ್ತಿರುವ ಈ ಜಂಬೂಸವಾರಿಯನ್ನು ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಜನಸ್ತೋಮ ಕಣ್ತುಂಬಿಕೊAಡಿತು.
ನಗರದಲ್ಲಿ ಸಂಭ್ರಮದ ವಾತಾವರಣವನ್ನು ಸೃಷ್ಟಿಸಿದ್ದ ಜಂಬೂಸವಾರಿ ಮೆರವಣಿಗೆಯಲ್ಲಿ ಲಕ್ಷಿö್ಮÃ ಆನೆಗಳ ಗಾಂಭೀರ್ಯ, ಲಕ್ಷö್ಮಣನ ಧೈರ್ಯ, ಇವುಗಳ ನಡುವೆ ಶ್ರೀ ಚಾಮುಂಡೇಶ್ವರಿ ದೇವಿಯ ಮೆರವಣಿಗೆಯು ನಿಜಕ್ಕೂ “ಮೈಸೂರು ದಸರಾ ಎಷ್ಟೊಂದು ಸುಂದರ” ಎಂಬ ಹಾಡಿನ ಸಾಲುಗಳನ್ನು ಮೆಲುಕು ಹಾಕುವಂತೆ ಮಾಡಿತು. ಮೆರವಣಿಗೆಯನ್ನು ವೀಕ್ಷಿಸಲು ದಾರಿಯುದ್ದಕ್ಕೂ ಅಲ್ಲಲ್ಲಿ ಗ್ಯಾಲರಿಗಳನ್ನು ನಿರ್ಮಿಸಲಾಗಿತ್ತು. ಅನೇಕರು ತಮ್ಮ ಮೊಬೈಲ್ ಕ್ಯಾಮೆರಾಗಳಲ್ಲಿ ಜಂಬೂಸವಾರಿಯ ದೃಶ್ಯಗಳನ್ನು ಸೆರೆ ಹಿಡಿದು ಅಮೂಲ್ಯ ನೆನಪುಗಳನ್ನು ತಮ್ಮದಾಗಿಸಿಕೊಂಡರು.
ಜಂಬೂಸವಾರಿ ಭವ್ಯ ಮೆರವಣಿಗೆಯಲ್ಲಿ ತುಮಕೂರು ತಾಲ್ಲೂಕು ಕಚೇರಿಯ ಗಣಪತಿ, ಮಂಡಿಪೇಟೆಯ ಶ್ರೀ ಭದ್ರಕಾಳಿ ಹಾಗೂ ಶ್ರೀ ರಾಜರಾಜೇಶ್ವರಿ ಗಂಗಾಭವಾನಿ, ಚಿಕ್ಕಪೇಟೆಯ ಶ್ರೀ ಕೋಟೆ ಆಂಜನೇಯಸ್ವಾಮಿ, ಶ್ರೀ ಕನ್ನಿಕಾಪರಮೇಶ್ವರಸ್ವಾಮಿ, ವಿಶ್ವಕರ್ಮ ಕಾಳಿಕಾಂಬ, ಬ್ರಹ್ಮಕುಮಾರಿ ಈಶ್ವರಿ, ಅಂಕಾಲೇಶ್ವರಿ ಹಾಗೂ ನಾಲ್ಕು ಗಾಲಿ ಬಾವಿ ಗಣೇಶ, ದಿಬ್ಬೂರಿನ ಶ್ರೀ ಮುಳಕಟ್ಟಮ್ಮ, ವಿನಾಯಕ ನಗರದ ಶ್ರೀ ಆದಿಶಕ್ತಿ ಅಮ್ಮ, ಮಾರಿಯಮ್ಮ ನಗರದ ಮಾರಿಯಮ್ಮ ದೇವಿ, ಶ್ರೀ ವೀರಭದ್ರಸ್ವಾಮಿ ಸೇರಿದಂತೆ ೩೩ಕ್ಕೂ ಹೆಚ್ಚು ಗ್ರಾಮ ದೇವತೆಗಳು ಹೂಗಳಿಂದ ಅಲಂಕರಿಸಲ್ಪಟ್ಟ ಸಾರೋಟು(ಬೆಳ್ಳಿ ರಥ)ಗಳಲ್ಲಿ ಸಾಗಿದ್ದು, ಜನರಲ್ಲಿ ಅದ್ವಿತೀಯ ಭಕ್ತಿ ಭಾವ ಮೂಡಿಸಿತು.
ಜಂಬೂಸವಾರಿ ಮೆರವಣಿಗೆಯಲ್ಲಿ ಸಾಲಾಗಿ ಸಾಗಿದ ದೇವರ ಉತ್ಸವ ಮೂರ್ತಿಗಳಿಗೆ ಗಣ್ಯರು ಪುಷ್ಪಾರ್ಚನೆ ಅರ್ಪಿಸಿದರು.
ಮೆರವಣಿಗೆ ಮಾರ್ಗದಲ್ಲಿ ಮಹಿಳೆಯರ ಪೂರ್ಣಕುಂಭ ಕಳಶ, ಪೊಲೀಸ್ ಅಶ್ವದಳ, ನಂದಿಧ್ವಜ, ಸೋಮನಕುಣಿತ, ಗೊರವರ ಕುಣಿತ, ತಮಟೆ, ಹಗಲು ವೇಷ, ಹುಲಿ ವೇಷ, ಯಕ್ಷಗಾನ, ವೀರಗಾಸೆ, ಅರೆವಾದ್ಯ, ಗಾರುಡಿ ಗೊಂಬೆ, ಕೀಲು ಕುದುರೆ, ಡೊಳ್ಳು ಕುಣಿತ, ತಾಳ ಮದ್ದಳೆ ಸೇರಿದಂತೆ ನೂರಾರು ಕಲಾ ತಂಡಗಳು ಕಲಾ ಪ್ರದರ್ಶನ ನೀಡುತ್ತಾ ಸಾಗಿದವು. ವಿಶೇಷವಾಗಿ ಗಾರುಡಿ ಗೊಂಬೆಗಳ ಉದ್ದನೆಯ ಪ್ರತಿರೂಪಗಳು ಮಕ್ಕಳ ಗಮನ ಸೆಳೆದವು. ಡೊಳ್ಳಿನ ದನಿಗೆ ಹೆಜ್ಜೆ ಹಾಕಿದ ವೀರರು ಭಕ್ತರನ್ನು ಆಕರ್ಷಿಸಿದರು. ದಾರಿಯುದ್ದಕ್ಕೂ ಮಕ್ಕಳಿಂದ ವೃದ್ಧರಾದಿಯಾಗಿ ಮೆರವಣಿಗೆಯಲ್ಲಿ ಸಂಭ್ರಮದಿAದ ಪಾಲ್ಗೊಂಡಿದ್ದರು.
ನೂರಾರು ಕಲಾತಂಡಗಳ ಕಲಾ ವೈಭವ, ಜಿಲ್ಲೆಯ ವಿವಿಧ ದೇವರ ಉತ್ಸವಮೂರ್ತಿಗಳ ರಥಯಾತ್ರೆ, ಗಜಪಡೆಯ ಸೊಬಗು ಇವೆಲ್ಲವೂ ಸೇರಿ ಈ ವರ್ಷದ ತುಮಕೂರು ದಸರಾ ಜಂಬೂಸವಾರಿಯು ಜನಮನದಲ್ಲಿ ಅಜರಾಮರ ನೆನಪು, ನಗರದ ಬೀದಿಗಳನ್ನು ಜೀವಂತಗೊಳಿಸಿದ ಈ ಮೆರವಣಿಗೆ ನಾಡಹಬ್ಬದ ನಿಜವಾದ ಭಾವವನ್ನು ಮೂಡಿಸಿತು.
ಶಮೀ ಪೂಜೆ ಸಂಪನ್ನ: ಜಂಬೂ ಸವಾರಿ ಮೆರವಣಿಗೆಯು ನಗರದ ಬಿ.ಜಿ.ಎಸ್. ವೃತ್ತದಿಂದ ಚರ್ಚ್ ಸರ್ಕಲ್, ಡೀಸಿ ಕಚೇರಿ, ಅಮಾನಿಕೆರೆ ರಸ್ತೆ, ಕೋತಿ ತೋಪು, ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತದ ಮಾರ್ಗವಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನವನ್ನು ತಲುಪಿತು.
ನಂತರ ವಿವಿಧ ಗ್ರಾಮ ದೇವತೆಗಳ ಸಮ್ಮುಖದಲ್ಲಿ ಉಪಮುಖ್ಯಮಂತ್ರಿ ಪರಮೇಶ್ವರ ಅವರು ಕದಳಿ ಛೇದನ ಮಾಡುವ ಮೂಲಕ ಶಮೀ ಪೂಜೆ ಸಂಪನ್ನಗೊAಡಿತು.
ರಾಜ್ಯ ಕಾಡು ಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ. ಮಹೇಶ್, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಟಿ.ಬಿ. ಜಯಚಂದ್ರ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಶೇಖರಗೌಡ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷ ನಿಕೇತ್‌ರಾಜ್ ಎಂ., ಉಪಮುಖ್ಯಮಂತ್ರಿಗಳ ಧರ್ಮಪತ್ನಿ ಕನ್ನಿಕಾ ಪರಮೇಶ್ವರಿ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ವಿ. ಅಶ್ವಿಜಾ, ಪಾಲಿಕೆ ಆಯುಕ್ತೆ ಶುಭ, ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ತಹಶೀಲ್ದಾರ್ ರಾಜೇಶ್ವರಿ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

(Visited 1 times, 1 visits today)
Chikkanayakanahalli dcm dr.g.parameshwar karnataka Mla jyothiganesh tumakur tumkur TUMKUR DASARA tumkur news ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು:
Previous Articleತುಮುಲ್ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ: ಆರೋಪ
Next Article ಧಾನ್ಯ ವ್ಯಾಪಾರಿಗಳ ಸಂಘದ ಶತಮಾನೋತ್ಸವ ಸಂಭ್ರಮ
News Desk Benkiyabale

Related Posts

ಬಟ್ಟೆ ಸುತ್ತಿಕೊಂಡ0ತೆ ಸುಕ್ಕುಗಟ್ಟಿದ ರಸ್ತೆ

October 22, 2026 5:22 pm news

ಕನ್ನಡ ನಾಡಿನ ಗತವೈಭವ ದರ್ಶನ

October 22, 2026 5:21 pm news

ಧಾನ್ಯ ವ್ಯಾಪಾರಿಗಳ ಸಂಘದ ಶತಮಾನೋತ್ಸವ ಸಂಭ್ರಮ

October 22, 2026 5:19 pm news
ತಾಜಾ ಸುದ್ಧಿಗಳು
news

ಬಟ್ಟೆ ಸುತ್ತಿಕೊಂಡ0ತೆ ಸುಕ್ಕುಗಟ್ಟಿದ ರಸ್ತೆ

October 22, 2026 5:22 pm
news

ಕನ್ನಡ ನಾಡಿನ ಗತವೈಭವ ದರ್ಶನ

October 22, 2026 5:21 pm
news

ಧಾನ್ಯ ವ್ಯಾಪಾರಿಗಳ ಸಂಘದ ಶತಮಾನೋತ್ಸವ ಸಂಭ್ರಮ

October 22, 2026 5:19 pm
news

ನಗರದ ಮೆರುಗು ಹೆಚ್ಚಿಸಿದ ತುಮಕೂರು ದಸರಾ ಜಂಬು ಸವಾರಿ

October 22, 2026 5:18 pm
news

ತುಮುಲ್ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ: ಆರೋಪ

October 22, 2026 5:16 pm
news

ಸರ್ಕಾರಿ ಭೂಮಿಯಲ್ಲಿ ಉಳುಮೆ ಮಾಡಿರುವ ರೈತರನ್ನು ಒಕ್ಕಲೆಬ್ಬಿಸುವ ಆರೋಪ

October 19, 2026 5:21 pm
Our Youtube Channel
Our Picks

ಬಟ್ಟೆ ಸುತ್ತಿಕೊಂಡ0ತೆ ಸುಕ್ಕುಗಟ್ಟಿದ ರಸ್ತೆ

October 22, 2026 5:22 pm

ಕನ್ನಡ ನಾಡಿನ ಗತವೈಭವ ದರ್ಶನ

October 22, 2026 5:21 pm

ಧಾನ್ಯ ವ್ಯಾಪಾರಿಗಳ ಸಂಘದ ಶತಮಾನೋತ್ಸವ ಸಂಭ್ರಮ

October 22, 2026 5:19 pm

ನಗರದ ಮೆರುಗು ಹೆಚ್ಚಿಸಿದ ತುಮಕೂರು ದಸರಾ ಜಂಬು ಸವಾರಿ

October 22, 2026 5:18 pm

ತುಮುಲ್ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ: ಆರೋಪ

October 22, 2026 5:16 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಬಟ್ಟೆ ಸುತ್ತಿಕೊಂಡ0ತೆ ಸುಕ್ಕುಗಟ್ಟಿದ ರಸ್ತೆ

By News Desk BenkiyabaleOctober 22, 2026 5:22 pm

ಹುಳಿಯಾರು: ಹುಳಿಯಾರು ಪಟ್ಟಣದ ಎಪಿಎಂಸಿ ಮುಂಭಾಗದಲ್ಲಿರುವ ರಾಷ್ಟಿçÃಯ ಹೆದ್ದಾರಿಯು ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು, ವಾಹನ ಸವಾರರು ಪ್ರತಿದಿನ ನರಕಯಾತನೆ ಅನುಬವಿಸುವಂತಾಗಿದೆ.…

ಕನ್ನಡ ನಾಡಿನ ಗತವೈಭವ ದರ್ಶನ

October 22, 2026 5:21 pm

ಧಾನ್ಯ ವ್ಯಾಪಾರಿಗಳ ಸಂಘದ ಶತಮಾನೋತ್ಸವ ಸಂಭ್ರಮ

October 22, 2026 5:19 pm

ನಗರದ ಮೆರುಗು ಹೆಚ್ಚಿಸಿದ ತುಮಕೂರು ದಸರಾ ಜಂಬು ಸವಾರಿ

October 22, 2026 5:18 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.