ಪಾವಗಡ: ದೇಶದ ಏಕತೆ, ಸಮಗ್ರತೆ ಮತ್ತು ಭದ್ರತೆಯ ಸಂಕೇತವಾಗಿರುವ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ 151ನೇ ಜನ್ಮದಿನಾಚರಣೆಯ ಸುಸಂದರ್ಭದಲ್ಲಿ ತುಮಕೂರು ಜಿಲ್ಲಾ ಪೆÇಲೀಸ್ ಹಾಗೂ ಪಾವಗಡ ಪೆÇಲೀಸ್ ಠಾಣೆಯ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಏಕತಾ ನಡಿಗೆ ಕಾರ್ಯಕ್ರಮವನ್ನು ಅತ್ಯಂತ ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲಾಗಿತ್ತು. ಯುವಜನತೆಯಲ್ಲಿ ದೇಶಪ್ರೇಮ ಹಾಗೂ ಸಾಮರಸ್ಯವನ್ನು ಜಾಗೃತಗೊಳಿಸುವ ಉದ್ದೇಶದಿಂದ ನಡೆದ ಈ ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು ಮತ್ತು ಪೆÇಲೀಸ್ ಸಿಬ್ಬಂದಿ ಸಕ್ರಿಯವಾಗಿ ಪಾಲ್ಗೊಂಡು ಸಮಾಜಕ್ಕೆ ಒಗ್ಗಟ್ಟಿನ ಸಂದೇಶ ನೀಡಿದರು
ಪಟ್ಟಣದ ಸ್ವಾಮಿ ವಿವೇಕಾನಂದ ಕಾಲೇಜಿನಿಂದ ಪ್ರಾರಂಭವಾದ ಈ ಏಕತಾ ನಡಿಗೆಯನ್ನು ಕಾಲೇಜು ವಿದ್ಯಾರ್ಥಿಗಳು ಹಾಗೂ ಪೆÇಲೀಸ್ ಸಿಬ್ಬಂದಿ ಅತ್ಯುತ್ಸಾಹದಿಂದ ನಡೆಸಿಕೊಟ್ಟರು. ಮೆರವಣಿಗೆಯದ್ದಕ್ಕೂ “ಏನೇ ಬರಲಿ ಒಗ್ಗಟ್ಟಿರಲಿ” ಸೇರಿದಂತೆ ದೇಶದ ಏಕತೆಯನ್ನು ಸಾರುವ ವಿವಿಧ ಘೋಷಣೆಗಳನ್ನು ಕೂಗುತ್ತಾ ಸಾಗಲಾಯಿತು. ನಂತರ ನಡಿಗೆಯು ಇಂದಿರಾಗಾಂಧಿ ವೃತ್ತವನ್ನು ತಲುಪಿದ್ದು, ಅಲ್ಲಿ ಎಲ್ಲರೂ ಸೇರಿ ಬೃಹತ್ ಮಾನವ ಸರಪಳಿಯನ್ನು ನಿರ್ಮಿಸುವ ಮೂಲಕ ಒಗ್ಗಟ್ಟಿನ ಸಂದೇಶ ಸಾರಿದರು
ಪೆÇಲೀಸ್ ಠಾಣೆಯ ಪಿ.ಎಸ್.ಐ. ಸುನೀಲ್ ರವರು ಮಾತನಾಡಿ ಭಾರತದ ವಿವಿಧ ಸಂಸ್ಥಾನಗಳನ್ನು ಒಗ್ಗೂಡಿಸಿ ಅಖಂಡ ಭಾರತದ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸಿದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಸ್ಮರಣಾರ್ಥವಾಗಿ ಪ್ರತಿವರ್ಷ ಅಕ್ಟೋಬರ್ 31ರಂದು ರಾಷ್ಟ್ರೀಯ ಏಕತಾ ದಿನವನ್ನು ಆಚರಿಸಲಾಗುತ್ತದೆ ದೇಶದ ಏಕತೆ, ಸಮಗ್ರತೆ ಮತ್ತು ಭದ್ರತೆಯನ್ನು ಕಾಪಾಡುವ ಮಹತ್ವವನ್ನು ವಿವರಿಸಿದ ಅವರು, ಸ್ವಾತಂತ್ರ್ಯಾನಂತರ ದೇಶವನ್ನು ಒಗ್ಗೂಡಿಸುವಲ್ಲಿ ಪಟೇಲರ ಐತಿಹಾಸಿಕ ಪಾತ್ರವು ಇಂದಿನ ಯುವಜನತೆಗೆ ಸದಾ ಸ್ಫೂರ್ತಿಯಾಗಿದೆ ಎಂದರು. ಏಕತೆಯಲ್ಲಿ ಶಕ್ತಿ ಇದೆ ಎಂಬ ಸಂದೇಶವು ಭಾಷೆ, ಧರ್ಮ, ಸಂಸ್ಕೃತಿ ಹಾಗೂ ಪ್ರಾದೇಶಿಕ ವೈವಿಧ್ಯಗಳ ನಡುವೆಯೂ ಭಾರತೀಯರೆಲ್ಲರೂ ಒಂದೇ ಎಂಬ ಭಾವನೆಯನ್ನು ಬಲಪಡಿಸುತ್ತದೆ ಎಂದು ಅಭಿಪ್ರಾಯಪಟ್ಟರು. ಪ್ರತಿಯೊಬ್ಬ ನಾಗರಿಕನು ಜಾತಿ, ಧರ್ಮ ಹಾಗೂ ಭಾಷೆಯ ಭೇದಭಾವಗಳನ್ನು ಮೀರಿ ಸಹೋದರತ್ವ, ಸಾಮರಸ್ಯ ಮತ್ತು ದೇಶಪ್ರೇಮವನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಪೆÇಲೀಸ್ ಇಲಾಖೆಯ ಸಿಬ್ಬಂದಿಗಳಾದ ರಾಮಕೃಷ್ಣಪ್ಪ, ಶ್ರೀನಿವಾಸ್, ಚನ್ನಮ್ಮ, ಪ್ರವೀಣ್, ಗೋಪಾಲಕೃಷ್ಣ, ನಾಗಭೂಷಣ ರೆಡ್ಡಿ, ದೀಪಕ್ ಕುಮಾರ್, ಗೀತಾ ಹಾಗೂ ಬಿಸ್ಮಿಲ್ಲಾ ಉಪಸ್ಥಿತರಿದ್ದರು. ಹಾಗೆಯೇ ಸ್ವಾಮಿ ವಿವೇಕಾನಂದ ಕಾಲೇಜು ಮತ್ತು ಶಾಂತಿ ಎಸ್.ಎಸ್.ಕೆ. ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ನೂರಾರು ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

(Visited 1 times, 1 visits today)