BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕನ್ನಡಿಗರಿಗೆ ಐಟಿ-ಬಿಟಿ ಕ್ಷೇತ್ರದಲ್ಲಿ ಹೆಚ್ಚಿನ ಉದ್ಯೋಗಾವಕಾಶ ಸಿಗಬೇಕು
  • ಮೊಬೈಲ್ ಆ್ಯಪ್ ಮೂಲಕ ಬೆಳಗ್ಗೆ, ಮಧ್ಯಾಹ್ನ ಮಕ್ಕಳ ಹಾಜರಾತಿ ಕಡ್ಡಾಯ
  • ಏಕೀಕರಣಕ್ಕಾಗಿ ನಡೆದ ಹೋರಾಟದ ಮಹತ್ವವನ್ನು ಪ್ರತಿಯೊಬ್ಬರು ತಿಳಿಯಬೇಕು
  • ರಾಜ್ಯೋತ್ಸವ ನಿತ್ಯೋತ್ಸವವಾಗಬೇಕು: ಸಚಿವ ಕೃಷ್ಣಬೈರೇಗೌಡ
  • ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ 151ನೇ ಜನ್ಮದಿನಾಚರಣೆ
  • 2026ರ ತಾಲ್ಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ 20 ಮಂದಿ ಆಯ್ಕೆ
  • ಸತ್ಯ, ಅಹಿಂಸೆ ಕುರಿತು ಉಪನ್ಯಾಸ ಕಾರ್ಯಕ್ರಮ
  • ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ರಾಜ್ಯೋತ್ಸವ ನಿತ್ಯೋತ್ಸವವಾಗಬೇಕು: ಸಚಿವ ಕೃಷ್ಣಬೈರೇಗೌಡ
news

ರಾಜ್ಯೋತ್ಸವ ನಿತ್ಯೋತ್ಸವವಾಗಬೇಕು: ಸಚಿವ ಕೃಷ್ಣಬೈರೇಗೌಡ

By News Desk BenkiyabaleUpdated:November 02, 2026 5:21 pm

ತುಮಕೂರು: ಕರ್ನಾಟಕ ಏಕೀಕರಣಗೊಂಡ ನವೆಂಬರ್ 1ರ ಕನ್ನಡ ರಾಜ್ಯೋತ್ಸವ ಸಂಭ್ರಮವು ನವೆಂಬರ್ ಮಾಹೆಗೆ ಮಾತ್ರ ಸೀಮಿತವಾಗದೆ ನಿತ್ಯೋತ್ಸವವಾಗಬೇಕು ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣಬೈರೇಗೌಡ ಅಭಿಪ್ರಾಯಪಟ್ಟರು.
ಜಿಲ್ಲಾಡಳಿತದ ವತಿಯಿಂದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿಂದು ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಇತಿಹಾಸದಲ್ಲಿ ನಾನಾ ರಾಜ ಸಂಸ್ಥಾನಗಳಿಗೆ ಸೇರಿದ್ದರೂ ಸಹ ಸಾವಿರಾರು ವರ್ಷದಿಂದ ತನ್ನದೇ ಆದ ಭೌಗೋಳಿಕ, ಸಾಂಸ್ಕøತಿಕ, ಸಾಂಪ್ರದಾಯಿಕ ಹಿನ್ನೆಲೆಯನ್ನು ಕನ್ನಡ ನಾಡು ಹೊಂದಿದೆ. ಅಮೋಘವರ್ಷ ಕವಿರಾಜ ಮಾರ್ಗ ಕೃತಿಯೊಂದಿಗೆ ಸ್ಪಷ್ಟ ರೂಪ ಪಡೆದ ನಮ್ಮ ಕನ್ನಡ ಭಾಷೆ ಹಂತ-ಹಂತವಾಗಿ ಸಮೃದ್ಧ ಸಾಹಿತ್ಯದಿಂದ ಬೆಳೆದು ಬಂದು ಪ್ರಪಂಚದ ಪ್ರಮುಖ ಸಾಂಸ್ಕøತಿಕ ಘಟಕಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ ಎಂದು ತಿಳಿಸಿದರು.
ಸಾವಿರಾರು ವರ್ಷದಿಂದ ಬೇರೆ-ಬೇರೆ ಸಂಸ್ಥಾನಗಳಲ್ಲಿ ಹರಿದು-ಹಂಚಿ ಹೋಗಿದ್ದ, ಬ್ರಿಟೀಷರ ಆಳ್ವಿಕೆಯಲ್ಲೂ ಸಹ ಒಂದುಗೂಡಿ ಬದುಕಲು ಸಾಧ್ಯವಾಗದೇ ಇದ್ದ ಕನ್ನಡ ನಾಡನ್ನು ಒಂದುಗೂಡಿಸಬೇಕೆಂಬ ಕನ್ನಡಿಗರ ಆಶಯ ಪ್ರಯತ್ನವಾಗಿಯೇ ಉಳಿದಿತ್ತು. ಕನ್ನಡಿಗರನ್ನು ಒಂದುಗೂಡಿಸುವ ಭಾವನೆಗೆ ಮಣಿದು ಅಂದಿನ ಪ್ರಧಾನಿ ಜವಾಹರಲಾಲ್ ನೆಹರು ಅವರು ದೇಶದಲ್ಲಿ ಭಾಷಾವಾರು ಪ್ರಾಂತ್ಯಗಳನ್ನು ರಚನೆ ಮಾಡಲು ಒಲವು ತೋರಿದ ಹಿನ್ನೆಲೆಯಲ್ಲಿ 1956ರ ನವೆಂಬರ್ 1ರಂದು ವಿಶಾಲ ಮೈಸೂರು ರಾಜ್ಯ ನಿರ್ಮಾಣವಾಯಿತು. ಸಾವಿರಾರು ವರ್ಷಗಳ ಕನ್ನಡಿಗರು ಒಂದುಗೂಡುವ ಕನಸು ಈಡೇರಿತು. ಈ ದಿನವನ್ನು ನಾವಿಂದು ಸಂಭ್ರಮದಿಂದ ಆಚರಿಸುತ್ತಿದ್ದೇವೆ. ಈ ಸಂಭ್ರಮಕ್ಕೆ ಕಾರಣರಾದ ಎಲ್ಲಾ ಶ್ರಮಿಕರನ್ನು ನಾವಿಂದು ಸ್ಮರಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕನ್ನಡ ತಾಯಿ ಭುವನೇಶ್ವರಿ ಚಿತ್ರಪಟಕ್ಕೆ ಗಣ್ಯರು ಪುಷ್ಪ ನಮನ ಸಲ್ಲಿಸಿದರು. ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿರುವ ವಿವಿಧ ಕ್ಷೇತ್ರದ ಜಿಲ್ಲಾ ಮಟ್ಟದ 71 ಹಾಗೂ ತಾಲ್ಲೂಕು ಮಟ್ಟದ 24 ಸಾಧಕರನ್ನು ಗಣ್ಯರು ಸನ್ಮಾನಿಸಿ, ಸ್ಮರಣಿಕೆ ನೀಡಿ ಗೌರವಿಸಿದರು.
ಇದಕ್ಕೂ ಮುನ್ನ ಬೆಳಗ್ಗೆ 7.45 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಿಂದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದವರೆಗೆ ವಿವಿಧ ಇಲಾಖೆಗಳ ಸ್ತಬ್ದಚಿತ್ರ ಹಾಗೂ ಜನಪದ ಕಲಾತಂಡದೊಂದಿಗೆ ತಾಯಿ ಭುವನೇಶ್ವರಿ ಭಾವಚಿತ್ರವನ್ನು ಅಲಂಕೃತ ಬೆಳ್ಳಿ ರಥದಲ್ಲಿ ಮೆರವಣಿಗೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ನಗರ ಶಾಸಕ ಜಿ.ಬಿ. ಜ್ಯೋತಿ ಗಣೇಶ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ವಿ. ಅಶ್ವಿಜ, ಪಾಲಿಕೆ ಆಯುಕ್ತೆ ಶುಭ, ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ತಹಶೀಲ್ದಾರ್ ರಾಜೇಶ್ವರಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ ಕು. ಮಿರ್ಜಿ, ವಿವಿಧ ಶಾಲಾ ಮಕ್ಕಳು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿ/ಸಿಬ್ಬಂದಿ, ಸಾರ್ವಜನಿಕರು ಭಾಗವಹಿಸಿದ್ದರು.
ಗಮನ ಸೆಳೆದ ಸಾಂಸ್ಕøತಿಕ ಕಾರ್ಯಕ್ರಮ: ನಗರದ ಬಟವಾಡಿಯಲ್ಲಿರುವ ಸೆಂಟ್ ಮೆರೀಸ್ ಶಾಲೆಯ ವಿದ್ಯಾರ್ಥಿಗಳು ಪ್ರಸ್ತುತಪಡಿಸಿದ ‘ಕನ್ನಡ ನಾಡಿನ ರನ್ನದ ರತುನ ಕೇಳೋ ಕತೆಯನ್ನ’, ಕ್ಯಾತ್ಸಂದ್ರ ಸರ್ಕಾರಿ ಪ್ರೌಢಶಾಲೆಯ ಮಕ್ಕಳು ‘ದೇಶಕ್ಕೆ ಯೋಧ ನಾಡಿಗೆ ರೈತ’ ಬಿ.ಹೆಚ್. ರಸ್ತೆ ಶ್ರೀ ಸಿದ್ಧಗಂಗಾ ಪ್ರೌಢಶಾಲೆಯು ‘ಜನುಮ ನೀಡುತ್ತಾಳೆ ನಮ್ಮ ತಾಯಿ’ ಹಾಗೂ ವಿಜಯ ಪಿಯು ಕಾಲೇಜಿನ ವಿದ್ಯಾರ್ಥಿಗಳು ಹಚ್ಚೇವು ಕನ್ನಡ ದೀಪ ಹಾಡಿನ ನೃತ್ಯ ಪ್ರದರ್ಶನಗಳು ಒಂದಕ್ಕಿಂತ ಒಂದು ಎಲ್ಲರ ಗಮನ ಸೆಳೆದವು. ಅಪ್ರತಿಮ ಇತಿಹಾಸ ಹೊಂದಿರುವ ನಮ್ಮ ಹೆಮ್ಮೆಯ ನೃತ್ಯ ರೂಪಕದಲ್ಲಿ ಕನ್ನಡ ನಾಡಿನ ಹಿರಿಮೆ-ಗರಿಮೆಗಳನ್ನು ಸಾರುವ ಜೊತೆಗೆ ಕರುನಾಡಿನ ಸಾಹಿತಿ, ವಿವಿಧ ಕ್ಷೇತ್ರಗಳಲ್ಲಿ ಸಾಧಕರನ್ನು ಸ್ಮರಿಸಲಾಯಿತು.
ಪಥಸಂಚಲನದಲ್ಲಿ ಉತ್ತಮ ಪ್ರದರ್ಶನ : ಬಹುಮಾನ ವಿತರಣೆ: ಪಥಸಂಚಲನದಲ್ಲಿ ಉತ್ತಮ ಪ್ರದರ್ಶನ ನೀಡಿದ ಪೊಲೀಸ್ ವಿಭಾಗದಲ್ಲಿ 12ನೇ ಪಡೆ ಕೆಎಸ್‍ಆರ್‍ಪಿ ರಾಜ್ಯ ಮೀಸಲು ಪೊಲೀಸ್ ತಂಡಕ್ಕೆ ಪ್ರಥಮ ಹಾಗೂ ಡಿಎಆರ್ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ತಂಡಕ್ಕೆ ದ್ವಿತೀಯ ಬಹುಮಾನ ನೀಡಲಾಯಿತು. ಎನ್‍ಸಿಸಿ ವಿಭಾಗದಲ್ಲಿ ಸರ್ವೋದಯ ಕಾಲೇಜಿನ ಬಾಲಕರ ತಂಡ ಹಾಗೂ ಸಿದ್ಧಗಂಗಾ ಕಾಲೇಜಿನ ಬಾಲಕರ ತಂಡಕ್ಕೆ ಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ ಬಹುಮಾನವನ್ನು ಕೊಡಮಾಡಲಾಯಿತು. ಸ್ಕೌಟ್ಸ್ ಮತ್ತು ಗೈಡ್ಸ್ ವಿಭಾಗದಲ್ಲಿ ಆರ್ಯನ್ ಪ್ರೌಢಶಾಲೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಂಡಗಳಿಗೆ ಬಹುಮಾನ ನೀಡಿ ಗೌರ ವಿಸಲಾಯಿತು. ಸೇವಾ ದಳ ವಿಭಾಗದಲ್ಲಿ ಕನ್ನಿಕಾ ಆಂಗ್ಲಶಾಲೆ ಹಾಗೂ ಬಾಪೂಜಿ ಸಂಯುಕ್ತ ಪದವಿ ಪೂರ್ವ ಕಾಲೇಜಿಗೆ ಕ್ರಮವಾಗಿ ಮೊದಲ ಹಾಗೂ ಎರಡನೇ ಬಹುಮಾನವನ್ನು ವಿತರಿಸಲಾಯಿತು.

(Visited 1 times, 1 visits today)
kannada news karnataka local news tumakur tumkur Tumkur mahanagara palike tumkur news ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು:
Previous Articleಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ 151ನೇ ಜನ್ಮದಿನಾಚರಣೆ
Next Article ಏಕೀಕರಣಕ್ಕಾಗಿ ನಡೆದ ಹೋರಾಟದ ಮಹತ್ವವನ್ನು ಪ್ರತಿಯೊಬ್ಬರು ತಿಳಿಯಬೇಕು
News Desk Benkiyabale

Related Posts

ಕನ್ನಡಿಗರಿಗೆ ಐಟಿ-ಬಿಟಿ ಕ್ಷೇತ್ರದಲ್ಲಿ ಹೆಚ್ಚಿನ ಉದ್ಯೋಗಾವಕಾಶ ಸಿಗಬೇಕು

November 02, 2026 5:26 pm news

ಮೊಬೈಲ್ ಆ್ಯಪ್ ಮೂಲಕ ಬೆಳಗ್ಗೆ, ಮಧ್ಯಾಹ್ನ ಮಕ್ಕಳ ಹಾಜರಾತಿ ಕಡ್ಡಾಯ

November 02, 2026 5:25 pm news

ಏಕೀಕರಣಕ್ಕಾಗಿ ನಡೆದ ಹೋರಾಟದ ಮಹತ್ವವನ್ನು ಪ್ರತಿಯೊಬ್ಬರು ತಿಳಿಯಬೇಕು

November 02, 2026 5:23 pm news
ತಾಜಾ ಸುದ್ಧಿಗಳು
news

ಕನ್ನಡಿಗರಿಗೆ ಐಟಿ-ಬಿಟಿ ಕ್ಷೇತ್ರದಲ್ಲಿ ಹೆಚ್ಚಿನ ಉದ್ಯೋಗಾವಕಾಶ ಸಿಗಬೇಕು

November 02, 2026 5:26 pm
news

ಮೊಬೈಲ್ ಆ್ಯಪ್ ಮೂಲಕ ಬೆಳಗ್ಗೆ, ಮಧ್ಯಾಹ್ನ ಮಕ್ಕಳ ಹಾಜರಾತಿ ಕಡ್ಡಾಯ

November 02, 2026 5:25 pm
news

ಏಕೀಕರಣಕ್ಕಾಗಿ ನಡೆದ ಹೋರಾಟದ ಮಹತ್ವವನ್ನು ಪ್ರತಿಯೊಬ್ಬರು ತಿಳಿಯಬೇಕು

November 02, 2026 5:23 pm
news

ರಾಜ್ಯೋತ್ಸವ ನಿತ್ಯೋತ್ಸವವಾಗಬೇಕು: ಸಚಿವ ಕೃಷ್ಣಬೈರೇಗೌಡ

November 02, 2026 5:21 pm
news

ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ 151ನೇ ಜನ್ಮದಿನಾಚರಣೆ

October 31, 2026 5:46 pm
news

2026ರ ತಾಲ್ಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ 20 ಮಂದಿ ಆಯ್ಕೆ

October 31, 2026 5:44 pm
Our Youtube Channel
Our Picks

ಕನ್ನಡಿಗರಿಗೆ ಐಟಿ-ಬಿಟಿ ಕ್ಷೇತ್ರದಲ್ಲಿ ಹೆಚ್ಚಿನ ಉದ್ಯೋಗಾವಕಾಶ ಸಿಗಬೇಕು

November 02, 2026 5:26 pm

ಮೊಬೈಲ್ ಆ್ಯಪ್ ಮೂಲಕ ಬೆಳಗ್ಗೆ, ಮಧ್ಯಾಹ್ನ ಮಕ್ಕಳ ಹಾಜರಾತಿ ಕಡ್ಡಾಯ

November 02, 2026 5:25 pm

ಏಕೀಕರಣಕ್ಕಾಗಿ ನಡೆದ ಹೋರಾಟದ ಮಹತ್ವವನ್ನು ಪ್ರತಿಯೊಬ್ಬರು ತಿಳಿಯಬೇಕು

November 02, 2026 5:23 pm

ರಾಜ್ಯೋತ್ಸವ ನಿತ್ಯೋತ್ಸವವಾಗಬೇಕು: ಸಚಿವ ಕೃಷ್ಣಬೈರೇಗೌಡ

November 02, 2026 5:21 pm

ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ 151ನೇ ಜನ್ಮದಿನಾಚರಣೆ

October 31, 2026 5:46 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ZP CEO ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕನ್ನಡಿಗರಿಗೆ ಐಟಿ-ಬಿಟಿ ಕ್ಷೇತ್ರದಲ್ಲಿ ಹೆಚ್ಚಿನ ಉದ್ಯೋಗಾವಕಾಶ ಸಿಗಬೇಕು

By News Desk BenkiyabaleNovember 02, 2026 5:26 pm

ತುಮಕೂರು: ರಾಜ್ಯದ ಐಟಿ-ಬಿಟಿ ಕ್ಷೇತ್ರದಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗಾವಕಾಶಗಳು ದೊರೆಯಬೇಕು ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಹಾಗೂ ಸಂಸದೀಯ ವ್ಯವಹಾರಗಳ…

ಮೊಬೈಲ್ ಆ್ಯಪ್ ಮೂಲಕ ಬೆಳಗ್ಗೆ, ಮಧ್ಯಾಹ್ನ ಮಕ್ಕಳ ಹಾಜರಾತಿ ಕಡ್ಡಾಯ

November 02, 2026 5:25 pm

ಏಕೀಕರಣಕ್ಕಾಗಿ ನಡೆದ ಹೋರಾಟದ ಮಹತ್ವವನ್ನು ಪ್ರತಿಯೊಬ್ಬರು ತಿಳಿಯಬೇಕು

November 02, 2026 5:23 pm

ರಾಜ್ಯೋತ್ಸವ ನಿತ್ಯೋತ್ಸವವಾಗಬೇಕು: ಸಚಿವ ಕೃಷ್ಣಬೈರೇಗೌಡ

November 02, 2026 5:21 pm
News by Date
November 2026
M T W T F S S
 1
2345678
9101112131415
16171819202122
23242526272829
30  
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.