ತುಮಕೂರು: ಖಾಸಗಿ ಶಿಕ್ಷಣ ಸಂಸ್ಥೆ ಹಾಗೂ ಕಾಪೆರ್Çರೇಟ್ ಕಂಪನಿಗಳಿಗೆ ಸರ್ಕಾರಿ ಶಾಲೆಗಳನ್ನು ದತ್ತು ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ನೀತಿಯನ್ನು ವಿರೋಧಿಸಿ ಎಐಡಿಎಸ್‍ಒ ತುಮಕೂರು ಜಿಲ್ಲಾ ಸಮಿತಿ ವತಿಯಿಂದ ನಗರದ ಟೌನ್ ಹಾಲ್ ವೃತ್ತದ ಹತ್ತಿರ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಎಐಡಿಎಸ್‍ಒ ಜಿಲ್ಲಾ ಕಾರ್ಯದರ್ಶಿ ಲಕ್ಕಪ್ಪ ಮಾತನಾಡಿ ಜನತೆಯ ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಕೆಪಿಎಸ್-ಮ್ಯಾಗ್ನೆಟ್ ನೀತಿಯನ್ನ ಜಾರಿಗೆ ತರುತ್ತಿದೆ. ಏಷ್ಯನ್ ಡೆವಲಪ್‍ಮೆಂಟ್ ಬ್ಯಾಂಕ್ (ಎಡಿಬಿ) ಸಾಲದ ಒಪ್ಪಂದದ ಮೂಲಕ ರಾಜ್ಯದ 45,000 ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿದೆ. ಸರ್ಕಾರಿ ಶಾಲೆಗಳನ್ನು ಕಾಪೆರ್Çರೇಟ್ ಕಂಪನಿಗಳಿಗೆ ಹಾಗೂ ಖಾಸಗಿ ಶಾಲೆಗಳಿಗೆ ಹಸ್ತಾಂತರಿಸಲು ನವೆಂಬರ್ 4ರಂದು ವಿಧಾನಸೌಧದಲ್ಲಿ ಸಭೆ ನಡೆಸಿದೆ. ಮೊದಲ ಹಂತದಲ್ಲಿ 2000 ಶಾಲೆಗಳನ್ನು ಖಾಸಗಿಯವರಿಗೆ ದತ್ತು ನೀಡುವ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರದ ಈ ಕಡು ಜನ ವಿರೋಧಿ ನಡೆಯನ್ನು ತೀವ್ರವಾಗಿ ಖಂಡಿಸಿದರು.
ಮುಂದುವರೆದು ಮಾತನಾಡಿದವರು ರಾಜ್ಯದಲ್ಲಿ ಒಂದೆ ಒಂದು ಸರ್ಕಾರಿ ಶಾಲೆ ಮುಚ್ಚುವುದಿಲ್ಲ ಎಂದು ಹೇಳಿದ ಶಿಕ್ಷಣ ಸಚಿವರು ಈ ನಾಡಿನ ಜನತೆಗೆ ದ್ರೋಹ ಎಸಗಿದ್ದಾರೆ. ಸರ್ಕಾರದ ಈ ಕರಾಳ ಕೆಪಿಎಸ್ ಮ್ಯಾಗ್ನೆಟ್ ಯೋಜನೆ ವಿರುದ್ಧ ಹಳ್ಳಿ ಹಳ್ಳಿಗಳಲ್ಲಿ ಜನ ಚಳುವಳಿ ಬೆಳೆಸುವುದಾಗಿ ಎಚ್ಚರಿಕೆ ನೀಡಿದರು.
ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಉಪಾಧ್ಯಕ್ಷರಾದ ರತ್ನಮ್ಮ ಮಾತನಾಡುತ್ತ ಇಂದು ಎಲ್ಲಾ ಹಳ್ಳಿಗಳಲ್ಲೂ ಸಹ ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳಲು ವಿದ್ಯಾರ್ಥಿಗಳು, ಪೆÇೀಷಕರು ಹಾಗೂ ಗ್ರಾಮಸ್ಥರು ಹೋರಾಟ ಮತ್ತು ಪ್ರತಿಭಟನೆಗಳನ್ನು ಮಾಡುತ್ತಾ ಸರ್ಕಾರದ ಈ ಯೋಜನೆಗೆ ವಿರೋಧವನ್ನು ವ್ಯಕ್ತಪಡಿಸುತ್ತಿದ್ದರು ಸಹ ಸರ್ಕಾರ ಸರ್ಕಾರಿ ಶಾಲೆಗಳನ್ನು ಮುಚ್ಚುವ ಮೂಲಕ ಬಡಮಕ್ಕಳ ಭವಿಷ್ಯವನ್ನು ಬೀದಿಗೆ ತಳ್ಳುತ್ತಿದೆ, ಈ ಯೋಜನೆ ಜಾರಿಗೆ ಬಂದರೆ ಲಕ್ಷಾಂತರ ಸಂಖ್ಯೆಯಲ್ಲಿ ಹೆಣ್ಣು ಮಕ್ಕಳ ಶಿಕ್ಷಣ ಕುಂಠಿತವಾಗುತ್ತದೆ. ಇಂದಿನ ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ ಇಂತಹ ಸಂದರ್ಭದಲ್ಲಿ ಹತ್ತಾರು ಮೈಲಿಗಳು ದೂರದ ಶಾಲೆಗಳಿಗೆ ಹೆಣ್ಣು ಮಕ್ಕಳನ್ನು ಕಳಿಸುವುದು ಅಸಾಧ್ಯವಾಗಿದೆ. ಸರ್ಕಾರ ತನ್ನ ನಡೆಯನ್ನು ಬದಲಾಯಿಸಬೇಕು ಎಂದು ಎಚ್ಚರಿಕೆ ನೀಡಿದರು,
ಈ ಸಂದರ್ಭದಲ್ಲಿ ಎಐಡಿಎಸ್‍ಒ ಪದಾಧಿಕಾರಿಗಳಾದ ಭರತ್, ಸೈಯದ್, ಮಹಾಂತೇಶ್, ಅಪ್ಪಾಜಿ, ಬಸವರಾಜ್ ಮತ್ತು ವಿದ್ಯಾರ್ಥಿಗಳು ಹಾಗೂ ಪೆÇೀಷಕರು ಉಪಸ್ಥಿತರಿದ್ದರು.

(Visited 1 times, 1 visits today)