ತುಮಕೂರು: ಗಣಿತವೆಂದರೆ ಕೇವಲ ಸಂಖ್ಯೆಗಳ ಲೆಕ್ಕಾಚಾರಕ್ಕೆ ಸೀಮಿತವಾದ ವಿಷಯವಲ್ಲ. ಅದು ಜಗತ್ತಿನ ಸಂಕೀರ್ಣ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು, ವಿಶ್ಲೇಷಿಸಲು ಹಾಗೂ ವೈಜ್ಞಾನಿಕವಾಗಿ ಪರಿಹಾರ ಕಂಡುಕೊಳ್ಳಲು ಸಹಕಾರಿಯಾಗಿದೆ ಎಂದು ರೇವಾ ವಿಶ್ವವಿದ್ಯಾನಿಲಯದ ಸ್ಕೂಲ್ ಆಫ್ ಅಪ್ಲೈಡ್ ಸೈನ್ಸಸ್ನ ಸಂಪನ್ಮೂಲ ವ್ಯಕ್ತಿ ಡಾ. ಸುಶಾನ್ ಬ್ಯಾರಿ ಅವರು ಹೇಳಿದರು.
ತುಮಕೂರು ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜಿನ ಗಣಿತಶಾಸ್ತ್ರ ವಿಭಾಗದ ವತಿಯಿಂದ ನ.06 ಶನಿವಾರದಂದು ಆಯೋಜಿಸಲಾಗಿದ್ದ “ಮ್ಯಾಥಮೆಟಿಕಲ್ ಕಂಪ್ಯೂಟಿಂಗ್ ಯೂಸಿಂಗ್ ಪೈಥಾನ್” ವಿಷಯದ ಕುರಿತು ಒಂದು ದಿನದ ರಾಜ್ಯಮಟ್ಟದ ಪ್ರಾಯೋಗಿಕ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ವಿಜ್ಞಾನ, ತಂತ್ರಜ್ಞಾನ, ವೈದ್ಯಕೀಯ, ಆರ್ಥಿಕತೆ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲಿಯೂ ಗಣಿತದ ಪಾತ್ರ ಮಹತ್ವದ್ದಾಗಿದೆ. ಗಣಿತದ ಪರಿಕಲ್ಪನೆಗಳನ್ನು ಕಂಪ್ಯೂಟರ್ ತಂತ್ರಜ್ಞಾನದೊಂದಿಗೆ ಸಂಯೋಜಿಸಿದಾಗ ಸಮಸ್ಯೆಗಳಿಗೆ ವೇಗವಾಗಿ ಮತ್ತು ನಿಖರವಾಗಿ ಪರಿಹಾರ ಕಂಡುಕೊಳ್ಳಬಹುದು. ಈ ನಿಟ್ಟಿನಲ್ಲಿ ಪೈಥಾನ್ನಂತಹ ಪೆÇ್ರೀಗ್ರಾಮಿಂಗ್ ಭಾಷೆಗಳು ಗಣಿತೀಯ ಸಂಶೋಧನೆ ಮತ್ತು ಆಧುನಿಕ ತಂತ್ರಜ್ಞಾನದ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡುತ್ತಿವೆ ಎಂದರು.
ತುಮಕೂರು ವಿಶ್ವವಿದ್ಯಾನಿಲಯದ ಗಣಿತಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಪೆÇ್ರ. ಪಾಟೀಲ್ ಮಲ್ಲಿಕಾರ್ಜುನ ಬಿ. ಮಾತನಾಡಿ ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಗಣಿತೀಯ ಸಮಸ್ಯೆಗಳನ್ನು ಸುಲಭವಾಗಿ ವಿಶ್ಲೇಷಿಸಲು, ಲೆಕ್ಕಾಚಾರಗಳನ್ನು ನಿಖರವಾಗಿ ನಿರ್ವಹಿಸಲು ಹಾಗೂ ಸಂಶೋಧನಾ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳಲು ಪೈಥಾನ್ ಪೆÇ್ರೀಗ್ರಾಮಿಂಗ್ ಜ್ಞಾನ ಅತ್ಯಂತ ಉಪಯುಕ್ತವಾಗಿದೆ ಎಂದರು.
ತುಮಕೂರು ವಿವಿ ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಾದ ಪೆÇ್ರ. ಎಸ್. ಶ್ರೀನಿವಾಸ ಮಾತನಾಡಿ ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕದ ಜ್ಞಾನಕ್ಕೆ ಸೀಮಿತವಾಗದೆ, ಪ್ರಾಯೋಗಿಕ ಕೌಶಲಗಳನ್ನು ಬೆಳೆಸಿಕೊಳ್ಳಬೇಕು. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪೆÇ್ರೀಗ್ರಾಮಿಂಗ್ ಭಾಷೆಗಳ ಅರಿವು ಉನ್ನತ ಶಿಕ್ಷಣ, ಸಂಶೋಧನೆ ಮತ್ತು ಉದ್ಯೋಗಾವಕಾಶಗಳ ದೃಷ್ಟಿಯಿಂದ ಮಹತ್ವದ ಪಾತ್ರ ವಹಿಸುತ್ತದೆ. ಗಣಿತ ವಿಷಯವನ್ನು ತಂತ್ರಜ್ಞಾನದೊಂದಿಗೆ ಸಂಯೋಜಿಸಿಕೊಂಡು ಕಲಿತಾಗ ಹೊಸ ಆಲೋಚನೆಗಳು ಮತ್ತು ಸಂಶೋಧನೆಗೆ ಹೆಚ್ಚಿನ ಅವಕಾಶಗಳು ದೊರೆಯುತ್ತವೆ ಎಂದರು.
ವಿಭಾಗ ಮುಖ್ಯಸ್ಥರಾದ ಡಾ. ನರಹರಿ ಪ್ರಸ್ತಾವಿಕ ನುಡಿಗಳನ್ನಾಡಿದರು. ಉಪನ್ಯಾಸಕರಾದ ಡಾ. ಅನ್ನಪೂರ್ಣ ಸ್ವಾಗತಿಸಿದರು. ಸೈದ ಆಯಿಷಾ ಸಿದ್ಧಿಕ್ ವಂದಿಸಿದರು. ಶೃತಿ ಟಿ. ನಿರೂಪಿಸಿದರು.
(Visited 1 times, 1 visits today)





