BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಸೂಚನೆ
  • ಕೈಗಾರಿಕೆಗಳ ಅಭಿವೃದ್ಧಿಗಾಗಿ ಕೇಂದ್ರದಿಂದ ಪಿಎಲ್‍ಐ ಯೋಜನೆಯಡಿ 11500 ಕೋಟಿ ರೂ. ಬಿಡುಗಡೆ
  • ರಸ್ತೆಯಲ್ಲಿನ ಗುಂಡಿಗಳನ್ನ ಮುಚ್ಚುವಂತೆ ಪ್ರತಿಭಟನೆ
  • ನಿರಾಮ್ ಪ್ಯಾಲಿಯೇಟಿವ್ ಕೇರ್ ಕೇಂದ್ರದಿಂದ ಹೋಂ ಕೇರ್ ಸೇವೆ
  • ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸರಣಿ ಅಪಘಾತಗಳು
  • ಇತಿಹಾಸ ಪ್ರಸಿದ್ದ ಗೂಳೂರು ಮಹಾ ಗಣಪತಿ ಮೂರ್ತಿ ಪ್ರಷ್ಠಾಪನೆ
  • ಕನ್ನಡ ರಾಜ್ಯೋತ್ಸವ, ಟಿಪ್ಪು ಸುಲ್ತಾನ್ ಜಯಂತಿ ಆಚರಣೆ
  • ಸಾಂಸ್ಕೃತಿಕ ಉತ್ಸವಗಳು ಒಗ್ಗಟ್ಟು ತರಲು ಸಹಕಾರಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಸೂಚನೆ
news

ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಸೂಚನೆ

By News Desk BenkiyabaleUpdated:November 12, 2026 5:34 pm

ತುಮಕೂರು: ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆ ಹಾಗೂ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿರುವ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸುವ ಕುರಿತು ಕರ್ನಾಟಕ ಸರ್ಕಾರದ ನವದೆಹಲಿಯ ವಿಶೇಷ ಪ್ರತಿನಿಧಿಗಳು ಹಾಗೂ ಶಿರಾ ಶಾಸಕ ಟಿ.ಬಿ. ಜಯಚಂದ್ರ ಅವರ ಅಧ್ಯಕ್ಷತೆಯಲ್ಲಿ ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಸಭೆಯಲ್ಲಿ ಭೂಸ್ವಾಧೀನ ಪ್ರಕ್ರಿಯೆಯ ಪ್ರಗತಿ, ರೈತರಿಗೆ ನೀಡಬೇಕಾದ ಪರಿಹಾರ ಮೊತ್ತ ಅರಣ್ಯ ಮತ್ತು ತೋಟಗಾರಿಕೆ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳು ಸೇರಿದಂತೆ ವಿವಿಧ ಹಂತಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು.
ಭದ್ರಾ ಮೇಲ್ದಂಡೆ ಯೋಜನೆಯು ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳ ಹಲವು ತಾಲ್ಲೂಕುಗಳ ಕೆರೆಗಳಿಗೆ ನೀರು ತುಂಬಿಸುವ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ಈ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಸ್ಥಳೀಯವಾಗಿಯೇ ಚರ್ಚಿಸಿ ಪರಿಹರಿಸುವ ಉದ್ದೇಶದಿಂದ ತುಮಕೂರಿನಲ್ಲಿ ಸಭೆ ಆಯೋಜಿಸಲಾಗಿದೆ. ಬೆಂಗಳೂರಿನಲ್ಲಿ ಸಭೆ ನಡೆಸುವುದರಿಂದ ಎಲ್ಲಾ ಸ್ಥಳೀಯ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದರು.
ರಾಜ್ಯದಲ್ಲಿಯೇ ತುಮಕೂರು ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಯೋಜನೆಗಳಿಗೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಉತ್ತಮ ಸಾಧನೆ ಮಾಡಲಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿ ಭದ್ರಾ ಮೇಲ್ದಂಡೆ ಯೋಜನೆಗೆ ಅಲ್ಪ ಪ್ರಮಾಣದ ಭೂಸ್ವಾಧೀನ ಪ್ರಕ್ರಿಯೆ ಬಾಕಿ ಇರುವ ಬಗ್ಗೆ ಪ್ರತಿಕ್ರಿಯಿಸಿದರು.
ಜಿಲ್ಲಾಧಿಕಾರಿಗಳು ಮಾತನಾಡಿ, ಭದ್ರಾ ಮೇಲ್ದಂಡೆ ಯೋಜನೆಗೆ ಅಗತ್ಯವಿರುವ ಭೂಮಿಯ ಪಡೆದುಕೊಂಡು ಮುಂದಿನ ಕ್ರಮ ವಹಿಸಲಾಗುವುದೆಂದು ಸಭೆಯ ಗಮನಕ್ಕೆ ತಂದರು. ಭದ್ರಾ ಮೇಲ್ದಂಡೆ ಯೋಜನೆಗೆ ಬೇಕಾದ ಭೂಮಿಯನ್ನು ಭೂಸ್ವಾಧಿನಿ ಪಡಿಸಿಕೊಳ್ಳಲು ಅಗತ್ಯ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಅಲ್ಲದೆ, ಕಂದಾಯ, ತೋಟಗಾರಿಕೆ, ಕೃಷಿ ಹಾಗೂ ಲೋಕೋಪಯೋಗಿ ಇಲಾಖೆಗಳಿಗೆ ಸಂಬಂಧಿಸಿದ ಬಾಕಿ ಪ್ರಕರಣಗಳನ್ನು ನಿಯಮಾನುಸಾರ ಪರಿಶೀಲಿಸಿ, ತ್ವರಿತವಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಅರಣ್ಯ ಇಲಾಖೆಯ ಅನುಮತಿ ಕುರಿತು ಬೆಂಗಳೂರಿನಿಂದ ಆಗಮಿಸಿದ್ದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಭದ್ರಾ ಮೇಲ್ದಂಡೆ ಯೋಜನೆಯ 2, 5 ಮತ್ತು 9ನೇ ಪ್ಯಾಕೇಜ್‍ಗಳಿಗೆ ಸಂಬಂಧಿಸಿದ ಅರಣ್ಯ ಇಲಾಖೆಯ ಸಮಸ್ಯೆಗಳು, ಅನುಮತಿ ಪ್ರಕ್ರಿಯೆ ಹಾಗೂ ಪ್ರಸ್ತುತ ಸ್ಥಿತಿಗತಿಗಳ ಕುರಿತು ಸಭೆಗೆ ವಿವರವಾದ ಮಾಹಿತಿ ನೀಡಿದರು.
ಯೋಜನೆಯ ಅನುಷ್ಠಾನದಲ್ಲಿ ಭೂಸ್ವಾಧೀನ ಹಾಗೂ ಇತರೆ ಇಲಾಖೆಗಳ ಮಟ್ಟದಲ್ಲಿ ಉಂಟಾಗಿರುವ ವಿಳಂಬಕ್ಕೆ ಕಾರಣಗಳನ್ನು ಪರಿಶೀಲಿಸಲಾಯಿತು. ಸಂಬಂಧಪಟ್ಟ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ, ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ಆದ್ಯತೆಯ ಮೇರೆಗೆ ಕಾಲಮಿತಿಯೊಳಗೆ ಇತ್ಯರ್ಥಪಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಮಾನ್ಯ ಅಧ್ಯಕ್ಷರು ತಿಳಿಸಿದರು.
ಸಭೆಯಲ್ಲಿ ಚಿಕ್ಕನಾಯಕನಹಳ್ಳಿ ಮಾನ್ಯ ಶಾಸಕರು, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ವ್ಯವಸ್ಥಾಪಕ ನಿರ್ದೇಶಕರು ವಿಶ್ವೇಶ್ವರಯ್ಯ ಜಲ ನಿಗಮ ಬೆಂಗಳೂರು ಹಾಜರಾಗಿದ್ದು,ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಅಭಿಯಂತರರು ಕಾರ್ಯಪಾಲಕ ಅಭಿಯಂತರರು ಹಾಗೂ ತಹಶೀಲ್ದಾರಗಳು ಭಾಗವಹಿಸಿದ್ದರು.

(Visited 1 times, 1 visits today)
kannada news karnataka local news tumakur tumkur ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು:
Previous Articleಕೈಗಾರಿಕೆಗಳ ಅಭಿವೃದ್ಧಿಗಾಗಿ ಕೇಂದ್ರದಿಂದ ಪಿಎಲ್‍ಐ ಯೋಜನೆಯಡಿ 11500 ಕೋಟಿ ರೂ. ಬಿಡುಗಡೆ
News Desk Benkiyabale

Related Posts

ಕೈಗಾರಿಕೆಗಳ ಅಭಿವೃದ್ಧಿಗಾಗಿ ಕೇಂದ್ರದಿಂದ ಪಿಎಲ್‍ಐ ಯೋಜನೆಯಡಿ 11500 ಕೋಟಿ ರೂ. ಬಿಡುಗಡೆ

November 12, 2026 5:16 pm news

ರಸ್ತೆಯಲ್ಲಿನ ಗುಂಡಿಗಳನ್ನ ಮುಚ್ಚುವಂತೆ ಪ್ರತಿಭಟನೆ

November 12, 2026 5:13 pm news

ನಿರಾಮ್ ಪ್ಯಾಲಿಯೇಟಿವ್ ಕೇರ್ ಕೇಂದ್ರದಿಂದ ಹೋಂ ಕೇರ್ ಸೇವೆ

November 12, 2026 5:09 pm news
ತಾಜಾ ಸುದ್ಧಿಗಳು
news

ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಸೂಚನೆ

November 12, 2026 5:34 pm
news

ಕೈಗಾರಿಕೆಗಳ ಅಭಿವೃದ್ಧಿಗಾಗಿ ಕೇಂದ್ರದಿಂದ ಪಿಎಲ್‍ಐ ಯೋಜನೆಯಡಿ 11500 ಕೋಟಿ ರೂ. ಬಿಡುಗಡೆ

November 12, 2026 5:16 pm
news

ರಸ್ತೆಯಲ್ಲಿನ ಗುಂಡಿಗಳನ್ನ ಮುಚ್ಚುವಂತೆ ಪ್ರತಿಭಟನೆ

November 12, 2026 5:13 pm
news

ನಿರಾಮ್ ಪ್ಯಾಲಿಯೇಟಿವ್ ಕೇರ್ ಕೇಂದ್ರದಿಂದ ಹೋಂ ಕೇರ್ ಸೇವೆ

November 12, 2026 5:09 pm
news

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸರಣಿ ಅಪಘಾತಗಳು

November 11, 2026 4:46 pm
news

ಇತಿಹಾಸ ಪ್ರಸಿದ್ದ ಗೂಳೂರು ಮಹಾ ಗಣಪತಿ ಮೂರ್ತಿ ಪ್ರಷ್ಠಾಪನೆ

November 11, 2026 4:44 pm
Our Youtube Channel
Our Picks

ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಸೂಚನೆ

November 12, 2026 5:34 pm

ಕೈಗಾರಿಕೆಗಳ ಅಭಿವೃದ್ಧಿಗಾಗಿ ಕೇಂದ್ರದಿಂದ ಪಿಎಲ್‍ಐ ಯೋಜನೆಯಡಿ 11500 ಕೋಟಿ ರೂ. ಬಿಡುಗಡೆ

November 12, 2026 5:16 pm

ರಸ್ತೆಯಲ್ಲಿನ ಗುಂಡಿಗಳನ್ನ ಮುಚ್ಚುವಂತೆ ಪ್ರತಿಭಟನೆ

November 12, 2026 5:13 pm

ನಿರಾಮ್ ಪ್ಯಾಲಿಯೇಟಿವ್ ಕೇರ್ ಕೇಂದ್ರದಿಂದ ಹೋಂ ಕೇರ್ ಸೇವೆ

November 12, 2026 5:09 pm

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸರಣಿ ಅಪಘಾತಗಳು

November 11, 2026 4:46 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ZP CEO ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಸೂಚನೆ

By News Desk BenkiyabaleNovember 12, 2026 5:34 pm

ತುಮಕೂರು: ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆ ಹಾಗೂ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿರುವ…

ಕೈಗಾರಿಕೆಗಳ ಅಭಿವೃದ್ಧಿಗಾಗಿ ಕೇಂದ್ರದಿಂದ ಪಿಎಲ್‍ಐ ಯೋಜನೆಯಡಿ 11500 ಕೋಟಿ ರೂ. ಬಿಡುಗಡೆ

November 12, 2026 5:16 pm

ರಸ್ತೆಯಲ್ಲಿನ ಗುಂಡಿಗಳನ್ನ ಮುಚ್ಚುವಂತೆ ಪ್ರತಿಭಟನೆ

November 12, 2026 5:13 pm

ನಿರಾಮ್ ಪ್ಯಾಲಿಯೇಟಿವ್ ಕೇರ್ ಕೇಂದ್ರದಿಂದ ಹೋಂ ಕೇರ್ ಸೇವೆ

November 12, 2026 5:09 pm
News by Date
November 2026
M T W T F S S
 1
2345678
9101112131415
16171819202122
23242526272829
30  
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.