ತುಮಕೂರು: ಜಿಲ್ಲೆಯ ರೇಷ್ಮೆ ಕೃಷಿ ಪ್ರಗತಿ ಹಾಗೂ ವಿವಿಧ ಯೋಜನೆಗಳ ಅನುಷ್ಠಾನದಲ್ಲಿನ ಸಾಧನೆಗಳನ್ನು ಪ್ರಶಂಸಿಸಿ ರೇಷ್ಮೆ ಹಾಗೂ ಪಶುಸಂಗೋಪನಾ ಸಚಿವ ಸಿ. ಪುಟ್ಟರಂಗಶೆಟ್ಟಿ ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ರೇಷ್ಮೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇಲಾಖೆಯಲ್ಲಿ ಅಧಿಕಾರಿ-ಸಿಬ್ಬಂದಿ ಇದೇ ಕಾರ್ಯಕ್ಷಮತೆಯನ್ನು ಮುಂದುವರಿಸುವುದರೊAದಿಗೆ ಇನ್ನಷ್ಟು ಉತ್ತಮ ಪ್ರಗತಿ ಸಾಧಿಸಬೇಕೆಂದು ಅಧಿಕಾರಿಗಳಿಗೆ ಪ್ರೋತ್ಸಾಹ ಮತ್ತು ಮಾರ್ಗದರ್ಶನ ನೀಡಿದರು.
ರೈತರಿಗೆ ಹೆಚ್ಚಿನ ಅನುಕೂಲ ಕಲ್ಪಿಸುವುದರೊಂದಿಗೆ ರೇಷ್ಮೆ ಕೃಷಿಯ ವಿಸ್ತರಣೆ ಮತ್ತು ಉತ್ಪಾದನೆ ಹೆಚ್ಚಿಸಲು ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು. ವಿಬಿಜಿರಾಮ್-ಜಿ ಯೋಜನೆಯಡಿ ಮಾನವ ದಿನಗಳ ಸೃಜನೆ ಮತ್ತು ರೇಷ್ಮೆ ಕೃಷಿ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಇನ್ನಷ್ಟು ಪ್ರಗತಿ ಸಾಧಿಸಬೇಕು. ಇಲಾಖೆಯಲ್ಲಿ ಈಗಾಗಲೇ ಸಾಧಿಸಿರುವ ಪ್ರಗತಿಯನ್ನು ಕಾಯ್ದುಕೊಂಡು ಮುಂದುವರಿಸುವುದರೊAದಿಗೆ ಯೋಜನೆಗಳ ಅನುಷ್ಠಾನವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಕೈಗೊಳ್ಳಬೇಕೆಂದು ಸೂಚಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ವಿ. ಅಶ್ವಿಜಾ ಮಾತನಾಡಿ, ವಿಬಿಜಿರಾಮ್-ಜಿ ಯೋಜನೆಯಡಿ ರೇಷ್ಮೆ ಕೃಷಿ ಸಂಬAಧಿತ ಕಾಮಗಾರಿಗಳ ಅನುಷ್ಠಾನಕ್ಕೆ ಹೆಚ್ಚಿನ ಆದ್ಯತೆ ನೀಡಿ, ಮಾನವ ದಿನಗಳ ಸೃಜನೆ ಹಾಗೂ ಫಲಾನುಭವಿಗಳ ಸಂಖ್ಯೆಯನ್ನು ಹೆಚ್ಚಿಸುವ ಮೂಲಕ ಜಿಲ್ಲೆ ಇನ್ನಷ್ಟು ಪ್ರಗತಿ ಸಾಧಿಸಬೇಕು ಎಂದು ನಿರ್ದೇಶಿಸಿದರು.
ನಂತರ ಪ್ರಗತಿ ವರದಿ ಮಂಡಿಸಿದ ರೇಷ್ಮೆ ಇಲಾಖೆಯ ಉಪನಿರ್ದೇಶಕ ಟಿ. ಲಕ್ಷ್ಮೀನರಸಯ್ಯ ಅವರು, ೨೦೨೬ರ ಅಕ್ಟೋಬರ್ ಅಂತ್ಯಕ್ಕೆ ಜಿಲ್ಲೆಯಲ್ಲಿ ೮,೩೭೭.೬೫ ಹೆಕ್ಟೇರ್ ಹಿಪ್ಪುನೇರಳೆ ವಿಸ್ತೀರ್ಣವಿದ್ದು, ೧೦,೩೬೭ ರೇಷ್ಮೆ ಬೆಳೆಗಾರರು ರೇಷ್ಮೆ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ. ರಾಜ್ಯದಲ್ಲಿಯೇ ದ್ವಿತಳಿ ಗೂಡು ಉತ್ಪಾದನೆಯಲ್ಲಿ ಜಿಲ್ಲೆ ಪ್ರಥಮ ಸ್ಥಾನದಲ್ಲಿದ್ದು, ಒಟ್ಟು ೨,೮೦೩.೨೩೧ ಮೆಟ್ರಿಕ್ ಟನ್ ರೇಷ್ಮೆ ಗೂಡು ಉತ್ಪಾದನೆಯಾಗಿದೆ ಎಂದು ವಿವರಿಸಿದರು.
ಕಳೆದ ೩ ವರ್ಷಗಳಿಂದ ನರೇಗಾ ಯೋಜನೆಯಡಿ ಮಾನವ ದಿನಗಳ ಸೃಜನೆಯಲ್ಲಿಯೂ ಜಿಲ್ಲೆ ರಾಜ್ಯದಲ್ಲಿ ಪ್ರಥಮ ಸ್ಥಾನ ಕಾಯ್ದುಕೊಂಡಿದೆ. ಗೂಡಿನ ಗುಣಮಟ್ಟ ಹಾಗೂ ಮಾರುಕಟ್ಟೆ ಹರಾಜಿನಲ್ಲಿ ರೈತರಿಗೆ ದೊರೆಯುತ್ತಿರುವ ಉತ್ತಮ ಬೆಲೆಯಲ್ಲಿಯೂ ಜಿಲ್ಲೆ ಗಮನಾರ್ಹ ಸಾಧನೆ ಮಾಡಿದೆ. ವಿಶೇಷವಾಗಿ ೧೩೦ ಗುಂಪು ಸಭೆಗಳನ್ನು ನಡೆಸಿ, ೭೭೮.೨೮ ಹೆಕ್ಟೇರ್(೧,೯೪೫.೨೮ ಎಕರೆ) ಪ್ರದೇಶದಲ್ಲಿ ಹೊಸದಾಗಿ ಹಿಪ್ಪುನೇರಳೆ ವಿಸ್ತರಣೆ ಮಾಡಲಾಗಿದ್ದು, ೬೦೬ ಹೊಸ ಕುಟುಂಬಗಳನ್ನು ರೇಷ್ಮೆ ಕೃಷಿಗೆ ಸೇರ್ಪಡೆಗೊಳಿಸಲಾಗಿದೆ ಎಂದು ತಿಳಿಸುವ ಜೊತೆಗೆ ೨೦೨೬-೨೭ನೇ ಸಾಲಿನಲ್ಲಿ ೨೫೦೦ ಕಾಮಗಾರಿಗಳನ್ನು ಈಗಾಗಲೇ ಕ್ರಿಯಾ ಯೋಜನೆಯಲ್ಲಿ ಸೇರಿಸಲಾಗಿದೆ. ಅಲ್ಲದೆ ೧,೫೦೦ ಎಕರೆ ಪ್ರದೇಶದಲ್ಲಿ ಹಿಪ್ಪುನೇರಳೆ ವಿಸ್ತರಣೆ ಹಾಗೂ ೧,೦೦೦ ಹೊಸ ರೈತರನ್ನು ರೇಷ್ಮೆ ಕೃಷಿಗೆ ತರಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಸಭೆಯಲ್ಲಿ ರೇಷ್ಮೆ ಇಲಾಖೆಯ ಆಯುಕ್ತ ಲಿಂಗರಾಜು, ರೇಷ್ಮೆ ಜಂಟಿ ನಿರ್ದೇಶಕ ರಾಚಪ್ಪ, ರೇಷ್ಮೆ ಸಹಾಯಕ ನಿರ್ದೇಶಕರು ಮತ್ತು ರೇಷ್ಮೆ ವಿಸ್ತರಣಾಧಿಕಾರಿಗಳು, ರೇಷ್ಮೆ ನಿರೀಕ್ಷಕರು ಉಪಸ್ಥಿತರಿದ್ದರು.
(Visited 1 times, 1 visits today)



