ತುಮಕೂರು: ೨೦೪೭ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟçವನ್ನಾಗಿ ರೂಪಿಸುವ ಮಹತ್ವದ ಗುರಿಯನ್ನು ಸಾಕಾರಗೊಳಿಸುವಲ್ಲಿ ಯುವಜನರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಯುವಜನರು ಕೇವಲ ಉದ್ಯೋಗಾಕಾಂಕ್ಷಿಗಳಾಗದೆ, ದೇಶದ ಅಭಿವೃದ್ಧಿಗೆ ಹೊಸ ಆಲೋಚನೆ, ಸೃಜನಶೀಲತೆ ಮತ್ತು ನಾಯಕತ್ವದ ಮೂಲಕ ಕೊಡುಗೆ ನೀಡುವ ಜವಾಬ್ದಾರಿಯುತ ನಾಯಕರಾಗಿ ರೂಪುಗೊಳ್ಳಬೇಕು ಎಂದು ತುಮಕೂರು ವಿವಿ ಕಲಾ ನಿಕಾಯ ಡೀನರು ಪ್ರೊ. ಪರಶುರಾಮ ಕೆ. ಜಿ. ಅವರು ಹೇಳಿದರು.
ತುಮಕೂರು ವಿಶ್ವವಿದ್ಯಾನಿಲಯದ ರಾಷ್ಟಿçÃಯ ಸೇವಾ ಯೋಜನಾ ಕೋಶ ಮತ್ತು ಬೆಂಗಳೂರಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ (ಕರ್ನಾಟಕ ಸರ್ಕಾರ) ಸಹಯೋಗದಲ್ಲಿ ನ. ೧೬ ಸೋಮವಾರದಂದು ಆಯೋಜಿಸಿದ್ದ ವಿಕಸಿತ್ ಭಾರತ ಯಂಗ್ ಲೀಡರ್ಸ್ ಡೈಲಾಗ್ ಪಿ.ಪಿ.ಟಿ ಜಿಲ್ಲಾ ಮಟ್ಟದ ಚಾಂಪಿಯನ್ ಶಿಪ್ ಸ್ಪರ್ಧೆ ಯನ್ನು ಉದ್ಘಾಟಿಸಿ ಮಾತನಾಡಿದರು.
ಯುವಕರು ಇಂದಿನ ಸಮಸ್ಯೆಗಳನ್ನು ವಿಶ್ಲೇಷಿಸುವ ಸಾಮರ್ಥ್ಯ ಹಾಗೂ ನವೀನ ಚಿಂತನೆ ಬೆಳೆಸುವುದು ಇಂತಹ ಸ್ಪರ್ಧೆಗಳ ಪ್ರಮುಖ ಉದ್ದೇಶವಾಗಿದೆ ಎಂದರು.
ರಾಜ್ಯಶಾಸ್ತç ಅಧ್ಯಯನ ವಿಭಾಗ ಹಾಗೂ ಸಂಶೋಧನಾ ಕೇಂದ್ರದ ಹಿರಿಯ ಪ್ರಾಧ್ಯಾಪಕರಾದ ಪ್ರೊ. ಬಸವರಾಜ ಜಿ. ಅವರು ಮಾತನಾಡಿ ವಿಕಸಿತ ಭಾರತ ಪರಿಕಲ್ಪನೆಯು ಕೇವಲ ಆರ್ಥಿಕ ಬೆಳವಣಿಗೆಗೆ ಸೀಮಿತವಾಗದೆ, ಶಿಕ್ಷಣ, ಆರೋಗ್ಯ, ತಂತ್ರಜ್ಞಾನ, ಕೃಷಿ, ಉದ್ಯೋಗ, ಪರಿಸರ ಸಂರಕ್ಷಣೆ, ಸಾಮಾಜಿಕ ಸಮಾನತೆ ಸೇರಿದಂತೆ ಎಲ್ಲ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಯನ್ನು ಒಳಗೊಂಡಿದೆ. ಈ ನಿಟ್ಟಿನಲ್ಲಿ ಯುವಜನರ ಚಿಂತನೆ, ಸಂಶೋಧನೆ ಮತ್ತು ಕ್ರಿಯಾಶೀಲ ಪಾಲ್ಗೊಳ್ಳುವಿಕೆ ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ಯುವಕರು ಕೇವಲ ಏಕಮುಖ ಸಂವಹನ ರೀತಿಯಲ್ಲಿ ತಮ್ಮ ವಿಚಾರಗಳನ್ನು ಅರ್ಥೆÊಸಿಕೊಳ್ಳುವುದಕ್ಕೆ ಸೀಮಿತವಾಗಬಾರದು. ಬದಲಾಗಿ, ಸಂವಾದದ ಮೂಲಕ ಪರಸ್ಪರ ವಿಚಾರ ವಿನಿಮಯ ಮಾಡಿಕೊಂಡು, ಸಮಾಜದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಬೇಕು. ಯುವಜನರು ತಮ್ಮ ಆಲೋಚನೆ, ಪ್ರತಿಭೆ ಹಾಗೂ ನಾಯಕತ್ವದ ಗುಣಗಳನ್ನು ಸಮರ್ಥವಾಗಿ ಬಳಸಿಕೊಂಡು ಸದೃಢ ಮತ್ತು ಸ್ವಾವಲಂಬಿ ಭಾರತ ನಿರ್ಮಾಣಕ್ಕೆ ಒತ್ತು ನೀಡಬೇಕು. ದೇಶದ ಅಭಿವೃದ್ಧಿಯ ಕುರಿತು ಕೇವಲ ಮಾತನಾಡುವುದಷ್ಟೇ ಅಲ್ಲದೆ, ಅದರಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.
ತುಮಕೂರು ವಿಶ್ವವಿದ್ಯಾನಿಲಯದ ರಾಷ್ಟಿçÃಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಪ್ರೊ. ನಾಗಭೂಷಣ ಬಗ್ಗನಡು ಅವರು ಸ್ವಾಗತಿಸಿದರು. ಅನಿತಾ ವಂದಿಸಿದರು. ತುಮಕೂರು ವಿವಿ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಡಾ. ಸುದೀಪ್ ಕುಮಾರ್ ಆರ್. ಅವರು ಉಪಸ್ಥಿತರಿದ್ದರು.
(Visited 1 times, 1 visits today)



