ತುಮಕೂರು: ಜಿಲ್ಲೆಯಲ್ಲಿರುವ ಗಣಿಬಾಧಿತ ಪ್ರದೇಶಾಭಿವೃದ್ಧಿಗೆ ಸಂಬAಧಿಸಿದAತೆ ಅನುಮೋದಿತ ಪ್ರಸ್ತಾವನೆಗಳ CEPMIZ ಡಿಪಿಆರ್ಗಳನ್ನು ತ್ವರಿತವಾಗಿ ಸಲ್ಲಿಸಬೇಕೆಂದು ಗಣಿಬಾಧಿತ ಪ್ರದೇಶ ಅಭಿವೃದ್ಧಿ ಯೋಜನೆಯ ಮೇಲುಸ್ತುವಾರಿ ಪ್ರಾಧಿಕಾರದ ಸಲಹೆಗಾರ ಸಂಜಯ್ ಎಸ್. ಬಿಜ್ಜೂರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ವಿವಿಧ ಅನುಷ್ಠಾನ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ, CEPMIZ ಕಾರ್ಯಕ್ರಮದಡಿ ಅನುಮೋದಿತವಾಗಿರುವ ವಿವಿಧ ಪ್ರಸ್ತಾವನೆಗಳ ಪ್ರಗತಿ ಹಾಗೂ ಡಿಪಿಆರ್ಗಳ ಸಲ್ಲಿಕೆ ಕುರಿತು ಪರಿಶೀಲನೆ ನಡೆಸಿ ಮಾತನಾಡಿದ ಅವರು, ಅನುಮೋದಿತ ಪ್ರಸ್ತಾವನೆಗಳಿಗೆ ಸಂಬAಧಿಸಿದAತೆ ಇದುವರೆಗೂ ಡಿಪಿಆರ್ ಸಲ್ಲಿಸದಿರುವ ಇಲಾಖೆಗಳು ತಕ್ಷಣವೇ ನಿಯಮಾನುಸಾರ ವಿವರವಾದ ಯೋಜನಾ ವರದಿಯನ್ನು ಸಿದ್ಧಪಡಿಸಿ ಸಲ್ಲಿಸಬೇಕೆಂದು ಅವರು ನಿರ್ದೇಶಿಸಿದರು.
ವಿಶೇಷವಾಗಿ ತೋಟಗಾರಿಕೆ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ರೇಷ್ಮೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಸ್ತಾವನೆಗಳ ಪ್ರಗತಿಯನ್ನು ಪರಿಶೀಲಿಸಿ, ಯಾವುದೇ ವಿಳಂಬವಾಗದAತೆ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
ಡಿಪಿಆರ್ ಸಿದ್ಧಪಡಿಸುವ ಸಂದರ್ಭದಲ್ಲಿ ತಾಂತ್ರಿಕ, ಆಡಳಿತಾತ್ಮಕ ಅಥವಾ ಏಜೆನ್ಸಿಗಳಿಗೆ ಸಂಬAಧಿಸಿದ ಯಾವುದೇ ಸಮಸ್ಯೆಗಳು ಎದುರಾದಲ್ಲಿ, ಸಂಬAಧಿಸಿದ ಅಧಿಕಾರಿಗಳು ತಕ್ಷಣವೇ ದೂರವಾಣಿ ಮೂಲಕ ಸಂಪರ್ಕಿಸಬಹುದು ಅಥವಾ ನೇರವಾಗಿ ಭೇಟಿ ನೀಡಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು. ಸಮಸ್ಯೆಗಳ ಪರಿಹಾರಕ್ಕಾಗಿ ಅಧಿಕಾರಿಗಳು ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಅವರು ಹೇಳಿದರು.
ಡಿಪಿಆರ್ ಅಥವಾ ಅಗತ್ಯ ಪ್ರಸ್ತಾವನೆಗಳನ್ನು ಸಲ್ಲಿಸದಿರುವ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸೇರಿದಂತೆ ಇತರೆ ಇಲಾಖೆಗಳು ಅಗತ್ಯ ಪ್ರಸ್ತಾವನೆಗಳನ್ನು ಸಿದ್ಧಪಡಿಸಿ, ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದು ಸಲ್ಲಿಸುವುದು ಸೂಕ್ತ ಎಂದು ಅವರು ಅಭಿಪ್ರಾಯಪಟ್ಟರು.
ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಮಾತನಾಡಿ, CEPMIZ ಕಾರ್ಯಕ್ರಮದಡಿ ಅನುಮೋದಿತವಾಗಿರುವ ಪ್ರಸ್ತಾವನೆಗಳಿಗೆ ಸಂಬAಧಿಸಿದAತೆ ನಿಯಮಾನುಸಾರ ಡಿಪಿಆರ್ಗಳನ್ನು ಸಿದ್ಧಪಡಿಸಿ ಸಲ್ಲಿಸಲು ತೋಟಗಾರಿಕೆ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ರೇಷ್ಮೆ ಸೇರಿದಂತೆ ಎಲ್ಲಾ ಸಂಬAಧಿತ ಇಲಾಖೆಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
(Visited 1 times, 1 visits today)



