ತುಮಕೂರು: ಭಾರತ್ ಜೋಡೊ ಯುವ ಸಂಘಗಳ ಸದಸ್ಯತ್ವ ಹಾಗೂ ಸಂಘಗಳ ನೋಂದಣಿ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಜರುಗಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಭಾರತ್ ಜೋಡೊ ಯುವ ಸಂಘಗಳ ರಚನೆ, ಸದಸ್ಯತ್ವ ನೋಂದಣಿ, ಸಂಘಗಳ ನೋಂದಣಿ ಪ್ರಕ್ರಿಯೆ ಹಾಗೂ ಸಂಘಗಳ ರೂಪು-ರೇಷೆಗಳ ಕುರಿತು ಅಧಿಕಾರಿಗಳೊಂದಿಗೆ ಸಮಗ್ರವಾಗಿ ಚರ್ಚಿಸಿದರು.
ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ೩೨೯ ಹಾಗೂ ನಗರ ಪ್ರದೇಶಗಳಲ್ಲಿ ೮೭ ಸೇರಿದಂತೆ ಒಟ್ಟು ೪೧೬ ಭಾರತ್ ಜೋಡೊ ಯುವ ಸಂಘಗಳನ್ನು ತ್ವರಿತವಾಗಿ ನೋಂದಾಯಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಂಘಗಳ ರಚನೆ ಮತ್ತು ನೋಂದಣಿ ಪ್ರಕ್ರಿಯೆಯಲ್ಲಿ ಯಾವುದೇ ವಿಳಂಬವಾಗದAತೆ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಹಾಗೂ ನಿಗದಿತ ಗುರಿಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರು ಹಾಗೂ ಉಪ ಮುಖ್ಯಮಂತ್ರಿಯವರ ಕಾರ್ಯದರ್ಶಿ ಡಾ. ರಾಕೇಶ್ ಕುಮಾರ್ ಕೆ., ಉಪ ಮುಖ್ಯಮಂತ್ರಿಯವರ ಅಪರ ಕಾರ್ಯದರ್ಶಿ ವೆಂಕಟೇಶಯ್ಯ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ನಾಹಿದಾ ಜಮ್ ಜಮ್, ಪಾಲಿಕೆ ಆಯುಕ್ತೆ ಶುಭಾ, ಭಾರತ್ ಜೋಡೊ ಯುವ ಸಂಘದ ಯೋಜನಾ ನಿರ್ದೇಶಕ ಶ್ರೀನಿವಾಸ್ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಎಲ್ಲಾ ತಾಲ್ಲೂಕುಗಳ ತಹಶೀಲ್ದಾರರು ಉಪಸ್ಥಿತರಿದ್ದರು.
(Visited 1 times, 1 visits today)