ತುಮಕೂರು: ಮಕ್ಕಳನ್ನು ದುಶ್ಚಟಗಳಿಂದ ದೂರವಿಟ್ಟು ಉತ್ತಮ ಭವಿಷ್ಯದತ್ತ ಮುನ್ನಡೆಸುವಲ್ಲಿ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಪ್ರಮುಖ ಪಾತ್ರ ವಹಿಸುತ್ತವೆ. ಈ ನಿಟ್ಟಿನಲ್ಲಿ ಪೋಷಕರು ತಮ್ಮ ಮಕ್ಕಳ ಆಸಕ್ತಿಗೆ ಅನುಗುಣವಾಗಿ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹ ನೀಡಬೇಕು ಎಂದು ಉಪಮುಖ್ಯಮಂತ್ರಿ, ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ಹೇಳಿದರು.
ಜಿಲ್ಲಾಡಳಿತ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ(ಟುಡಾ) ವತಿಯಿಂದ ಅಮಾನಿಕೆರೆ ಆವರಣದಲ್ಲಿ ಆಯೋಜಿಸಿದ್ದ ೫ನೇ ಮಿನಿ ಕರ್ನಾಟಕ ಕ್ರೀಡಾಕೂಟ ೨೦೨೬ರಲ್ಲಿ ಭಾಗವಹಿಸಿ, ಕಯಾಕಿಂಗ್ ಮತ್ತು ಕನೋಯಿಂಗ್ ಸ್ಪರ್ಧೆಗಳಲ್ಲಿ ಬೆಳ್ಳಿ ಪದಕ ಗಳಿಸಿದ ಕ್ರೀಡಾಪಟುಗಳನ್ನು ಅಭಿನಂದಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಕಯಾಕಿಂಗ್ ಮತ್ತು ಕನೋಯಿಂಗ್ ಕ್ರೀಡೆಗಳ ಬಗ್ಗೆ ಹೆಚ್ಚಿನ ಅರಿವು ಇರಲಿಲ್ಲ. ಜಿಲ್ಲಾಡಳಿತ, ಟುಡಾ ಹಾಗೂ ಕ್ರೀಡಾ ಇಲಾಖೆಯ ಆಸಕ್ತಿಯಿಂದಾಗಿ ಈ ಕ್ರೀಡೆಗಳಿಗೆ ಉತ್ತೇಜನ ನೀಡುವ ಪ್ರಯತ್ನ ಮಾಡಲಾಗಿದೆ. ಮಕ್ಕಳಿಗೆ ಸೂಕ್ತ ತರಬೇತಿ ಒದಗಿಸುವ ಉದ್ದೇಶದಿಂದ ರಾಜ್ಯ ಕಯಾಕಿಂಗ್ ಮತ್ತು ಕನೋಯಿಂಗ್ ಸಂಸ್ಥೆಯ ಸಹಕಾರ ಕೋರಲಾಗಿದೆ. ಈ ಕ್ರೀಡೆಗಳ ತರಬೇತಿ ಚಟುವಟಿಕೆಗಳನ್ನು ತುಮಕೂರಿಗೆ ಸ್ಥಳಾಂತರಿಸುವ ಚಿಂತನೆಯೂ ಇದೆ ಎಂದು ತಿಳಿಸಿದರು.
ಮಿನಿ ಒಲಿಂಪಿಕ್ಸ್ನ ಕಯಾಕಿಂಗ್ ಮತ್ತು ಕನೋಯಿಂಗ್ ಸ್ಪರ್ಧೆಗಳಲ್ಲಿ ೧೪ ವರ್ಷದೊಳಗಿನ ಮಕ್ಕಳು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಕೇವಲ ಎರಡು ಸೆಕೆಂಡ್ಗಳ ಅಂತರದಲ್ಲಿ ಚಿನ್ನದ ಪದಕ ಕೈತಪ್ಪಿದ್ದರೂ, ಬೆಳ್ಳಿ ಪದಕ ಗಳಿಸಿರುವುದು ಹೆಮ್ಮೆಯ ಸಂಗತಿ. ಮುಂದಿನ ದಿನಗಳಲ್ಲಿ ಮಕ್ಕಳಿಗೆ ಇನ್ನಷ್ಟು ಉತ್ತಮ ತರಬೇತಿ ನೀಡಿ, ರಾಜ್ಯ, ರಾಷ್ಟç ಹಾಗೂ ಅಂತಾರಾಷ್ಟಿçÃಯ ಮಟ್ಟದ ಸ್ಪರ್ಧೆಗಳಿಗೆ ಸಜ್ಜುಗೊಳಿಸಬೇಕು ಎಂದು ಹೇಳಿದರು.
ತುಮಕೂರಿನಲ್ಲಿ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ: ತುಮಕೂರಿನಲ್ಲಿ ಅಂತಾರಾಷ್ಟಿçÃಯ ಮಹಿಳಾ ಟೆನಿಸ್ ಕ್ರೀಡಾಕೂಟವನ್ನು ಯಶಸ್ವಿಯಾಗಿ ಆಯೋಜಿಸಲಾಗಿದೆ. ಇದೇ ರೀತಿ ಕ್ರೀಡಾ ಕ್ಷೇತ್ರದಲ್ಲಿ ಹೆಚ್ಚಿನ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಒಲಿಂಪಿಕ್ ಮಟ್ಟದ ಈಜು ಸ್ಪರ್ಧೆಗಳಿಗೆ ಅಗತ್ಯವಿರುವ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುವ ಚಿಂತನೆಯಿದೆ ಎಂದು ತಿಳಿಸಿದರು.
ಮಕ್ಕಳಲ್ಲಿ ಶಿಸ್ತು, ಆತ್ಮವಿಶ್ವಾಸ ಬೆಳೆಸಲು ಕ್ರೀಡೆ ಅಗತ್ಯ: ಇತ್ತೀಚಿನ ದಿನಗಳಲ್ಲಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಮಕ್ಕಳನ್ನು ಇಂತಹ ದುಶ್ಚಟಗಳಿಂದ ದೂರವಿಡಲು ಕ್ರೀಡೆ, ಸಾಂಸ್ಕೃತಿಕ ಹಾಗೂ ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹಿಸಬೇಕು. ಕ್ರೀಡೆಯು ಮಕ್ಕಳಲ್ಲಿ ಶಿಸ್ತು, ಆತ್ಮವಿಶ್ವಾಸ, ನಾಯಕತ್ವದ ಗುಣಗಳು ಹಾಗೂ ತಂಡದ ಮನೋಭಾವವನ್ನು ಬೆಳೆಸುತ್ತದೆ. ಆದ್ದರಿಂದ ಪೋಷಕರು ತಮ್ಮ ಮಕ್ಕಳ ಆಸಕ್ತಿಗೆ ಅನುಗುಣವಾಗಿ ಕ್ರೀಡೆಗಳಲ್ಲಿ ಭಾಗವಹಿಸಲು ಉತ್ತೇಜನ ನೀಡಬೇಕು ಎಂದು ಕರೆ ನೀಡಿದರು.
ತುಮಕೂರನ್ನು ಕ್ರೀಡಾ ಚಟುವಟಿಕೆಗಳ ಪ್ರಮುಖ ಕೇಂದ್ರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಅಗತ್ಯ ಮೂಲಸೌಕರ್ಯ ಹಾಗೂ ತರಬೇತಿ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ಮತ್ತು ಜಿಲ್ಲಾಡಳಿತ ಬದ್ಧವಾಗಿವೆ ಎಂದು ಡಾ. ಜಿ. ಪರಮೇಶ್ವರ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ಕೆ.ವಿ. ಅಶೋಕ್, ಅಧಿಕಾರಿಗಳಾದ ಉಮೇಶ್ ಚಂದ್ರ ಹಾಗೂ ಸಂತೋಷ್ ಸೇರಿದಂತೆ ಕ್ರೀಡಾಪ ಟುಗಳು, ವಿವಿಧ ಅಧಿಕಾರಿಗಳು ಇದ್ದರು.
(Visited 1 times, 1 visits today)



