ಶಿರಾ: ಕರ್ನಾಟಕದ ನೂತನ ರಾಜ್ಯಪಾಲರಾದ ಸುಧಾ ಯಾದವ್ ಅವರು ಶಿರಾದ ಪ್ರವಾಸಿ ಮಂದಿರದಲ್ಲಿ ಜಿಲ್ಲೆಯ ಕಲಾವಿದರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಜಿಲ್ಲೆಯ ನಾಟಕ, ಜಾನಪದ ಸೇರಿದಂತೆ ಸಾಂಸ್ಕೃತಿಕ ವೈಭವದ ಬಗ್ಗೆ ನೂತನ ರಾಜ್ಯಪಾಲರಾದ ಸುಧಾ ಯಾದವ್ ಮಾಹಿತಿ ಪಡೆದು ಕೊಂಡರು.
ಬೆAಗಳೂರಿಗೆ ತೆರಳುವ ಮಾರ್ಗ ಮಧ್ಯೆ ಶಿರಾದಲ್ಲಿ ಸುಮಾರು ೩೦ ನಿಮಿಷಗಳ ಕಾಲ ಕಲಾವಿದರು ಹಾಗೂ ವಿವಿಧ ಕ್ಷೇತ್ರಗಳ ವಿಷಯ ತಜ್ಞರ ಜೊತೆ ಸಮಾಲೋಚನೆ ನಡೆಸಿದ ರಾಜ್ಯಪಾಲರು ಬಳಿಕ ಕಲಾವಿದರೊಂದಿಗೆ ಮಸಾಲೆ ದೋಸೆ, ಮದ್ದೂರು ವಡೆ ಸವಿದರು.
ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್, ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ಮಲ್ಲಿಕಾರ್ಜುನ ಕೆಂಕೆರೆ, ಕರ್ನಾಟಕ ಪಂಚಾಯತ್ ರಾಜ್ ಪರಿಷತ್ ಪ್ರಧಾನ ಕಾರ್ಯದರ್ಶಿ ಕಾಡಶೆಟ್ಟಿ ಸತೀಶ್, ಕ್ರೀಡಾಪಟು ಆನಂದ್, ವೀರಗಾಸೆ ಕಲಾವಿದ ವೀರಣ್ಣ, ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಹೇಶ್ ಹಾರೋಗೆರೆ ಮುಂತಾದವರು ಪಾಲ್ಗೊಂಡಿದ್ದರು.
ಇದಕ್ಕೂ ಮೊದಲು ಶಿರಾ ಪ್ರವಾಸಿ ಮಂದಿರಕ್ಕೆ ರಾಜ್ಯಪಾಲರು ಆಗಮಿಸಿದಾಗ ಅವರನ್ನು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್, ಶಿರಾ ಶಾಸಕ ಟಿ.ಬಿ. ಜಯಚಂದ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು. ಮಿರ್ಜಿ, ಉಪವಿಭಾಗಾಧಿಕಾರಿಗಳು, ಶಿರಾ ತಹಶೀಲ್ದಾರ್ ಅವರು ಆತ್ಮೀಯವಾಗಿ ಬರ ಮಾಡಿಕೊಂಡರು.
ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್ ಮಾತನಾಡಿ ಜಿಲ್ಲೆಯಲ್ಲಿ ರಂಗಭೂಮಿ ಚಟುವಟಿಕೆಗಳ ಬಗ್ಗೆ ರಾಜ್ಯಪಾಲರೊಂದಿಗೆ ಮಾಹಿತಿ ಹಂಚಿಕೊAಡರು. ಪೌರಾಣಿಕ ನಾಟಕಗಳ ಮೂಲಕ ಗಮನಸೆಳೆದಿರುವ ತುಮಕೂರಿನಲ್ಲಿ ಪರ್ಯಾಯ ನಾಟಕಗಳು ಪ್ರದರ್ಶನಗೊಳ್ಳುತ್ತಿದೆ ಎಂದರು.
ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ಮಲ್ಲಿಕಾರ್ಜುನ ಕೆಂಕೆರೆ ಮಾತನಾಡಿ ಜಿಲ್ಲೆಯ ಜಾನಪದ ವೈಭವದ ಬಗ್ಗೆ ಮಾಹಿತಿ ನೀಡಿದರು.
ಕ್ರೀಡಾಪಟು ಆನಂದ್ ಮಾತನಾಡಿ ಜಿಲ್ಲೆಯಲ್ಲಿ ಕ್ರೀಡಾ ಚಟುವಟಿಕೆಗಳು ಚೆನ್ನಾಗಿ ನಡೆಯುತ್ತಿದ್ದು ಜಿಲ್ಲೆಯ ಕ್ರೀಡಾಪಟುಗಳು ಅತ್ಯುತ್ತಮ ಸಾಧನೆ ಮಾಡುತ್ತಿದ್ದಾರೆ ಎಂದು ತಿಳಿಸಿದರು
ಕರ್ನಾಟಕ ಪಂಚಾಯತ್ ರಾಜ್ ಪರಿಷತ್ ಪ್ರಧಾನ ಕಾರ್ಯದರ್ಶಿ ಕಾಡಶೆಟ್ಟಿ ಸತೀಶ್ ಮಾತನಾಡಿ ಕರ್ನಾಟಕದಲ್ಲಿ ಶೀಘ್ರ ತಾ.ಪಂ., ಜಿ.ಪಂ. ಚುನಾವಣೆ ನಡೆಸಲು ಸೂಚಿಸಬೇಕೆಂದು ರಾಜ್ಯಪಾಲರಿಗೆ ಮನವಿ ಮಾಡಿದರು.
ಇದಕ್ಕೂ ಮೊದಲು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅವರು ಜಿಲ್ಲೆಯಲ್ಲಿ ನಡೆದಿರುವ ಸಾಧನೆಗಳ ಬಗ್ಗೆ ರಾಜ್ಯಪಾಲರಿಗೆ ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಕ್ರೀಡೆಗೆ ಹೆಚ್ಚು ಒತ್ತು ನೀಡಿದ್ದು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರೀಡೆಗಳನ್ನು ಆಯೋಜಿಸಲಾಗಿದೆ ಎಂದರು.
ಅಲ್ಲದೇ ಜಿಲ್ಲೆಯಲ್ಲಿ ಕಳೆದ ೩ ವರ್ಷಗಳಿಂದ ವೈಭವದ ದಸರಾ ಆಚರಣೆ ಬಗ್ಗೆ ಮಾಹಿತಿ ನೀಡಿದ್ದಲ್ಲದೆ ಜಿಲ್ಲೆಯಲ್ಲಿ ಕೈಗೊಂಡಿರುವ ಅಭಿವೃದ್ಧಿಗಳ ಹೊತ್ತಿಗೆಯನ್ನು ರಾಜ್ಯಪಾಲರಿಗೆ ನೀಡಿದರು. ಸುಮಾರು ಒಂದು ಗಂಟೆಗಳ ಕಾಲ ಇದ್ದ ರಾಜ್ಯಪಾಲರು ಶೀಬಿ ನರಸಿಂಹಸ್ವಾಮಿ ದೇವಸ್ಥಾನಕ್ಕೆ ಹೋಗಿ ದೇವರ ದರ್ಶನ ಪಡೆದು ಅಲ್ಲಿಂದ ಬೆಂಗಳೂರಿಗೆ ತೆರಳಿದರು.

(Visited 1 times, 1 visits today)