ತುಮಕೂರು: ರಾಷ್ಟಿçÃಯ ಐಕ್ಯತಾ ದಿನ ಪ್ರಯುಕ್ತ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ವಿವಿಧ ಇಲಾಖೆಗಳ ಅಧಿಕಾರಿ ಸಿಬ್ಬಂದಿ ರಾಷ್ಟಿçÃಯ ಐಕ್ಯತಾ ಪ್ರಮಾಣ ವಚನವನ್ನು ಸ್ವೀಕರಿಸಿದರು.
ರಾಷ್ಟçದ ಸ್ವಾತಂತ್ರö್ಯ ಹಾಗೂ ಐಕ್ಯತೆಯನ್ನು ಬಲಪಡಿಸಲು, ದೇಶದಲ್ಲಿ ಹಿಂಸಾಚಾರ ಮತ್ತು ಕೋಮು ದ್ವೇಷವನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ನವೆಂಬರ್ ೧೯ ರಿಂದ ೨೫ರವರೆಗೆ ರಾಷ್ಟಿçÃಯ ಐಕ್ಯತಾ ಸಪ್ತಾಹವನ್ನು ಆಚರಿಸಲು ಸರ್ಕಾರ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಪ್ರಮಾಣ ವಚನವನ್ನು ಸ್ವೀಕರಿಸಲಾಯಿತು.
ರಾಷ್ಟçದ ಸ್ವಾತಂತ್ರö್ಯ ಹಾಗೂ ಐಕ್ಯತೆಯನ್ನು ಸಂರಕ್ಷಸಲು ಹಾಗೂ ಬಲಪಡಿಸಲು ಅರ್ಪಣಾ ಮನೋಭಾವದಿಂದ ಕೆಲಸ ಮಾಡುತ್ತೇನೆಂದು ನಾನು ಶ್ರದ್ಧಾಪೂರ್ವಕವಾಗಿ ಪ್ರಮಾಣ ಮಾಡುತ್ತೇನೆ. ಅಲ್ಲದೆ, ನಾನು ಎಂದಿಗೂ ಹಿಂಸಾಚಾರದಲ್ಲಿ ತೊಡಗುವುದಿಲ್ಲವೆಂದು ಮತ್ತು ಮತ, ಭಾಷೆ, ಪ್ರದೇಶ ಅಥವಾ ಇತರ ರಾಜಕೀಯ ಅಥವಾ ಆರ್ಥಿಕ ಕುಂದು-ಕೊರತೆಗಳ ಬಗೆಗಿನ ಭಿನ್ನಾಭಿಪ್ರಾಯಗಳನ್ನು ಮತ್ತು ವಿವಾದಗಳನ್ನು ಶಾಂತಿಯುತವಾಗಿ ಹಾಗೂ ಸಂವಿಧಾನಾತ್ಮಕ ರೀತಿಯಲ್ಲಿ ಬಗೆಹರಿಸಿಕೊಳ್ಳುವ ದಿಸೆಯಲ್ಲಿ ನನ್ನ ಪ್ರಯತ್ನವನ್ನು ಮುಂದುವರೆಸುತ್ತೇನೆAದು ಪ್ರಮಾಣ ಮಾಡುತ್ತೇನೆ ಎಂದು ಪ್ರತಿಜ್ಞಾವಿಧಿ ಬೋಧಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಟೂಡಾ ಆಯುಕ್ತ ಉಮೇಶ್ಚಂದ್ರ, ಚುನಾವಣಾ ಶಾಖೆಯ ನಾಗಭೂಷಣ್ ಹಾಗೂ ಸಿಬ್ಬಂದಿ, ವಾರ್ತಾ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಿಬ್ಬಂದಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಮುದಾಯದ ಮುಖಂಡರು ಇದ್ದರು.
(Visited 1 times, 1 visits today)



