ತುಮಕೂರು: ಬಸವಣ್ಣನವರ ಬಗ್ಗೆ ಅವಹೇಳನಕಾರಿ ಲೇಖನಗಳನ್ನು ಪ್ರಕಟಿಸಿರುವ ‘ಬಸವ ಮಂಟಪ’ ಪುಸ್ತಕವನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು. ಆ ಕೃತಿಯ ಲೇಖಕ ರವಿ ಹಂಜ್ ಹಾಗೂ ಪ್ರಕಾಶಕ ವಿಶ್ವೇಶ್ವರ ಭಟ್ ಅವರ ವಿರುದ್ಧ ಪ್ರಕರಣ ದಾಖಲಿಸಿ ಇಬ್ಬರನ್ನೂ ಬಂಧಿಸಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಡಾ.ಎಸ್. ಪರಮೇಶ್ವರ ಒತ್ತಾಯಿಸಿದರು.
ಈ ಸಂಬAಧ ಅವರು ಶುಕ್ರವಾರ ನಗರದ ಟೌನ್ ಪೊಲೀಸ್ ಠಾಣೆಗೆ ದೂರು ನೀಡಿ, ಮಹಾನ್ ಮಾನವತಾವಾದಿ ಬಸವಣ್ಣನವರ ಬಗ್ಗೆ ಅವಮಾನಕಾರಿ ಲೇಖನ ಬರದು ಪ್ರಕಟಿಸಿದ ಆರೋಪದ ಮೇಲೆ ಲೇಖಕ ರವಿ ಹುಂಜ್ ಮತ್ತು ಪ್ರಕಾಶಕ ವಿಶ್ವೇಶ್ವರ ಭಟ್ ವಿರುದ್ಧ ಎಫ್‌ಐಆರ್ ದಾಖಲಿಸಿ, ಬಂಧಿಸಿ, ಕೃತಿಯನ್ನು ಮುಟ್ಟುಗೋಲು ಹಾಕುವಂತೆ ಆಗ್ರಹಿಸಿದರು.
ಮಹಾಸಭಾ ಜಿಲ್ಲಾಧ್ಯಕ್ಷ ಡಾ.ಎಸ್. ಪರಮೇಶ್, ರವಿ ಹುಂಜ್‌ಅವರ ‘ಬಸವ ಮಂಟಪ” ಕೃತಿಯಲ್ಲಿ ಬಸವಣ್ಣನವರ ಬಗ್ಗೆ ಕೀಳು ಮಟ್ಟದಲ್ಲಿ, ಅವಹೇಳನಕಾರಿಯಾಗಿ ಬರೆಯಲಾಗಿದೆ ಎಂದು ಆರೋಪಿಸಿದರು. ಯಾವುದೇ ದಾರ್ಶನಿಕರ ಬಗ್ಗೆ ಈ ರೀತಿ ಬರೆಯುವುದು ಬಹಳ ಅವಮಾನಕರ.ಇದುಇಡೀ ವೀರಶೈವ ಲಿಂಗಾಯತ ಸಮಾಜ ಮಾತ್ರವಲ್ಲದೆ ಎಲ್ಲಾ ಸಮಾಜದವರಿಗೂ ನೋವುಂಟು ಮಾಡಿದೆ ಎಂದು ಹೇಳಿದರು.
ರಾಜ್ಯಾದ್ಯಂತ ದೂರು: ಬೆಂಗಳೂರಿನಲ್ಲಿ ಕ್ಯಾಬಿನೆಟ್ ಮಂತ್ರಿಗಳ ಸಭೆಯಲ್ಲಿ ಕೃತಿಯನ್ನು ಮುಟ್ಟುಗೋಲು ಹಾಕಬೇಕು, ಎಫ್‌ಐಆರ್ ಮಾಡಿ ಬಂಧಿಸಬೇಕು ಎಂದು ತೀರ್ಮಾನ ಮಾಡಲಾಗಿದೆ. ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರ, ತಾಲೂಕು ಕೇಂದ್ರಗಳಲ್ಲಿ ಸಮಾಜದ ಬಾಂಧವರು ಪೊಲೀಸ್ ಠಾಣೆಗಳಲ್ಲೂ ದೂರು ಸಲ್ಲಿಸಿದ್ದಾರೆ. ಅದೇ ರೀತಿ ತುಮಕೂರಿನಲ್ಲಿ ಸಮಾಜದ ಹಿರಿಯರ ಸಮ್ಮುಖದಲ್ಲಿ ಟೌನ್ ಸ್ಟೇಷನ್‌ನಲ್ಲಿ ದೂರು ಸಲ್ಲಿಸಿದ್ದೇವೆ ಎಂದು ಹೇಳಿದರು.
ಬಸವಣ್ಣನವರನ್ನು ಕರ್ನಾಟಕ ಸರ್ಕಾರ ‘ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಿದ್ದು, ಅವರ ಭಾವಚಿತ್ರ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಇರುವಂತೆ ಸರ್ಕಾರ ಆದೇಶಿಸಿದೆ. ಸರ್ಕಾರದಿಂದ ಬಸವ ಜಯಂತಿ ಆಚರಿಸು ಬಸವಣ್ಣನವರನ್ನು ಗೌರವಿಸಲಾಗುತ್ತಿದೆ. ವಾಕ್ ಸ್ವಾತಂತ್ರ‍್ಯಕ್ಕೆ ಗೌರವ ಇದೆ, ಆದರೆ ಬಸವಣ್ಣನವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವುದನ್ನು ಒಪ್ಪಲು ಸಾಧ್ಯವಿಲ್ಲ. ಪ್ರಚೋದನಕಾರಿ ಹೇಳಿಕೆ ನೀಡಿದ ಕಾರಣಕ್ಕೆ ಪೊಲೀಸರು ಪ್ರಕರಣ ದಾಖಲಿಸಿ, ಕೂಡಲೇ ಬಂಧಿಸಬೇಕು ಎಂದು ಮಹಾಸಭಾ ಜಿಲ್ಲಾಧ್ಯಕ್ಷ ಡಾ.ಎಸ್. ಪರಮೇಶ್ ಒತ್ತಾಯಿಸಿದರು.
ಮಹಾಸಭಾದ ನಗರ ಪ್ರಧಾನ ಕಾರ್ಯದರ್ಶಿ ಸತ್ಯಮಂಗಲ ಜಗದೀಶ್, ತುಮಕೂರು ತಾಲ್ಲೂಕು ಅಧ್ಯಕ್ಷ ಜಯಣ್ಣ, ಉಪಾಧ್ಯಕ್ಷ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಡಾ. ಸದಾಶಿವಯ್ಯ, ಖಜಾಂಚಿ ಡಿ. ರಾಜಶೇಖರ್ ಮೊದಲಾದವರು ಹಾಜರಿದ್ದರು.
ದೂರು ಸ್ವೀಕರಿಸಿ ಕ್ರಮ ಕೈಗೊಳ್ಳಬೇಕು ಎಂದು ಮಹಾಸಭಾ ಮುಖಂಡರು ಪೊಲೀಸರಲ್ಲಿ ಮನವಿ ಮಾಡಿದರು.”
“ಬಸವಣ್ಣನವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಮೇಲೆ ಲೇಖಕ ರವಿ ಹಂಜಿ ವಿರುದ್ಧ ದೂರು ದಾಖಲಿಸಿ, ತಕ್ಷಣ ಬಂಧಿಸಿ, ವಿವಾದಿತ “ಬಸವ ಮಂಟಪ” ಕೃತಿಯನ್ನು ಮುಟ್ಟುಗೋಲು ಹಾಕುವಂತೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತುಮಕೂರು ಜಿಲ್ಲಾ ಘಟಕ ಒತ್ತಾಯಿಸಿದೆ.
ದಿನಾಂಕ ೨೦.೧೧.೨೦೨೬ ರಂದು ಠಾಣಾಧಿಕಾರಿಗಳಿಗೆ ಸಲ್ಲಿಸಿದ ಮನವಿಯಲ್ಲಿ, ರವಿ ಹಂಜಿಅವರಕೃತಿ ಮತ್ತು ಮಾತುಗಳು ಬಸವ ಭಕ್ತರು ಹಾಗೂ ವೀರಶೈವ ಲಿಂಗಾಯತ ಸಮುದಾಯದ ಮನಸ್ಸಿಗೆ ತೀವ್ರ ನೋವುಂಟು ಮಾಡಿದೆಎಂದು ಆರೋಪಿಸಲಾಗಿದೆ.

(Visited 1 times, 1 visits today)