ತುಮಕೂರು: ಇದೇ ೨೯ ಹಾಗೂ ೩೦ರಂದು ಎರಡು ದಿನಗಳ ಕಾಲ ನಡೆಯಲಿರುವ ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮದ ಅಂಗವಾಗಿ ಮೊದಲ ದಿನವಾದ ೨೯ರಂದು ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
ಯುವಜನೋತ್ಸವ ಕುರಿತು ಸೋಮವಾರ ಸಂಜೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಕರ್ನಾಟಕ ಸರ್ಕಾರವು ವಿವಿಧ ಇಲಾಖೆಗಳ ಮೂಲಕ ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆಮ ತಂದಿದೆ. ಈ ಹಿನ್ನೆಲೆಯಲ್ಲಿ ಸರ್ಕರದ ಉಪ ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಅವರು ತಿಳಿಸಿದರು.
ಸಂವಾದವು ನವೆಂಬರ್ ೨೯ರಂದು ಬೆಳಗ್ಗೆ ೧೦ ಗಂಟೆಗೆ ಗಾಜಿನಮನೆಯಲ್ಲಿ ನಡೆಯಲಿದ್ದು, ಸಂವಾದ ಆರಂಭವಾಗುವ ಮುನ್ನ ವಿವಿಧ ಕ್ಷೇತ್ರಗಳಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು, ಅವುಗಳ ಸಮರ್ಪಕ ಅನುಷ್ಠಾನ ಹಾಗೂ ಸಂವಾದದಲ್ಲಿ ಬರಬಹುದಾದ ಪ್ರಶ್ನೆಗಳಿಗೆ ಸಂಬAಧಿಸಿದAತೆ ಮುಂಚಿತವಾಗಿ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಎರಡು ದಿನಗಳು ನಡೆಯುವ ಯುವಜನೋತ್ಸವ ಕಾರ್ಯಕ್ರಮಕ್ಕಾಗಿ ಜಾನಪದ ಕಲೆ, ಜಾನಪದ ಸಂಗೀತ ಸೇರಿದಂತೆ ವಿವಿಧ ಐದು ವಿಭಾಗಗಳಲ್ಲಿ ನಡೆಯಲಿರುವ ಸ್ಪರ್ಧೆಗಳಲ್ಲಿ ರಾಜ್ಯದ ೧೦೨೩ ಸ್ಪರ್ಧಿಗಳು ಭಾಗವಹಿಸಲಿದ್ದಾರೆ. ಅಲ್ಲದೆ ಯುವಜನೋತ್ಸವದಲ್ಲಿ ಭಾಗವಹಿಸುವ ತೀರ್ಪುಗಾರರು, ವಿವಿಧ ಸಂಘಟನೆಗಳ ವ್ಯವಸ್ಥಾಪಕರು, ಅಧಿಕಾರಿಗಳು ಸೇರಿದಂತೆ ಆಗಮಿಸುವ ಅತಿಥಿಗಳಿಗೆ ಊಟೋಪಚಾರ, ವಸತಿ ಹಾಗೂ ಸಾರಿಗೆ ವ್ಯವಸ್ಥೆಗಳನ್ನು ನಿಯೋಜಿತ ಅಧಿಕಾರಿಗಳು ಯಾವುದೇ ಕೊರತೆ ಇಲ್ಲದಂತೆ ನಿರ್ವಹಿಸಲು ಜಿಲ್ಲಾಧಿಕಾರಿ ಸೂಚಿಸಿದರು.
ಸಭೆಯಲ್ಲಿ ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಂಘಟನೆಗಳ ಮುಖಸ್ಥರು ಭಾಗವಹಿಸಿದ್ದರು.
(Visited 1 times, 1 visits today)



