ಹುಳಿಯಾರು: ಕನ್ನಡ ನಾಡು, ನುಡಿ, ಸಂಸ್ಕöÈತಿ ಮತ್ತು ಕನ್ನಡಿಗರ ಸ್ವಾಭಿಮಾನದ ಪ್ರತೀಕವಾದ ೭೧ ನೇ ಕನ್ನಡ ರಾಜ್ಯೋತ್ಸವವನ್ನು ಇಲ್ಲಿನ ಬಿ.ಎಂ.ಎಸ್. ಸರಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಸಂಭ್ರಮದಿAದ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವೀರಣ್ಣ ಎಸ್.ಸಿ. ಅವರು, ಕರ್ನಾಟಕದ ಏಕೀಕರಣದ ಹೋರಾಟ, ಭಾಷೆಯ ಬೆಳವಣಿಗೆ ಹಾಗೂ ನಮ್ಮ ನಾಡು-ನುಡಿಯ ಸಮೃದ್ಧ ಇತಿಹಾಸದ ಕುರಿತು ವಿದ್ಯಾರ್ಥಿಗಳಿಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು. ಕನ್ನಡ ಭಾಷೆ ಕೇವಲ ಸಂವಹನ ಮಾಧ್ಯಮವಲ್ಲ, ಅದು ನಮ್ಮ ಬದುಕಿನ ಸಂಸ್ಕöÈತಿ ಮತ್ತು ಅಸ್ಮಿತೆ; ಪ್ರತಿಯೊಬ್ಬ ವಿದ್ಯಾರ್ಥಿಯೂ ಮಾತೃಭಾಷೆಯ ಬಳಕೆ, ಉಳಿವು ಮತ್ತು ಬೆಳವಣಿಗೆಗೆ ಕಂಕಣಬದ್ಧರಾಗಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದ ಕಾಲೇಜಿನ ಐಕ್ಯೂಎಸಿ ಸಂಚಾಲಕರಾದ ಡಾ.ಸರಸ್ವತಿ ಕೆ.ಬಿ. ಅವರು ಮಾತನಾಡಿ, ಕಾಲೇಜು ಹಂತದಲ್ಲಿ ಇಂತಹ ಸಾಂಸ್ಕöÈತಿಕ ಮತ್ತು ನಾಡು-ನುಡಿಯ ಹಬ್ಬಗಳನ್ನು ಆಚರಿಸುವುದರ ವಿಶೇಷತೆಯನ್ನು ವಿವರಿಸಿದರು. ವಿವಿಧ ಭಾಷೆಗಳ ಅಧ್ಯಯನದ ನಡುವೆಯೂ ಕನ್ನಡದ ಸೊಗಡು, ಸಾಹಿತ್ಯ ಮತ್ತು ಪರಂಪರೆಯನ್ನು ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವದಲ್ಲಿ ಅಳವಡಿಸಿಕೊಳ್ಳುವ ಮಹತ್ವವನ್ನು ತಿಳಿಸಿದರು.
ವಿಶೇಷ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಸರಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ಶಶಿಭೂಷಣ್ ಅವರು ಉಪನ್ಯಾಸ ನೀಡಿ, ’ಸರ್ವ ಜನಾಂಗದ ಶಾಂತಿಯ ತೋಟ’ ಎಂಬ ಕುವೆಂಪು ಅವರ ಆಶಯಕ್ಕೆ ತಕ್ಕಂತೆ ಕನ್ನಡಿಗರು ಸದಾ ಪರಭಾಷೆ, ಪರಸಂಸ್ಕöÈತಿಗಳನ್ನು ಗೌರವಿಸುವ ವಿಶಾಲ ಮನೋಭಾವ ಹೊಂದಿದ್ದಾರೆ ಎಂದರು. ಜೊತೆಗೆ, ಕನ್ನಡ ಸಾಹಿತ್ಯದ ಹಿರಿಮೆ ಮತ್ತು ಜಾಗತಿಕ ಮಟ್ಟದಲ್ಲಿ ಕನ್ನಡದ ಸಾಧ್ಯತೆಗಳ ಕುರಿತು ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕ ಮಾತುಗಳನ್ನಾಡಿದರು.
ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರು ಹಾಗೂ ಹಿರಿಯ ಪ್ರಾಧ್ಯಾಪಕರಾದ ಡಾ.ಯೋಗೀಶ್ ಬಿ. ಅವರು ಉಪಸ್ಥಿತರಿದ್ದು, ನಾಡು-ನುಡಿಯ ಆಚರಣೆಗೆ ಶುಭ ಹಾರೈಸಿದರು. ರಾಜ್ಯೋತ್ಸವದ ಅಂಗವಾಗಿ ಕಾಲೇಜು ಆವರಣದಲ್ಲಿ ಹಬ್ಬದ ವಾತಾವರಣ ಮನೆಮಾಡಿದ್ದು, ಕನ್ನಡ ಗೀತೆಗಳು ಮತ್ತು ಸಾಂಸ್ಕöÈತಿಕ ಕಳೆಯಿಂದ ಕಾರ್ಯಕ್ರಮ ಗಮನ ಸೆಳೆಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
(Visited 1 times, 1 visits today)



