ತುಮಕೂರು: ಪರಂಪರಗತವಾಗಿ ಬಂದಿರುವ ಸಿರಿಧಾನ್ಯ ಆಹಾರ ಬೆಳೆಗಳನ್ನು ಬೆಳೆಯಲು ರೈತರನ್ನು ಉತ್ತೇಜಿಸುವ ಸಲುವಾಗಿ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಲಕ್ಷ÷್ಮಣ್ ಎಸ್. ಕಳ್ಳೆಣ್ಣನವರ್ ತಿಳಿಸಿದರು.
ಸಿರಿಧಾನ್ಯ ಹಬ್ಬದ ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕೃಷಿ ಇಲಾಖೆ ವತಿಯಿಂದ ಸಾರ್ವಜನಿಕರಲ್ಲಿ ಸಿರಿಧಾನ್ಯಗಳ ಮಹತ್ವ ತಿಳಿಸುವ ಉದ್ದೇಶದಿಂದ ನಗರದ ಟೌನ್ಹಾಲ್ ವೃತ್ತದಲ್ಲಿ ಹಮ್ಮಿಕೊಂಡಿದ್ದ ಸಿರಿಧಾನ್ಯ ಕಾಲ್ನಡಿಗೆಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಸಾರ್ವಜನಿಕರಲ್ಲಿ ಸಿರಿಧಾನ್ಯಗಳ ಮಹತ್ವ, ಆರೋಗ್ಯಕರ ಆಹಾರ ಪದ್ದತಿ ಹಾಗೂ ಸಿರಿಧಾನ್ಯಗಳ ಬಳಕೆ ಕುರಿತು ಅರಿವು ಮೂಡಿಸುವ ಸಲುವಾಗಿ ಈ ಕಾಲ್ನಡಿಗೆ ಜಾಥಾ ನಡೆಸಲಾಗುತ್ತಿದೆ ಎಂದರು.
ಮುAಬರುವ ಡಿಸೆಂಬರ್ ೧೩ ಹಾಗೂ ೧೪ರಂದು ನಗರದ ಗಾಜಿನಮನೆಯಲ್ಲಿ ಏರ್ಪಡಿಸಿರುವ ಸಿರಿಧಾನ್ಯ ಮೇಳದ ಪೂರ್ವಭಾವಿಯಾಗಿ ರೈತರಿಗೆ ಪ್ರೋತ್ಸಾಹ ನೀಡಲು ಈ ಸಿರಿಧಾನ್ಯ ನಡಿಗೆ ಹಮ್ಮಿಕೊಳ್ಳಲಾಗಿದೆ ಎಂದರು.
ಕೀಟನಾಶಕ ಬಳಸದಂತೆ ಕಡಿಮೆ ರಸಗೊಬ್ಬರ ಹಾಗೂ ಕಡಿಮೆ ನೀರಿನಲ್ಲಿ ಬೆಳೆಯಬಹುದಾದ ರಾಗಿ, ಆರ್ಕ, ಸಜ್ಜೆ, ನವಣೆ, ಸಾಮೆ, ಬರಗಲು ಸೇರಿದಂತೆ ವಿವಿಧ ಸಿರಿಧಾನ್ಯಗಳನ್ನು ನಮ್ಮ ದೇಶದಲ್ಲಿ ಮಾತ್ರ ಬೆಳೆಯುಲಾಗುತ್ತಿದೆ ಎಂದರಲ್ಲದೆ ಆಹಾರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಿರಿಧಾನ್ಯವನ್ನು ಬಳಸುವುದರಿಂದ ಆರೋಗ್ಯ ವೃದ್ಧಿಯಾಗುತ್ತದೆ. ಸಿರಿಧಾನ್ಯದಲ್ಲಿ ಹೆಚ್ಚಿನ ನಾರಿನಾಂಶ, ಪೋಷಕಾಂಶ ಹೊಂದಿರುವುದರಿAದ ದೇಹದಲ್ಲಿ ರಕ್ತ ವೃದ್ಧಿಯಾಗಿ ಉತ್ತಮ ಆರೋಗ್ಯ ಹೊಂದಬಹುದಾಗಿದೆ. ಹಾಗಾಗಿ ಪ್ರತಿಯೊಬ್ಬರೂ ಹೆಚ್ಚು-ಹೆಚ್ಚು ಸಿರಿಧಾನ್ಯಗಳನ್ನು ಬಳಸಬೇಕು. ಉತ್ತಮ ಆರೋಗ್ಯಕ್ಕಾಗಿ ಸಿರಿಧಾನ್ಯ ಬಳಸುವವರ ಸಂಖ್ಯೆ ಮತ್ತಷ್ಟು ಹೆಚ್ಚಾಗಬೇಕು. ಅದೇ ರೀತಿ ಸಿರಿಧಾನ್ಯ ಬೆಳೆಯುವ ರೈತರ ಸಂಖ್ಯೆಯೂ ಹೆಚ್ಚಾಗಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.
ನಗರದ ಟೌನ್ಹಾಲ್ ಮುಂಭಾಗದಿAದ ಆರಂಭವಾದ ಸಿರಿಧಾನ್ಯ ನಡಿಗೆಯು ಚರ್ಚ್ ಸರ್ಕಲ್, ಹೊರಪೇಟೆ ವೃತ್ತ, ಕೋತಿ ತೋಪು, ಡಾ: ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತದ ಮೂಲಕ ಸಾಗಿ ಮಹಾತ್ಮಗಾಂಧಿ ಕ್ರೀಡಾಂಗಣವನ್ನು ತಲುಪಿತು.
ಸಿರಿಧಾನ್ಯ ನಡಿಗೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡು ಸ್ಕೇಟಿಂಗ್ ಮೂಲಕ ಅರಿವು ಮೂಡಿಸಿದ್ದು ವಿಶೇಷವಾಗಿತ್ತು. ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಉಪನಿರ್ದೇಶಕ ಹುಲಿರಾಜು, ಚಂದ್ರಕುಮಾರ್, ವಿವಿಧ ತಾಲ್ಲೂಕುಗಳ ಸಹಾಯಕ ಕೃಷಿ ನಿರ್ದೇಶಕರು, ಕೃಷಿ ಅಧಿಕಾರಿಗಳು, ಕೃಷಿಕ ಸಮಾಜದ ಅಧ್ಯಕ್ಷ ಎನ್.ಸಿ. ಮಂಜುನಾಥ್, ಎನ್ಸಿಸಿ ವಿದ್ಯಾರ್ಥಿಗಳು ಹಾಗೂ ಸಿರಿಧಾನ್ಯ ಬೆಳೆಗಾರರು ಭಾಗವಹಿಸಿದ್ದರು.\
(Visited 1 times, 1 visits today)



