ಪಾವಗಡ: ಕಾರ್ಯಕರ್ತರೇ ನನ್ನ ಬೆನ್ನೆಲುಬಾಗಿದ್ದು ಮುಂದಿನ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲೂ ಗೆಲುವು ನಮ್ಮದೇ ಎಂದು ತುಮಕೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಅಧ್ಯಕ್ಷರು ಹಾಗೂ ಶಾಸಕರಾದ ಹೆಚ್ ವಿ ವೆಂಕಟೇಶ್ ರವರು ತಿಳಿಸಿದರು.
ತಾಲ್ಲೂಕಿನ ಸಿ.ಕೆ. ಪುರ ಗ್ರಾಮದಲ್ಲಿ ಪ್ರಜಾಸೇವಾ ಇಲಾಖೆ ಮತ್ತು ತಾಲ್ಲೂಕು ಆಡಳಿತದ ವತಿಯಿಂದ ಆಯೋಜಿಸಲಾಗಿದ್ದ ‘ಪ್ರಜಾ ಸೇವಾ ಅಭಿಯಾನ’ ಸಭೆಯ ಅಧ್ಯಕ್ಷತೆ ವಹಿಸಿ ಉದ್ಘಾಟಿಸಿ ಮಾತನಾಡಿದ ಅವರು ಕ್ಷೇತ್ರದ ಎಲ್ಲೆಡೆ ರಸ್ತೆ ಮತ್ತು ಚರಂಡಿ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಆದರೂ ವಿರೋಧಿಗಳು ವಿನಾಕಾರಣ ಯಾವುದೇ ಅಭಿವೃದ್ಧಿಯಾಗಿಲ್ಲ ಎಂದು ಸುಳ್ಳು ಆರೋಪ ಮಾಡುತ್ತಿದ್ದಾರೆ. ಇವರಿಗೆ ಅಭಿವೃದ್ಧಿ ಕೆಲಸಗಳ ಮೂಲಕ ಹಾಗೂ ಮುಂಬರುವ ಚುನಾವಣೆಗಳಲ್ಲಿ ಗೆಲುವು ಸಾಧಿಸುವ ಮೂಲಕವೇ ತಕ್ಕ ಉತ್ತರ ನೀಡಲಾಗುವುದು,ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರು ಎಲ್ಲಾ ಶಾಸಕರ ಸಲಹೆ ಮೇರೆಗೆ ‘ಪ್ರಜಾ ಸೇವಾ ಇಲಾಖೆ’ಯನ್ನು ಪ್ರಾರಂಭಿಸಿದ್ದಾರೆ. ಇಲ್ಲಿ ದೂರು ದಾಖಲಾದ ನಂತರ ಅಧಿಕಾರಿಗಳು ಕೆಲಸ ಮಾಡದಿದ್ದರೆ, ಇಲಾಖೆಯಿಂದಲೇ ನೇರವಾಗಿ ದೂರುದಾರರಿಗೆ ಕರೆ ಮಾಡಿ ಪರಿಹಾರದ ಬಗ್ಗೆ ಮಾಹಿತಿ ಪಡೆಯಲಾಗುತ್ತದೆ.
ಈ ಅಭಿಯಾನದಡಿ ನಾನು ಹಾಗೂ ಎಲ್ಲಾ ಇಲಾಖೆಗಳ ಅಧಿಕಾರಿಗಳು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಭೇಟಿ ನೀಡಿ, ಸ್ಥಳದಲ್ಲೇ ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುತ್ತಿದ್ದೇವೆ,ಕ್ಷೇತ್ರದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರು ೧೮೦ ಕೋಟಿ ರೂ. ಅನುದಾನ ನೀಡಿದ್ದಾರೆ. ಈ ಅನುದಾನದಲ್ಲಿ ಪ್ರತಿ ಗ್ರಾಮ ಪಂಚಾಯಿತಿಗೆ ತಲಾ ಒಂದು ಕೋಟಿ ರೂ. ಮೀಸಲಿಟ್ಟು ಕ್ರಿಯಾಯೋಜನೆ ರೂಪಿಸಲಾಗಿದೆ. ಅಲ್ಲದೆ, ಬರಗಾಲದ ಹಿನ್ನೆಲೆಯಲ್ಲಿ ತಾಲ್ಲೂಕಿನಾದ್ಯಂತ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ೬೦ ಕೊಳವೆಬಾವಿಗಳನ್ನು ಕೊರೆಯಿಸಲಾಗುತ್ತಿದೆ, ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯ ಮೀಸಲಾತಿ ಅಂತಿಮ ಅಧಿಸೂಚನೆ ಹೊರಬಿದ್ದಿದ್ದು, ಎಲ್ಲರೂ ರಾಜಕೀಯ ಚಟುವಟಿಕೆಗಳನ್ನು ಚುರುಕುಗೊಳಿಸಿದ್ದಾರೆ. ಬೆಳಗಾವಿ ಅಧಿವೇಶನ ಮುಗಿದ ತಕ್ಷಣ ಚುನಾವಣಾ ಅಧಿಸೂಚನೆ ಹೊರಬೀಳಲಿದೆ. ಕ್ಷೇತ್ರದ ೬ ಜಿಲ್ಲಾ ಪಂಚಾಯಿತಿ, ೨೨ ತಾಲೂಕು ಪಂಚಾಯಿತಿ ಹಾಗೂ ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷವೇ ಜಯಗಳಿಸಲಿದೆ ಎಂದು ನಾನು ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳಿಗೆ ಸವಾಲು ಹಾಕುತ್ತೇನೆ. ನಮ್ಮ ಪಕ್ಷದ ನಿಷ್ಠಾವಂತ ಮುಖಂಡರು ಮತ್ತು ಕಾರ್ಯಕರ್ತರು ಇರುವವರೆಗೂ ವಿರೋಧಿಗಳಿಗೆ ನನ್ನನ್ನು ಏನೂ ಮಾಡಲು ಸಾಧ್ಯವಿಲ್ಲ.
ವಿಎಸ್ಎಸ್ಎನ್ ಅರ್ಹ ಫಲಾನುಭವಿಗಳಿಗೆ ಕೆಸಿಸಿ ಸಾಲದ ಚೆಕ್ಗಳನ್ನು ಶಾಸಕರು ವಿತರಿಸಿದರು.
ತಹಶೀಲ್ದಾರ್ ವರದರಾಜು ರವರು ಮಾತನಾಡಿ ಸಾರ್ವಜನಿಕರ ಅಹವಾಲುಗಳನ್ನು ತ್ವರಿತವಾಗಿ ಮತ್ತು ಪಾರದರ್ಶಕವಾಗಿ ಬಗೆಹರಿಸುವ ಉದ್ದೇಶದಿಂದ ‘ಪ್ರಜಾ ಸೇವಾ ಅಭಿಯಾನ’ ಹಮ್ಮಿಕೊಳ್ಳಲಾಗಿದೆ. ಗ್ರಾಮಸ್ಥರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲ್ಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು ಎಲ್ಲಾ ಇಲಾಖೆಗಳ ಅಧಿಕಾರಿಗಳು ಗ್ರಾಮ ಮಟ್ಟದಲ್ಲೇ ಲಭ್ಯವಿದ್ದು, ಸ್ಥಳದಲ್ಲೇ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಶಾಸಕರ ನಿರ್ದೇಶನದಂತೆ ಕುಡಿಯುವ ನೀರು, ಕಂದಾಯ ಹಾಗೂ ಇತರೆ ಮೂಲಭೂತ ಸಮಸ್ಯೆಗಳಿಗೆ ಆದ್ಯತೆ ನೀಡಿ ಶೀಘ್ರ ಇತ್ಯರ್ಥಪಡಿಸಲಾಗುವುದು” ಎಂದು ತಿಳಿಸಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಮಧುಸೂದನ್ ರವರು ಮಾತನಾಡಿದರು
ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ರವಿಕುಮಾರ್, ವಿಎಸ್ಎಸ್ಎನ್ ಅಧ್ಯಕ್ಷರಾದ ಶಿವಣ್ಣ, ಕೆಪಿಸಿಸಿ ಮಾಜಿ ಸದಸ್ಯರಾದ ಕೋಟೆ ಪ್ರಭಾಕರ್, ಎಪಿಎಂಸಿ ಮಾಜಿ ಅಧ್ಯಕ್ಷರಾದ ಡಿ. ಮಂಜುನಾಥ್, ಶಿವಮೂರ್ತಿ, ತಾ.ಪಂ ಮಾಜಿ ಸದಸ್ಯ ನಾಗೇಂದ್ರಪ್ಪ, ಇನ್ಸ್ಪೆಕ್ಟರ್ ಸುರೇಶ್, ಬಿಂದು ಮಾಧವರಾವ್, ಪಾಂಡುರAಗಪ್ಪ, ನಾಗರಾಜಪ್ಪ, ಕೊಂಡಪ್ಪ, ರ್ರಪ್ಪ, ಕೋಟೆ ರಾಮಾಂಜಿನಪ್ಪ, ಮಾಕಂ ಪ್ರಭಾಕರ್ ಶೆಟ್ಟಿ ಸೇರಿದಂತೆ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
(Visited 1 times, 1 visits today)



