BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಇ-ಪೌತಿ ಖಾತಾ ಆಂದೋಲನ-೨ ಜಿಲ್ಲಾಧಿಕಾರಿಗಳಿಂದ ಅರ್ಜಿ ಸ್ವೀಕಾರ
  • ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ: ಪಿ.ರಘು
  • ಹುಳಿಯಾರಿನ ಏಕೈಕ ಶತಮಾನದ ಇತಿಹಾಸದ ಹೆಮ್ಮೆಯ ಕುರುಹು
  • ಜನರಿಗೆ ಜಮೀನುಗಳ ಬಗ್ಗೆ ಕಾನೂನು ಅರಿವು ಅತ್ಯವಶ್ಯಕ
  • ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯಕ್ಕೆ ಖಂಡನೆ
  • ಇದು ಸಂವಿಧಾನದತ್ತವಾಗಿ ಪಡೆವ ಹಕ್ಕನ್ನು ಕಸಿಯುವ ಬಿಜೆಪಿಯ ಕುತಂತ್ರ
  • ಬಾಹ್ಯ ಯಶಸ್ಸಿನ ಆತುರದಲ್ಲಿ ಅಂತರ್ಯದ ಯಶಸ್ಸು ಮರೆಯದಿರಿ
  • ಯುವಜನತೆ ಕೆಂಪೇಗೌಡರ ಆದರ್ಶಗಳನ್ನು ಅಳವಡಿಸಿಕೊಳ್ಳಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಲೋಕಸಭೆ ಚುನಾವಣೆ: ಪ್ರಕ್ರಿಯೆಯಿಂದ ತಪ್ಪಿಸಿಕೊಂಡವರಿಗೆ ಶಿಸ್ತು ಕ್ರಮ
Trending

ಲೋಕಸಭೆ ಚುನಾವಣೆ: ಪ್ರಕ್ರಿಯೆಯಿಂದ ತಪ್ಪಿಸಿಕೊಂಡವರಿಗೆ ಶಿಸ್ತು ಕ್ರಮ

By News Desk BenkiyabaleUpdated:February 11, 2019 5:45 pm

 ತುಮಕೂರು: 

      ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾಗಲಿದ್ದು, ಇಲ್ಲದ ಸಬೂಬು ಹೇಳಿ ಚುನಾವಣಾ ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳುವ ಅಧಿಕಾರಿ/ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ: ಕೆ.ರಾಕೇಶ್‍ಕುಮಾರ್ ಸೂಚನೆ ನೀಡಿದರು.

      ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ತುರ್ತು ಚುನಾವಣಾ ವಿಷಯಗಳಿಗೆ ಸಂಬಂಧಿಸಿದಂತೆ ವಿವಿಧ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು ಲೋಕಸಭಾ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗುವ ಎಲ್ಲ ನೋಡಲ್ ಅಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಮತ್ತಿತರ ಅಧಿಕಾರಿಗಳು ಚುನಾವಣಾ ಆಯೋಗದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಚುನಾವಣಾ ಪೂರ್ವ ಸಿದ್ಧತೆ ಬಗ್ಗೆ ನಡೆಯುವ ಎಲ್ಲ ತರಬೇತಿಗಳು ಹಾಗೂ ಸಭೆಗಳಿಗೆ ಕಡ್ಡಾಯವಾಗಿ ಹಾಜರಾಗಬೇಕು. ಸೂಚಿಸಿದ ಚುನಾವಣಾ ಕೆಲಸಗಳನ್ನು ನಿಗಧಿತ ಅವಧಿಯಲ್ಲಿ ಮುಗಿಸಬೇಕು ಎಂದರಲ್ಲದೆ ಯಾವುದೇ ಲೋಪದೋಷಗಳಿಲ್ಲದೆ ಪಾರದರ್ಶಕವಾಗಿ ಚುನಾವಣೆಯನ್ನು ನಡೆಸಲು ಸಿದ್ಧರಾಗಿರಬೇಕು ಎಂದು ಸೂಚಿಸಿದರು.

      ನಿಯೋಜಿತ ಎಲ್ಲ ನೋಡಲ್ ಅಧಿಕಾರಿಗಳು ತಪ್ಪದೇ ತಮ್ಮ ವ್ಯಾಪ್ತಿಯ ಮತಗಟ್ಟೆಗಳಲ್ಲಿ ರ್ಯಾಂಪ್ ವ್ಯವಸ್ಥೆ, ಕಿಟಕಿ-ಬಾಗಿಲುಗಳು ಸುಸ್ಥಿತಿ, ಶೌಚಾಲಯ, ಬೆಳಕು, ನೀರಿನ ವ್ಯವಸ್ಥೆಯಿರುವ ಬಗ್ಗೆ ಭೌತಿಕ ಪರಿಶೀಲನೆ ನಡೆಸಿ ಅಗತ್ಯವಿರುವ ಕಡೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಮತದಾನ ಸಂದರ್ಭದಲ್ಲಿ ಮತಗಟ್ಟೆಗಳಲ್ಲಿ ಆಯಾ ಗ್ರಾಮ ಪಂಚಾಯಿತಿ ವತಿಯಿಂದ ವಿಕಲಚೇತನರಿಗೆ ವ್ಹೀಲ್ ಚೇರ್, ದೃಷ್ಠಿದೋಷವುಳ್ಳವರಿಗೆ ಭೂತಕನ್ನಡಿ ಒದಗಿಸುವ ವ್ಯವಸ್ಥೆ ಮಾಡಬೇಕು. ಮತದಾನ ಕೊಠಡಿಯಲ್ಲಿ ದುರಸ್ತಿಯಲ್ಲಿರುವ ವಿದ್ಯುದ್ದೀಪಗಳನ್ನು ಸರಿಪಡಿಸಲು ಎಲ್ಲ ಪಿಡಿಓಗಳಿಗೆ ಸುತ್ತೋಲೆ ಹೊರಡಿಸಬೇಕೆಂದು ನಿರ್ದೇಶನ ನೀಡಿದರು.

       ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಜಿಲ್ಲೆಯ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದ ಮಾಹಿತಿಯನ್ನು ನನಗೆ ಅಪ್‍ಡೇಟ್ ಮಾಡುತ್ತಿರಬೇಕು. ನೋಡೆಲ್ ಅಧಿಕಾರಿಗಳು ಯಾವುದೇ ಕಾರಣಕ್ಕೂ ರಾಜಕೀಯ ನಾಯಕರ ಅಥವಾ ಯಾವುದೇ ಪಕ್ಷದ ಪರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡುವುದು, ವಿಡಿಯೋಗಳನ್ನು ಪ್ರಸಾರ ಮಾಡುವುದು ಕಂಡು ಬಂದರೆ ಅಂತಹವರನ್ನು ಅಮಾನತ್ತು ಮಾಡಲಾಗುವುದು ಎಂದು ಎಚ್ಚರಿಸಿದರು.

       ಚುನಾವಣಾ ಮಾದರಿ ನೀತಿ ಸಂಹಿತೆಯಡಿ ಮತದಾನ ದಿನದ 48 ಗಂಟೆಗಳ ಮುನ್ನ ರಾಜಕೀಯ ಪಕ್ಷಗಳು ತಮ್ಮ ಪಕ್ಷಕ್ಕೆ ಸಂಬಂಧಿಸಿದ ಪ್ರಚಾರ ಸಾಮಗ್ರಿಗಳನ್ನು ತೆರವುಗೊಳಿಸಬೇಕು. ನೀತಿ ಸಂಹಿತೆ ಜಾರಿ ಅವಧಿಯಲ್ಲಿ ಚುನಾವಣಾ ಪ್ರಚಾರಕ್ಕಾಗಿ ಏರ್ಪಡಿಸುವ ಕಾರ್ಯಕ್ರಮಗಳಿಗಾಗಿ ಬಳಸಲಾಗುವ ಕರಪತ್ರ, ಪೋಸ್ಟರ್, ಹೋರ್ಡಿಂಗ್ಸ್, ಧ್ವನಿವರ್ಧಕಗಳು, ವಿಡಿಯೋ ಚಿತ್ರೀಕರಣ, ಛಾಯಾಚಿತ್ರಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರಲ್ಲದೆ ಚುನಾವಣೆಯನ್ನು ಶಾಂತಿಯುತವಾಗಿ ನಡೆಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ನಡೆಸಲಾಗಿದೆ ಎಂದು ತಿಳಿಸಿದರು.

      ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕೆ. ಚೆನ್ನಬಸಪ್ಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶುಭಾ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೋನ ವಂಶಿಕೃಷ್ಣ, ಚುನಾವಣಾ ತಹಶೀಲ್ದಾರ್ ಮೋಹನ್, ಮತ್ತಿತರೆ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದರು.

 

(Visited 17 times, 1 visits today)
Previous Articleಬಿಜೆಪಿ ಗೆಲುವಿಗೆ ದಲಿತ ಮತಗಳು ಪ್ರಮುಖ ಪಾತ್ರ ವಹಿಸಬೇಕು
Next Article ಪೊಲೀಸ್ ಕಬಡ್ಡಿ ಆಡ್ಬೇಕಾಗುತ್ತೇ : ರೌಡಿಶೀಟರ್‍ಗಳಿಗೆ ಎಸ್ಪಿ ವಾರ್ನಿಂಗ್
News Desk Benkiyabale

Related Posts

ಇ-ಪೌತಿ ಖಾತಾ ಆಂದೋಲನ-೨ ಜಿಲ್ಲಾಧಿಕಾರಿಗಳಿಂದ ಅರ್ಜಿ ಸ್ವೀಕಾರ

June 30, 2026 5:10 pm news

ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ: ಪಿ.ರಘು

June 30, 2026 5:00 pm news

ಹುಳಿಯಾರಿನ ಏಕೈಕ ಶತಮಾನದ ಇತಿಹಾಸದ ಹೆಮ್ಮೆಯ ಕುರುಹು

June 30, 2026 4:58 pm news
ತಾಜಾ ಸುದ್ಧಿಗಳು

ಇ-ಪೌತಿ ಖಾತಾ ಆಂದೋಲನ-೨ ಜಿಲ್ಲಾಧಿಕಾರಿಗಳಿಂದ ಅರ್ಜಿ ಸ್ವೀಕಾರ

June 30, 2026 5:10 pm

ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ: ಪಿ.ರಘು

June 30, 2026 5:00 pm

ಹುಳಿಯಾರಿನ ಏಕೈಕ ಶತಮಾನದ ಇತಿಹಾಸದ ಹೆಮ್ಮೆಯ ಕುರುಹು

June 30, 2026 4:58 pm

ಜನರಿಗೆ ಜಮೀನುಗಳ ಬಗ್ಗೆ ಕಾನೂನು ಅರಿವು ಅತ್ಯವಶ್ಯಕ

June 29, 2026 5:35 pm

ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯಕ್ಕೆ ಖಂಡನೆ

June 29, 2026 5:32 pm

ಇದು ಸಂವಿಧಾನದತ್ತವಾಗಿ ಪಡೆವ ಹಕ್ಕನ್ನು ಕಸಿಯುವ ಬಿಜೆಪಿಯ ಕುತಂತ್ರ

June 29, 2026 5:30 pm
Our Youtube Channel
Our Picks

ಇ-ಪೌತಿ ಖಾತಾ ಆಂದೋಲನ-೨ ಜಿಲ್ಲಾಧಿಕಾರಿಗಳಿಂದ ಅರ್ಜಿ ಸ್ವೀಕಾರ

June 30, 2026 5:10 pm

ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ: ಪಿ.ರಘು

June 30, 2026 5:00 pm

ಹುಳಿಯಾರಿನ ಏಕೈಕ ಶತಮಾನದ ಇತಿಹಾಸದ ಹೆಮ್ಮೆಯ ಕುರುಹು

June 30, 2026 4:58 pm

ಜನರಿಗೆ ಜಮೀನುಗಳ ಬಗ್ಗೆ ಕಾನೂನು ಅರಿವು ಅತ್ಯವಶ್ಯಕ

June 29, 2026 5:35 pm

ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯಕ್ಕೆ ಖಂಡನೆ

June 29, 2026 5:32 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಇ-ಪೌತಿ ಖಾತಾ ಆಂದೋಲನ-೨ ಜಿಲ್ಲಾಧಿಕಾರಿಗಳಿಂದ ಅರ್ಜಿ ಸ್ವೀಕಾರ

By News Desk BenkiyabaleJune 30, 2026 5:10 pm

ತುಮಕೂರು: ಪೌತಿ ಖಾತಾ ಆಂದೋಲನ-೨ರ ಅಂಗವಾಗಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಸೋಮವಾರ ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿ ವ್ಯಾಪ್ತಿಯ…

ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ: ಪಿ.ರಘು

June 30, 2026 5:00 pm

ಹುಳಿಯಾರಿನ ಏಕೈಕ ಶತಮಾನದ ಇತಿಹಾಸದ ಹೆಮ್ಮೆಯ ಕುರುಹು

June 30, 2026 4:58 pm

ಜನರಿಗೆ ಜಮೀನುಗಳ ಬಗ್ಗೆ ಕಾನೂನು ಅರಿವು ಅತ್ಯವಶ್ಯಕ

June 29, 2026 5:35 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.