BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
  • ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ
  • ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ
  • ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ
  • ರೈತರ ಬೃಹತ್ ಪಾದಯಾತ್ರೆಗೆ ಚಾಲನೆ
  • ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ
  • ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತಾಲ್ಲೂಕಿನಾದ್ಯಂತ ಕಳ್ಳತನಗಳ ಮರುಕಳುಸಿವಿಕೆ : ಶಾಸಕ ಅಸಮಾಧಾನ
Trending

ತಾಲ್ಲೂಕಿನಾದ್ಯಂತ ಕಳ್ಳತನಗಳ ಮರುಕಳುಸಿವಿಕೆ : ಶಾಸಕ ಅಸಮಾಧಾನ

By News Desk BenkiyabaleUpdated:February 12, 2019 4:01 pm

ತುರುವೇಕೆರೆ:

      ತಾಲೂಕಿನಾದ್ಯಾಂತ ದೇವಸ್ಥಾನಗಳಲ್ಲಿ ಕಳ್ಳತನಗಳು ಪದೇ ಪದೇ ಮರುಕಳಿಸುತ್ತಿದ್ದರೂ ಪೋಲೀಸ್ ಇಲಾಖೆ ಯಾವುದೇ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳದೆ ಕೈಚಲ್ಲಿ ಕೂತಿದೆ ಎಂದು ಶಾಸಕ ಮಸಾಲೆಜಯರಾಮ್ ಅಸಮಾಧಾನ ವ್ಯಕ್ತಪಡಿಸಿದರು.

      ತಾಲೂಕಿನ ದೇವಾಲಯಗಳಲ್ಲಿ ಸರಣಿಗಳ್ಳತನಗಳು ಮುಂದುವರಿದಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿ ಪತ್ರಿಕಾ ಹೇಳಿಕೆ ನೀಡಿದ ಅವರು,  ತಾಲೂಕಿನಲ್ಲಿ ದಿನೇ ದಿನೇ ದೇವಾಲಯಗಳಲ್ಲಿ ಕಳ್ಳತನಗಳು ಹೆಚ್ಚಾಗುತ್ತಿದ್ದು ದೇವಾಲಯಗಳನ್ನು ಗುರಿಯಾಗಿಸಿಕೊಂಡಿರುವ ಕಳ್ಳರು ದೇವರ ಹುಂಡಿ ಹೊಡೆದು ಹಣ ದೋಚುವುದು ಹಾಗೂ ಬಂಗಾರದ ಒಡವೆಗಳು ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಕಳ್ಳತನ ಮಾಡುತ್ತಿದ್ದಾರೆ. ಒಂದಿಲ್ಲೊಂದು ರೀತಿಯಲ್ಲಿ ತಾಲೂಕಿನ ಸಾರ್ವಜನಿಕರಲ್ಲಿ ಭಯ ಭೀತಿಯನ್ನು ಉಂಟುಮಾಡುವ ಹಂತಕ್ಕೆ ದೇವಾಲಯಗಳಲ್ಲಿ ಕಳ್ಳತನಗಳು ಎಗ್ಗಿಲ್ಲದೆ ಸಾಗಿದೆ ಒಂಟಿ ದೇವಾಲಯಗಳಿನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ, ಕಳ್ಳರೀಗ ಊರೊಳಗಿನ ದೇವಾಲಯಗಳಿಗೂ ಕನ್ನ ಹಾಕುವ ಹಂತಕ್ಕೆ ತಲುಪಿದ್ದಾರೆ ಯಾವುದೊ ಒಂದು ಗ್ಯಾಂಗ್ ಸರಣಿಗಳ್ಳತನಕ್ಕೆ ಇಳಿದಿರುವ ರೀತಿಯಲ್ಲಿ ದೇವಾಲಯಗಳಲ್ಲಿ ಕಳ್ಳತನ ನಡೆಯುತ್ತಿದೆ.  ಕಳೆದವಾರವಷ್ಟೇ ದಂಡಿನಶಿವರ ಪೋಲೀಸ್ ಠಾಣೆಗೆ ಕೂಗಳತೆ ದೂರದಲ್ಲಿರುವ ಹೊನ್ನಾದೇವಿ ದೇವಾಲಯದ ಬೀಗ ಹೊಡೆದು ಲಕ್ಷಾಂತರ ರೂಪಾಯಿಗಳ ಒಡವೆ ದೋಚಿದ್ದಾರೆ, ಅಲ್ಲದೆ ಈಚೆಗೆ ದುಂಡಾ ಗ್ರಾಮದ ಬೊಮ್ಮಲಿಂಗೇಶ್ವರ ದೇವಾಲಯದಲ್ಲಿ ಕಳ್ಳತನಕ್ಕೆ ಮುಂದಾಗಿರುವುದು ಹಾಗೂ ಸಂಪಿಗೆ, ದಬ್ಬೇಗಟ್ಟ, ಮಾಯಸಂದ್ರ ಭಾಗಗಳ ದೇವಾಲಯಗಳಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದ್ದರೂ ಪೋಲೀಸ್ ಇಲಾಖೆ ಮುಂಜಾಗ್ರತಾ ಕ್ರಮ ವಹಿಸುವಲ್ಲಿ ವಿಫಲವಾಗಿದೆ.

       ರಾತ್ರಿಪಾಳಿಯ ಭೀಟ್ ವ್ಯವಸ್ಥೆ ಸಂಪೂರ್ಣ ವಿಫಲವಾಗಿದ್ದು ನಾಮಕಾವಸ್ಥೆ ಕಾಗದಗಳಲ್ಲಿ ಮಾತ್ರ ಬೀಟ್ ವ್ಯವಸ್ಥೆ ಕಾಣಬಹುದಾಗಿದ್ದು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳು ಸೂಕ್ತರೀತಿಯಲ್ಲಿ ಬೀಟ್ ವ್ಯವಸ್ಥೆ ಸರಿಪಡಿಸಬೇಕೆಂದು ಆಗ್ರಹಿಸಿದರಲ್ಲದೆ, ದೇವಾಲಯಗಳ ಆಡಳಿತ ಮಂಡಳಿ ಸೂಕ್ತ ಕಾನೂನು ರೀತಿಯ ಕ್ರಮದ ಮೂಲಕ ದೇವಾಲಯದಲ್ಲಿರುವ ನಗನಾಣ್ಯ ಹಾಗೂ ಬೆಲೆಬಾಳುವ ಆಭರಣಗಳನ್ನು ಬ್ಯಾಂಕಿನಲ್ಲಿಡುವ ಕ್ರಮಕ್ಕೆ ಮುಂದಾಗಿ ಎಂದು ಸಲಹೆ ನೀಡಿದರು.

(Visited 18 times, 1 visits today)
Previous Articleಸಿದ್ದಗಂಗಾ ಮಠಕ್ಕೆ ಶಿವರಾಜ್‍ಕುಮಾರ್ ಭೇಟಿ
Next Article ಸವಿತಾ ಸಮಾಜದ ಜನಾಂಗದವರಿಗೆ ವಿಶೇಷ ಅಭಿವೃದ್ಧಿ ನಿಗಮ ಸ್ಥಾಪನೆ
News Desk Benkiyabale

Related Posts

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm news
ತಾಜಾ ಸುದ್ಧಿಗಳು
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm
news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm
news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm
news

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
news

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
news

ರೈತರ ಬೃಹತ್ ಪಾದಯಾತ್ರೆಗೆ ಚಾಲನೆ

August 07, 2026 4:54 pm
Our Youtube Channel
Our Picks

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

By News Desk BenkiyabaleAugust 07, 2026 5:05 pm

ತುಮಕೂರು: ಮಧುಮೇಹ ರೋಗಿಗಳು ಅನುಭವಿಸುವ ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ,ಸುಧಾರಿತ ವ್ಯಾಸ್ಕ÷್ಯಲರ್ ಚಿಕಿತ್ಸೆಯ ಮೂಲಕ ಅಂಗವೈಕಲ್ಯವನ್ನು ತಡೆಯಬಹುದಾಗಿದೆ ಎಂದು…

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.