BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ
  • ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
  • ೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ
  • ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ
  • ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ
  • ಗುಣಮಟ್ಟದ ಹಾಲು ಶೇಖರಣೆ: ಜಿಲ್ಲೆ ರಾಜ್ಯದಲ್ಲೇ ಪ್ರಥಮ
  • ಸಿದ್ಧಗಂಗಾ ಶ್ರೀಗಳ ಜನ್ಮದಿನೋತ್ಸವ ಆಚರಣೆ
  • ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಮರ್ಪಕ ಬರ ನಿರ್ವಹಣೆಗೆ ಡಿಸಿಎಂ ಸೂಚನೆ
Trending

ಸಮರ್ಪಕ ಬರ ನಿರ್ವಹಣೆಗೆ ಡಿಸಿಎಂ ಸೂಚನೆ

By News Desk BenkiyabaleUpdated:February 23, 2019 4:39 pm

 ತುಮಕೂರು:

      ಜಿಲ್ಲೆಯ ಎಲ್ಲ ತಾಲೂಕುಗಳು ಬರಪೀಡಿತವೆಂದು ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಯಾವುದೇ ನೆಪ ಹೇಳದೆ ಬರ ನಿರ್ವಹಣೆ ಮಾಡಬೇಕೆಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಜಿ. ಪರಮೇಶ್ವರ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

      ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಜಿಲ್ಲೆಯಲ್ಲಿ ಬರ ನಿರ್ವಹಣೆ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ವಿವಿಧ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ ಅವರು ರಾಜ್ಯದ 176 ತಾಲೂಕುಗಳ ಪೈಕಿ 158 ತಾಲೂಕುಗಳು ಬರಪೀಡಿತವಾಗಿವೆ. ಜಿಲ್ಲೆಯ ಐದಾರು ತಾಲೂಕುಗಳು ಬರಪೀಡಿತಕ್ಕೊಳಗಾಗಿದ್ದನ್ನು ಮಾತ್ರ ನಾನು ಕೇಳಿದ್ದೆ. ಮಳೆಯ ಅಭಾವದಿಂದ ಈ ವರ್ಷ ಜಿಲ್ಲೆಯ ಎಲ್ಲ ತಾಲೂಕುಗಳು ಭೀಕರ ಬರಗಾಲಕ್ಕೆ ತುತ್ತಾಗಿವೆ. ಈ ನಿಟ್ಟಿನಲ್ಲಿ ಎಲ್ಲ ಅಧಿಕಾರಿಗಳು ಬರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ ಜನರ ಸಮಸ್ಯೆ ನಿವಾರಣೆಗೆ ಸ್ಪಂದಿಸಬೇಕು ಎಂದು ಸೂಚಿಸಿದರು.

      ಈಗಾಗಲೇ ಬೇಸಿಗೆ ಪ್ರಾರಂಭವಾಗಿದ್ದು, ಮುಂದಿನ ಮೂರು ತಿಂಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರು, ಬೆಳೆ ನಷ್ಟ, ಜಾನುವಾರುಗಳಿಗೆ ಮೇವಿನ ಕೊರತೆ ಕುರಿತು ದೂರು ಬಾರದಂತೆ ಅಧಿಕಾರಿಗಳು ನಿರ್ವಹಣೆ ಮಾಡಬೇಕು. ಬರನಿರ್ವಹಣೆಯನ್ನು ಗಂಭೀರವಾಗಿ ಪರಿಗಣಿಸದಿರುವ ಅಧಿಕಾರಿಗಳ ಮೇಲೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದೆಂದು ಸೂಚನೆ ನೀಡಿದರು.

      ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದಾಗ ಸಂಬಂಧಿಸಿದ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಕೂಡಲೇ ಬಗೆಹರಿಸಿ ನಂತರ ತಾಲೂಕು ಕಾರ್ಯಪಡೆಯಿಂದ ಘಟನೋತ್ತರ ಮಂಜೂರಾತಿ ಪಡೆಯಬೇಕು. ಕುಡಿಯುವ ನೀರಿನ ತುರ್ತು ಕಾಮಗಾರಿ ಕೈಗೊಳ್ಳಲು ಚುನಾವಣೆ ಕೆಲಸದ ಸಬೂಬು ಹೇಳುವಂತಿಲ್ಲ. ಎಲ್ಲ ಕೆಲಸಗಳನ್ನು ಬದಿಗೊತ್ತಿ ಕ್ರಮ ಕೈಗೊಳ್ಳಬೇಕೆಂದರಲ್ಲದೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಪೂರೈಕೆ, ಮತ್ತಿತರ ಬರ ನಿರ್ವಹಣೆ ಕಾರ್ಯಕ್ಕಾಗಿ ನಿಯೋಜಿಸಿರುವ ಅಧಿಕಾರಿಗಳನ್ನು ಚುನಾವಣೆ ಕರ್ತವ್ಯದಿಂದ ಕೈಬಿಡಬೇಕೆಂದು ಜಿಲ್ಲಾಧಿಕಾರಿ ಡಾ|| ಕೆ. ರಾಕೇಶ್ ಕುಮಾರ್ ಅವರಿಗೆ ನಿರ್ದೇಶನ ನೀಡಿದರು.

      ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ನಿರ್ವಹಣೆಗಾಗಿ 2018-19ನೇ ಸಾಲಿನಲ್ಲಿ 356 ಲಕ್ಷ ರೂ. ಬಿಡುಗಡೆಯಾಗಿದ್ದು, ಫೆಬ್ರುವರಿ 18ರವರೆಗೆ 763 ಲಕ್ಷ ರೂ.ಗಳನ್ನು ವೆಚ್ಚ ಮಾಡಲಾಗಿದೆ. ಅಗತ್ಯವಿರುವ ಕಡೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಕೆ. ಅನುಪಮ ಸಚಿವರಿಗೆ ಮಾಹಿತಿ ನೀಡಿದರು.

      ನಂತರ ಮಾತನಾಡಿದ ಸಚಿವರು ಹೊಸದಾಗಿ ಕೊರೆದ ಕೊಳವೆಬಾವಿಗಳಿಗೆ ಇನ್ನು ಪಂಪು ಮೋಟಾರು ಅಳವಡಿಸದಿರುವ ಬಗ್ಗೆ ಜನರಿಂದ ದೂರುಗಳು ಬರುತ್ತಿದ್ದು, ದೂರುಗಳಿಗೆ ಕಾರಣವೇನೆಂದು ಕೇಳಿದಾಗ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಇಂಜಿನಿಯರ್ ಇಫ್ತಿಕಾರ್ ಮಾಹಿತಿ ನೀಡುತ್ತಾ ತುಮಕೂರು ವಿಭಾಗದ ವ್ಯಾಪ್ತಿಯಲ್ಲಿ 2018-19ನೇ ಸಾಲಿನಲ್ಲಿ ಹೊಸದಾಗಿ 1229 ಕೊಳವೆ ಬಾವಿಗಳನ್ನು ಕೊರೆಯಲಾಗಿದೆ. ಈ ಪೈಕಿ 955 ಕೊಳವೆಬಾವಿಗಳು ಸಫಲವಾಗಿದ್ದು, 323 ಕೊಳವೆಬಾವಿಗಳು ವಿಫಲವಾಗಿವೆ. ಹೊಸದಾಗಿ ಕೊಳವೆ ಬಾವಿಗಳನ್ನು ಕೊರೆದ ಕೂಡಲೇ ಪಂಪು ಮೋಟಾರುಗಳನ್ನು ಅಳವಡಿಕೆಗೆ ಕ್ರಮ ವಹಿಸಲಾಗುತ್ತಿದೆ ಎಂದರು.

      ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ ನೀರಿನ ಸಮಸ್ಯೆ ತಲೆದೋರುವ ಗ್ರಾಮಗಳಲ್ಲಿ ತ್ವರಿತವಾಗಿ ಪರಿಹರಿಸಲು ಈಗಾಗಲೇ ಪಿಡಿಓಗಳಿಗೆ ಸೂಚನೆ ನೀಡಲಾಗಿದೆ. ಜಿಲ್ಲೆಯ ತಿಪಟೂರು, ತುರುವೇಕೆರೆ, ಮಧುಗಿರಿ, ಕುಣಿಗಲ್, ಕೊರಟಗೆರೆ, ಪಾವಗಡ, ತುಮಕೂರು ಹಾಗೂ ಸಿರಾ ತಾಲೂಕುಗಳ 54 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಅಲ್ಲದೆ ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದು ನೀರನ್ನು ಒದಗಿಸಲಾಗುತ್ತಿದೆ. ಸಾರ್ವಜನಿಕ ದೂರು ಸಲ್ಲಿಸಲು ಜಿಲ್ಲಾ ಪಂಚಾಯತಿ, ತಾಲೂಕು ಹಾಗೂ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿಯೂ ಸಹಾಯವಾಣಿ ಸ್ಥಾಪಿಸಲಾಗಿದ್ದು, ಈವರೆಗೂ ಸ್ವೀಕೃತವಾದ 313 ದೂರುಗಳ ಪೈಕಿ 310 ದೂರುಗಳಿಗೆ ಸೂಕ್ತ ಕ್ರಮವಹಿಸಲಾಗಿದೆ. ಬರದ ಸಮಸ್ಯೆಗಳನ್ನು ನಿಗಾವಹಿಸಿ ಜಿಲ್ಲಾ ಪಂಚಾಯತಿಗೆ ಸಮನ್ವಯ ಸಾಧಿಸಲು ಜಿಲ್ಲೆಯ ಎಲ್ಲ 50 ಹೋಬಳಿಗಳಿಗೆ ಒಬ್ಬರಂತೆ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ. ನೇಮಕವಾದ ಅಧಿಕಾರಿಗಳು ವಾರಕ್ಕೆರಡು ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಸಮಸ್ಯೆ ಕಂಡುಬಂದಲ್ಲಿ ಕೂಡಲೇ ಜಿಲ್ಲಾಧಿಕಾರಿ ಹಾಗೂ ತಮಗೆ ವರದಿ ಸಲ್ಲಿಸಬೇಕೆಂದು ಸೂಚಿಸಲಾಗಿದೆ ಎಂದು ಸಚಿವರ ಗಮನಕ್ಕೆ ತಂದರಲ್ಲದೆ ಕೊಳವೆ ಬಾವಿಗಳಲ್ಲಿ ನೀರಿನ ಇಳುವರಿ ದಿನೇ ದಿನೇ ಕಡಿಮೆಯಾಗಿ ಬತ್ತಿ ಹೋಗುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿಗಾಗಿ ಸಮಸ್ಯೆ ಉದ್ಭವಿಸಬಹುದಾದ 796 ಗ್ರಾಮಗಳಲ್ಲಿ ಹೊಸ ಕೊಳವೆ ಬಾವಿ, ಮೋಟಾರ್ ಅಳವಡಿಕೆ, ಪೈಪ್ ಲೈನ್ ಕಾಮಗಾರಿಗಳಿಗಾಗಿ 34 ಕೋಟಿ ರೂ.ಗಳ ಹೆಚ್ಚುವರಿ ಅನುದಾನದ ಅಗತ್ಯವಿದೆ ಎಂದು ಮನವಿ ಸಲ್ಲಿಸಿದರು.

      ನರೇಗಾ ಯೋಜನೆಯ ಪ್ರಗತಿ ಪರಿಶೀಲಿಸಿದ ಸಚಿವರು ನಿರೀಕ್ಷಿತ ಪ್ರಗತಿ ಸಾಧಿಸಿಲ್ಲ. ಈ ಯೋಜನೆಯಡಿ ಅಂಗವಾಡಿ ಕಟ್ಟಡ, ಶಾಲಾ ಶೌಚಾಲಯ, ಸಿಸಿ ರಸ್ತೆ, ಕೊಟ್ಟಿಗೆ ನಿರ್ಮಾಣ, ಕೃಷಿ ಹೊಂಡ, ಆಟದ ಮೈದಾನ, ಮತ್ತಿತರ ಕಾಮಗಾರಿಗಳನ್ನು ಕೈಗೊಳ್ಳುವಲ್ಲಿ ಪ್ರಗತಿ ಕುಂಠಿತವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ ಸಚಿವರು ಕೇವಲ 51 ಶಾಲಾ ಶೌಚಾಲಯಗಳನ್ನು ನಿರ್ಮಿಸಲು 44 ಮಾನವ ದಿನಗಳನ್ನು ಬಳಸಿಕೊಂಡು 3 ತಿಂಗಳ ಕಾಲಾವಧಿ ಮುಗಿದಿದ್ದರೂ ಕಾಮಗಾರಿ ಇದುವರೆಗೂ ಪೂರ್ಣಗೊಳ್ಳದೆ ಶೂನ್ಯ ಸಾಧನೆ ತೋರಿಸಲಾಗಿದೆ. ಪ್ರಗತಿ ಕೇಳಿದರೆ ಇಂಜಿನಿಯರ್‍ಗಳು ಕಥೆ ಹೇಳ್ತೀರಾ? ನರೇಗಾ ಯೋಜನೆಯಡಿ ನಿಗಧಿತ ಗುರಿ ಸಾಧಿಸದ ಅಧಿಕಾರಿಗಳ ವಿರುದ್ಧ ಶಿಸ್ತಿನ ಕ್ರಮ ತೆಗೆದುಕೊಳ್ಳುವಂತೆ ಶುಭ ಕಲ್ಯಾಣ ಅವರಿಗೆ ಸೂಚಿಸಿದರು.

      ಬರಪರಿಹಾರಕ್ಕೆ ಸಂಬಂಧಿಸಿದಂತೆ ಅನುದಾನದ ಕೊರತೆಯಿದ್ದರೆ ಕೂಡಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ. ಬರ ನಿರ್ವಹಣೆಗಾಗಿ ಯಾವುದೇ ಹಣದ ಕೊರತೆಯಿಲ್ಲ ಎಂದು ತಿಳಿಸಿದ ಸಚಿವರು ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಬರ ಘೋಷಣೆಯಾಗಿ ಬೇಸಿಗೆ ಬಂದಿದ್ದರೂ, ಈವರೆಗೂ ಮೇವು ಬ್ಯಾಂಕುಗಳ ಟೆಂಡರು ಪ್ರಕ್ರಿಯೆ ಪೂರ್ಣಗೊಂಡಿಲ್ಲದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದಾಗ ಪಶು ಸಂಗೋಪನಾ ಇಲಾಖೆಯ ಉಪನಿರ್ದೇಶಕ ಪ್ರಕಾಶ್ ವರದಿ ನೀಡುತ್ತಾ, ಜಿಲ್ಲೆಯಲ್ಲಿ ಈವರೆಗೂ ಮೇವಿನ ಸಮಸ್ಯೆ ಉಂಟಾಗಿಲ್ಲ. ಇನ್ನು 15 ವಾರಗಳಿಗಾಗುವಷ್ಟು ಮೇವು ದಾಸ್ತಾನು ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಕುಣಿಗಲ್, ಗುಬ್ಬಿ, ತುಮಕೂರು ತಾಲೂಕುಗಳನ್ನು ಹೊರತುಪಡಿಸಿ ಉಳಿದೆಲ್ಲಾ ತಾಲೂಕುಗಳ 24 ಹೋಬಳಿಗಳಲ್ಲಿ ಮೇವು ಬ್ಯಾಂಕ್ ಪ್ರಾರಂಭಿಸಲು ಟೆಂಡರು ಕರೆಯಲಾಗಿದೆ ಹಾಗೂ 2018ರ ಅಕ್ಟೋಬರ್ ಮಾಹೆಯಿಂದ ಜನವರಿ 2019ರವರೆಗೂ ಹಾಲು ಉತ್ಪಾದಕರ ಸಹಕಾರ ಸಂಘಗಳ ಮುಖಾಂತರ ಜಾನುವಾರು ಮಾಲೀಕರಿಗೆ ಮೇವಿನ ಕಿರು ಪೊಟ್ಟಣಗಳನ್ನು ವಿತರಿಸಲಾಗಿದೆ. ಇದರಿಂದ 594437 ಟನ್‍ಗಳಷ್ಟು ಹಸಿರು ಮೇವು ಉತ್ಪಾದನೆಯಾಗಬಹುದೆಂದು ಅಂದಾಜಿಸಲಾಗಿದೆ ಎಂದು ತಿಳಿಸಿದರು.

      ಕೃಷಿ ಜಂಟಿ ನಿರ್ದೇಶಕ ಜಯಸ್ವಾಮಿ ಮಾತನಾಡಿ ಜಿಲ್ಲೆಯಲ್ಲಿ 2018ರ ಮುಂಗಾರು ಹಂಗಾಮಿನಲ್ಲಿ 251234 ಹೆ. ಪ್ರದೇಶದಲ್ಲಿ ಬಿತ್ತನೆ ಕಾರ್ಯ ಕೈಗೊಂಡಿದ್ದು, ಮಳೆ ಕೊರತೆ ಹಾಗೂ ನೀರಿನ ಅಭಾವದಿಂದ 199799 ಹೆ. ಪ್ರದೇಶದ ಬೆಳೆ ಹಾನಿಯಾಗಿದೆ. ಅದೇ ರೀತಿ ಹಿಂಗಾರು ಹಂಗಾಮಿನಲ್ಲಿ ಬಿತ್ತನೆಯಾದ 6044 ಹೆ. ಪ್ರದೇಶದಲ್ಲಿ 3800 ಹೆ. ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಬೆಳೆ ಪರಿಹಾರ ಒದಗಿಸಲು ರೈತರಿಗೆ ಇನ್‍ಪುಟ್ ಸಬ್ಸಿಡಿಗಾಗಿ ಮುಂಗಾರು ಹಾಗೂ ಹಿಂಗಾಮು ಸೇರಿ 126 ಕೋಟಿ ರೂ.ಗಳ ಅನುದಾನದ ಅಗತ್ಯವಿದ್ದು, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು.

      ತೋಟಗಾರಿಕೆ ಉಪನಿರ್ದೇಶಕ ರಘು ಮಾತನಾಡಿ ತೋಟಗಾರಿಕೆ ಬೆಳೆಗಳ ಹಾನಿ ಹಾಗೂ ಪರಿಹಾರದ ಬೇಡಿಕೆ ವಿವರಗಳನ್ನು ಸಚಿವರಿಗೆ ನೀಡಿದರಲ್ಲದೆ 2017ನೇ ಸಾಲಿನ ಬೇಸಿಗೆ ಹಂಗಾಮಿನಲ್ಲಿ ಸತತ ಬರಗಾಲದಿಂದಾಗಿ 346124 ತೆಂಗಿನ ಮರಗಳು ಸಂಪೂರ್ಣವಾಗಿ ಒಣಗಿರುವ/ಅನುತ್ಪಾದಕ ಮರಗಳೆಂದು ಸರ್ವೆ ಕಾರ್ಯದಿಂದ ತಿಳಿದುಬಂದಿದ್ದು, ಇದರಿಂದ 1384 ಲಕ್ಷ ರೂ.ಗಳನ್ನು ನಷ್ಟ ಉಂಟಾಗಿದೆ. ಪರಿಹಾರಕ್ಕಾಗಿ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

      ಸಭೆಯಲ್ಲಿ ಸಂಸದ ಎಸ್.ಪಿ. ಮುದ್ದಹನುಮೇಗೌಡ, ಶಾಸಕ ಜ್ಯೋತಿ ಗಣೇಶ್, ಮೇಯರ್ ಲಲಿತಾ ರವೀಶ್, ಉಪಮೇಯರ್ ರೂಪಶ್ರೀ, ಪಾಲಿಕೆ ಆಯುಕ್ತ ಭೂಬಾಲನ್, ಡಿವೈಎಸ್‍ಪಿ ಡಾ|| ಶೋಭಾರಾಣಿ, ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

(Visited 52 times, 1 visits today)
Previous Articleವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕರೆ
Next Article ಕೊರಟಗೆರೆ : 47 ಕೋಟಿ ರೂ.ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ಡಿಸಿಎಂ ಶಂಕುಸ್ಥಾಪನೆ
News Desk Benkiyabale

Related Posts

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm ತುಮಕೂರು ಜಿಲ್ಲಾ ಸುದ್ಧಿಗಳು

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm ತುಮಕೂರು ಜಿಲ್ಲಾ ಸುದ್ಧಿಗಳು
ತಾಜಾ ಸುದ್ಧಿಗಳು
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm
ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm
ತುಮಕೂರು ಜಿಲ್ಲಾ ಸುದ್ಧಿಗಳು

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
ತುಮಕೂರು ಜಿಲ್ಲಾ ಸುದ್ಧಿಗಳು

ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ

April 03, 2026 4:39 pm
ತುಮಕೂರು ಜಿಲ್ಲಾ ಸುದ್ಧಿಗಳು

ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ

April 03, 2026 4:37 pm
ತುಮಕೂರು ಜಿಲ್ಲಾ ಸುದ್ಧಿಗಳು

ಗುಣಮಟ್ಟದ ಹಾಲು ಶೇಖರಣೆ: ಜಿಲ್ಲೆ ರಾಜ್ಯದಲ್ಲೇ ಪ್ರಥಮ

April 02, 2026 4:11 pm
Our Youtube Channel
Our Picks

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

By News Desk BenkiyabaleApril 03, 2026 4:46 pm

ಬೆಂಗಳೂರು: ಕರ್ನಾಟಕ ರಾಜ್ಯ ವೈದ್ಯಕೀಯ ಲ್ಯಾಬ್ ತಂತ್ರಜ್ಞರ ಸಂಘದ ವತಿಯಿಂದ ಆಯೋ ಜಿಸಲಾದ ವೈದ್ಯಕೀಯ ಲ್ಯಾಬ್ ತಂತ್ರಜ್ಞರ ಸಮ್ಮೇಳನ ಹಾಗೂ…

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm

ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ

April 03, 2026 4:39 pm
News by Date
April 2026
M T W T F S S
 12345
6789101112
13141516171819
20212223242526
27282930  
« Mar    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.