ಬೆಂಗಳೂರು:
ರಾಜ್ಯದ ಐದು ಕ್ಷೇತ್ರಗಳ ಉಪಚುನಾವಣೆಗೆ ಚುನಾವಣಾ ಆಯೋಗ ಸಿದ್ಧವಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸಂಜೀವ್ ಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನ ಚುನಾವಣಾ ಆಯೋಗ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಬಳ್ಳಾರಿ, ಮಂಡ್ಯ, ಶಿವಮೊಗ್ಗ ಲೋಕಸಭೆ ಹಾಗೂ ರಾಮನಗರ, ಜಮಖಂಡಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆಗೆ ಎಲ್ಲಾ ಸಿದ್ಧತೆ ಪೂರ್ಣ ಗೊಂಡಿದೆ.
ರಾಜ್ಯದ ಎರಡು ವಿಧಾನಸಭೆ, ಮೂರು ಲೋಕಸಭಾ ಚುನಾವಣೆಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದ್ದು, 39 ಕೇಂದ್ರಪಡೆಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ನವೆಂಬರ್ 3ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮುಕ್ತ ಹಾಗೂ ನ್ಯಾಯಸಮ್ಮತ ಮತದಾನ ನಡೆಸಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‍ಕುಮಾರ್ ತಿಳಿಸಿದರು.
(Visited 8 times, 1 visits today)
				
		
		
		
	
 
									 
					



