BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬೋರ್ ವೆಲ್ ಹೆಚ್ವು ಆಳಕ್ಕೆ ಕೊರೆಯಬೇಕೆಂದು ಗ್ರಾಮಸ್ಥರ ಒತ್ತಾಯ
  • ಜಿಲ್ಲೆಯಲ್ಲಿ ೧೫೯ ಕೋಟಿ ಬೆಳೆ ನಷ್ಟ: ಕೇಂದ್ರ ತಂಡಕ್ಕೆ ಮನವರಿಕೆ
  • ಬೃಹತ್ ಮೂರ್ತಿಯ ಮೆರವಣಿಗೆ, ಆಕರ್ಷಕ ಕಲಾ ಪ್ರದರ್ಶನ
  • ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ
  • ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ : ಇಡೀ ವಿಶ್ವಕ್ಕೇ ಮಾದರಿ -ಶುಭ ಕಲ್ಯಾಣ್
  • ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ
  • ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ
  • ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ನಾಳೆಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ : 36,196 ಪರೀಕ್ಷಾರ್ಥಿಗಳು
Trending

ನಾಳೆಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ : 36,196 ಪರೀಕ್ಷಾರ್ಥಿಗಳು

By News Desk BenkiyabaleUpdated:March 19, 2019 4:24 pm

 ತುಮಕೂರು:

      ಜಿಲ್ಲೆಯ ತುಮಕೂರು ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಗಳ 36196 ವಿದ್ಯಾರ್ಥಿಗಳು ಮಾರ್ಚ್ 21ರಿಂದ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಬರೆಯಲಿದ್ದಾರೆ ಎಂದು ಡಿಡಿಪಿಐ ಎಂ.ಆರ್.ಕಾಮಾಕ್ಷಿ ತಿಳಿಸಿದ್ದಾರೆ.

141 ಪರೀಕ್ಷಾ ಕೇಂದ್ರ :-

      ಜಿಲ್ಲೆಯ 141(ತುಮಕೂರು-83, ಮಧುಗಿರಿ-58)ಪರೀಕ್ಷಾ ಕೇಂದ್ರಗಳಲ್ಲಿ ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ತುಮಕೂರಿನ 23751(ಬಾಲಕರು-13156, ಬಾಲಕಿಯರು-10595) ಹಾಗೂ ಮಧುಗಿರಿಯ 12445(ಬಾಲಕರು-6572, ಬಾಲಕಿಯರು-5873) ಸೇರಿ ಒಟ್ಟು 36,196 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ.

      ಜಿಲ್ಲೆಯಲ್ಲಿ 141 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಈ ಪೈಕಿ 62 ಕ್ಲಸ್ಟರ್ ಸಹಿತ, 76 ಕ್ಲಸ್ಟರ್ ರಹಿತ ಹಾಗೂ 3 ಖಾಸಗಿ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ತುಮಕೂರು ನಗರದ ವಿದ್ಯಾನಿಕೇತನ ಶಾಲೆ, ಎಸ್.ಐ.ಟಿ.ಯ ವಾಸವಿ ಪ್ರೌಢಶಾಲೆ ಹಾಗೂ ಮಧುಗಿರಿಯ ಜ್ಯೂಪಿಟರ್ ಪಬ್ಲಿಕ್ ಶಾಲೆ ಸೇರಿ 3 ಖಾಸಗಿ ಕೇಂದ್ರಗಳಲ್ಲಿ ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

      ಪರೀಕ್ಷಾ ಅಕ್ರಮಗಳನ್ನು ತಡೆಯಲು ಮುಂಜಾಗ್ರತಾ ಕ್ರಮವಾಗಿ ಎಲ್ಲಾ 141 ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿಯನ್ನು ಅಳವಡಿಸಲಾಗಿದೆ. ಅಲ್ಲದೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಅನುವಾಗುವಂತೆ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ಮತ್ತಿತರ ಮೂಲಭೂತ ಸೌಕರ್ಯಗಳನ್ನು ಒದಗಿಸುವುದರೊಂದಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಪ್ರತಿ ಪರೀಕ್ಷಾ ಕೇಂದ್ರಗಳಿಗೂ ತಲಾ ಒಬ್ಬ ಆರೋಗ್ಯ ಸಹಾಯಕರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಪರೀಕ್ಷಾ ಕೇಂದ್ರದ ವೀಕ್ಷಕರನ್ನಾಗಿ ನಿಯೋಜಿಸಲಾಗಿದೆ. ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸುವ ನಿಟ್ಟಿನಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಹಂತಗಳಲ್ಲಿ ಜಾಗೃತ ದಳಗಳನ್ನು ರಚಿಸಲಾಗಿದೆ. ಅಲ್ಲದೆ ಪ್ರತಿ ಪರೀಕ್ಷಾ ಕೇಂದ್ರಗಳಿಗೂ ಸ್ಥಾನಿಕ ಜಾಗೃತ ದಳಗಳನ್ನು ನಿಯೋಜಿಸಲಾಗಿದೆ.

      ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶವಾಗದಂತೆ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಎಲ್ಲಾ ರೀತಿಯ ಸಿದ್ಧತೆಯನ್ನು ಕೈಗೊಳ್ಳಲಾಗಿದೆ ಹಾಗೂ ನಿರಂತರ ವಿದ್ಯುತ್ ಕಲ್ಪಿಸಲು ಬೆಸ್ಕಾಂ ಸಂಸ್ಥೆಗೆ ಮನವಿ ಮಾಡಲಾಗಿದೆ. ವಿಕಲಚೇತನ ಮಕ್ಕಳಿಗೆ ನೆಲಹಂತದಲ್ಲಿಯೇ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ.

      ವಿದ್ಯಾರ್ಥಿಗಳು ಯಾವುದೇ ರೀತಿಯ ಭಯ-ಭೀತಿಗೊಳಗಾಗದೆ ಪರೀಕ್ಷೆಯನ್ನು ಶಾಂತ ರೀತಿಯಿಂದ ಬರೆಯಬೇಕು. ಪರೀಕ್ಷಾ ಅವಧಿಯಲ್ಲದೆ ಪ್ರಶ್ನೆ ಪತ್ರಿಕೆಯನ್ನು ಓದಲು 15 ನಿಮಿಷ ಕಾಲಾವಕಾಶವನ್ನು ನಿಗಧಿಪಡಿಸಲಾಗಿದೆ. ಪ್ರಶ್ನೆ ಪತ್ರಿಕೆಯನ್ನು ಓದಿ ಅಂಕಗಳನ್ನು ಆಧರಿಸಿ ಉತ್ತರವನ್ನು ಬರೆಯಬೇಕು. ಪರೀಕ್ಷಾ ಕೇಂದ್ರಗಳಿಗೆ ಮುಖ್ಯ ಅಧೀಕ್ಷಕರನ್ನು ಹೊರತುಪಡಿಸಿ ಯಾರೊಬ್ಬರಿಗೂ ಮೊಬೈಲ್ ಬಳಕೆಗೆ ಅವಕಾಶವಿಲ್ಲ. ಸ್ಮಾರ್ಟ್ ವಾಚ್/ ಎಲೆಕ್ಟ್ರಾನಿಕ್ ವಾಚ್‍ಗಳನ್ನು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತರುವಂತಿಲ್ಲ.

ಏಪ್ರಿಲ್ 10 ರಿಂದ ಮೌಲ್ಯಮಾಪನ ಕಾರ್ಯ :-

      ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ ಮುಗಿದ ನಂತರ ನಗರದ 6 ಕೇಂದ್ರಗಳಲ್ಲಿ ಏಪ್ರಿಲ್ 10 ರಿಂದ ಮೌಲ್ಯಮಾಪನ ಕಾರ್ಯ ನಡೆಯಲಿದೆ. ಮೌಲ್ಯ ಮಾಪನ ಕಾರ್ಯಕ್ಕೆ ನಿಯೋಜಿಸಲಾಗಿರುವ ಶಿಕ್ಷಕರು ಕಡ್ಡಾಯವಾಗಿ ಹಾಜರಾಗಬೇಕು. ಸುಮಾರು 2500 ಶಿಕ್ಷಕರನ್ನು ಮೌಲ್ಯ ಮಾಪನ ಕಾರ್ಯಕ್ಕೆ ನಿಯೋಜಿಸಲಾಗಿದೆ. ಮೌಲ್ಯ ಮಾಪನ ಕೇಂದ್ರದಲ್ಲಿ ಈ ಬಾರಿ “ಆನ್‍ಲೈನ್ ಪೋರ್ಟಿಂಗ್” ವ್ಯವಸ್ಥೆ ಮಾಡಲಾಗಿದ್ದು, ಇದಕ್ಕಾಗಿ 15 ಲ್ಯಾಪ್‍ಟಾಪ್‍ಗಳನ್ನು ಅಳವಡಿಸಲಾಗುವುದು. ಮೌಲ್ಯ ಮಾಪನದ ಪ್ರತಿ ದಿನದ ಮಾಹಿತಿಯನ್ನು ಆನ್‍ಲೈನ್ ಪೋರ್ಟಿಂಗ್ ಮೂಲಕ ಮಂಡಳಿಗೆ ನೀಡಲಾಗುವುದು.

ಪರೀಕ್ಷಾ ವೇಳಾ ಪಟ್ಟಿ:-

      ಜಿಲ್ಲೆಯಲ್ಲಿ ಮಾರ್ಚ್ 21ರಂದು ಪ್ರಥಮ ಭಾಷೆ(ಕನ್ನಡ, ಉರ್ದು, ಇಂಗ್ಲೀಷ್, ಸಂಸ್ಕೃತ; ಮಾ.23ರಂದು ಅರ್ಥಶಾಸ್ತ್ರ; ಮಾ.25ರಂದು ಗಣಿತ ಹಾಗೂ ಸಮಾಜಶಾಸ್ತ್ರ; ಮಾ.27ರಂದು ದ್ವಿತೀಯ ಭಾಷೆ (ಕನ್ನಡ, ಇಂಗ್ಲೀಷ್); ಮಾ. 29ರಂದು ಸಮಾಜ ವಿಜ್ಞಾನ; ಏಪ್ರಿಲ್ 2ರಂದು ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ/ ಹಿಂದೂಸ್ಥಾನಿ ಸಂಗೀತ; ಏಪ್ರಿಲ್ 4ರಂದು ತೃತೀಯ ಭಾಷೆ(ಹಿಂದಿ, ಕನ್ನಡ, ಸಂಸ್ಕೃತ)ಪರೀಕ್ಷೆ ಹಾಗೂ ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್‍ನೆಸ್ ವಿಷಯದಲ್ಲಿ ಎನ್‍ಎಸ್‍ಕ್ಯೂಎಫ್(ನ್ಯಾಷನಲ್ ಸ್ಕಿಲ್ ಕ್ವಾಲಿಫಿಕೇಷನ್ ಫ್ರೇಮ್ ವರ್ಕ್) ಪರೀಕ್ಷೆಗಳು ನಡೆಯಲಿವೆ. ತೃತೀಯ ಭಾಷೆ ಬದಲಿಗೆ ಎನ್‍ಎಸ್‍ಕ್ಯೂಎಫ್ ಪರೀಕ್ಷೆ ಬರೆಯುವವರಿಗಾಗಿ ತುಮಕೂರು ನಗರದ ಎಂಪ್ರೆಸ್ ಹಾಗೂ ಸರ್ಕಾರಿ ಜ್ಯೂನಿಯರ್ ಕಾಲೇಜು, ತಿಪಟೂರು ತಾಲ್ಲೂಕಿನ ನೊಣವಿನಕೆರೆ ಸರ್ಕಾರಿ ಜ್ಯೂನಿಯರ್ ಕಾಲೇಜಿನಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
 
 

(Visited 48 times, 1 visits today)
Previous Articleಜ್ಞಾನದ ಸಂಪತ್ತಿಗಿಂತ ಮಿಗಿಲಾದುದು ಬೇರಾವುದೂ ಇಲ್ಲ – ಶ್ರೀ ಶ್ರೀ ಕರಿವೃಷಭ ದೇಶೀಕೇಂದ್ರ ಮಹಾ ಸ್ವಾಮಿ
Next Article ಕೊರಟಗೆರೆ : ಗರ್ಭಕೋಶ ಸುತ್ತಲಿದ್ದ 2ಕೆಜಿ 650ಗ್ರಾಂ ಗೆಡ್ಡೆ ಹೊರತೆಗೆದ ಸರ್ಕಾರಿ ಆಸ್ಪತ್ರೆ ವೈದ್ಯರು
News Desk Benkiyabale

Related Posts

ಬೋರ್ ವೆಲ್ ಹೆಚ್ವು ಆಳಕ್ಕೆ ಕೊರೆಯಬೇಕೆಂದು ಗ್ರಾಮಸ್ಥರ ಒತ್ತಾಯ

October 03, 2026 5:36 pm news

ಜಿಲ್ಲೆಯಲ್ಲಿ ೧೫೯ ಕೋಟಿ ಬೆಳೆ ನಷ್ಟ: ಕೇಂದ್ರ ತಂಡಕ್ಕೆ ಮನವರಿಕೆ

October 03, 2026 5:35 pm news

ಬೃಹತ್ ಮೂರ್ತಿಯ ಮೆರವಣಿಗೆ, ಆಕರ್ಷಕ ಕಲಾ ಪ್ರದರ್ಶನ

October 03, 2026 5:32 pm news
ತಾಜಾ ಸುದ್ಧಿಗಳು
news

ಬೋರ್ ವೆಲ್ ಹೆಚ್ವು ಆಳಕ್ಕೆ ಕೊರೆಯಬೇಕೆಂದು ಗ್ರಾಮಸ್ಥರ ಒತ್ತಾಯ

October 03, 2026 5:36 pm
news

ಜಿಲ್ಲೆಯಲ್ಲಿ ೧೫೯ ಕೋಟಿ ಬೆಳೆ ನಷ್ಟ: ಕೇಂದ್ರ ತಂಡಕ್ಕೆ ಮನವರಿಕೆ

October 03, 2026 5:35 pm
news

ಬೃಹತ್ ಮೂರ್ತಿಯ ಮೆರವಣಿಗೆ, ಆಕರ್ಷಕ ಕಲಾ ಪ್ರದರ್ಶನ

October 03, 2026 5:32 pm
news

ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ

October 02, 2026 6:41 pm
news

ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ : ಇಡೀ ವಿಶ್ವಕ್ಕೇ ಮಾದರಿ -ಶುಭ ಕಲ್ಯಾಣ್

October 02, 2026 6:39 pm
news

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm
Our Youtube Channel
Our Picks

ಬೋರ್ ವೆಲ್ ಹೆಚ್ವು ಆಳಕ್ಕೆ ಕೊರೆಯಬೇಕೆಂದು ಗ್ರಾಮಸ್ಥರ ಒತ್ತಾಯ

October 03, 2026 5:36 pm

ಜಿಲ್ಲೆಯಲ್ಲಿ ೧೫೯ ಕೋಟಿ ಬೆಳೆ ನಷ್ಟ: ಕೇಂದ್ರ ತಂಡಕ್ಕೆ ಮನವರಿಕೆ

October 03, 2026 5:35 pm

ಬೃಹತ್ ಮೂರ್ತಿಯ ಮೆರವಣಿಗೆ, ಆಕರ್ಷಕ ಕಲಾ ಪ್ರದರ್ಶನ

October 03, 2026 5:32 pm

ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ

October 02, 2026 6:41 pm

ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ : ಇಡೀ ವಿಶ್ವಕ್ಕೇ ಮಾದರಿ -ಶುಭ ಕಲ್ಯಾಣ್

October 02, 2026 6:39 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಬೋರ್ ವೆಲ್ ಹೆಚ್ವು ಆಳಕ್ಕೆ ಕೊರೆಯಬೇಕೆಂದು ಗ್ರಾಮಸ್ಥರ ಒತ್ತಾಯ

By News Desk BenkiyabaleOctober 03, 2026 5:36 pm

ತುರುವೇಕೆರೆ: ಗ್ರಾಮಕ್ಕೆ ಕುಡಿಯುವ ನೀರಿಗಾಗಿ ಕೊರೆಯುತ್ತಿದ್ದ ಹೊಸ ಬೋರ್ ವೆಲ್ ನ್ನು ಹೆಚ್ವು ಆಳಕ್ಕೆ ಕೊರೆಯಬೇಕು ಎಂದು ಒತ್ತಾಯಿಸಿ ತಾಲೂಕಿನ…

ಜಿಲ್ಲೆಯಲ್ಲಿ ೧೫೯ ಕೋಟಿ ಬೆಳೆ ನಷ್ಟ: ಕೇಂದ್ರ ತಂಡಕ್ಕೆ ಮನವರಿಕೆ

October 03, 2026 5:35 pm

ಬೃಹತ್ ಮೂರ್ತಿಯ ಮೆರವಣಿಗೆ, ಆಕರ್ಷಕ ಕಲಾ ಪ್ರದರ್ಶನ

October 03, 2026 5:32 pm

ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ

October 02, 2026 6:41 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.